ಕೋಟ್ಯಂತರ ರೂಪಾಯಿ ವ್ಯಯಿಸಿ 15 ಲಕ್ಷ ಸಸಿ ನೆಟ್ಟ ಬಿಡಿಎ ನೀರು ಹಾಕುವುದನ್ನು ಮರೆಯಿತೇ?

Date:

ಸಿಲಿಕಾನ್ ಸಿಟಿಯಲ್ಲಿ ಹಸಿರು ಪರಿಸರ ಹೆಚ್ಚಿಸುವ ಉದ್ದೇಶದಿಂದ ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಬರೋಬ್ಬರಿ 15 ಲಕ್ಷ ಗಿಡಗಳನ್ನು ನೆಟ್ಟಿತ್ತು. ಈ ಬೃಹತ್ ಅಭಿಯಾನವೇನೋ ನಡೆದು ಈಗ ಕೆಲವು ದಿನಗಳು ಕಳೆದಿದೆ. ಆದರೆ, “ಗಿಡ ನೆಡುವುದು ಸಣ್ಣ ಕೆಲಸ, ಅದನ್ನು ಬೆಳೆಸುವುದು ದೊಡ್ಡ ಕೆಲಸ” ಎಂಬ ಜನಪ್ರಿಯ ಗಾದೆಯನ್ನು ಬಿಡಿಎ ಮರೆತಂತಿದೆ.

- Advertisement -

ಗಿಡಗಳನ್ನು ನೆಟ್ಟು ಕೈತೊಳೆದುಕೊಂಡ ಅಧಿಕಾರಿಗಳು, ಅವುಗಳಿಗೆ ನಿಯಮಿತವಾಗಿ ನೀರುಣಿಸಲು ಮರೆತಿರುವ ಕಾರಣ ಸಾವಿರಾರು ಸಸಿಗಳು ಈಗ ಒಣಗಿ ಕಡ್ಡಿಯಾಗುತ್ತಿವೆ ಎಂಬ ಆರೋಪಗಳು ಕೇಳಿಬಂದಿದೆ. ಸದ್ಯ ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳಿಂದ ಬಿಡಿಎ ಅಧಿಕಾರಿಗಳ ಈ ಬೇಜವಾಬ್ದಾರಿತನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನೂ ಓದಿ: ʼಕಾಂಕ್ರೀಟ್‌ʼ ಮಾಡುವ ಗಾಯಕ್ಕೆ ಜಪಾನಿ ʼಮಿಯಾವಾಕಿʼಯೇ ಮದ್ದು!

ಗಿನ್ನೆಸ್ ವಿಶ್ವ ದಾಖಲೆ ಬರೆದ ಅಭಿಯಾನ

2026ರ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತ್ಯುತ್ಸವದ ಅಂಗವಾಗಿ ಬಿಡಿಎ ಕೇವಲ 12 ಗಂಟೆಗಳ ಅವಧಿಯಲ್ಲಿ ಭರ್ಜರಿ 15 ಲಕ್ಷ ಸಸಿಗಳನ್ನು ನೆಡುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಿತ್ತು. ಈ ಸಾಧನೆಗಾಗಿ ಗಿನ್ನೆಸ್ ವಿಶ್ವ ದಾಖಲೆಯ ನಿರ್ಣಾಯಕರಾದ ರಿಷಿ ನಾಥ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದರು. ಒಟ್ಟು ಸಸಿಗಳಲ್ಲಿ 12.5 ಲಕ್ಷ ಸ್ಥಳೀಯ ಜಾತಿಯ ದೊಡ್ಡ ಮರಗಳು ಹಾಗೂ 2.5 ಲಕ್ಷ ಪೊದೆಸಸ್ಯಗಳನ್ನು (ಮಾವು, ಹಲಸು, ಬೇವು ಇತ್ಯಾದಿ) ಬಳಸಲಾಗಿ

ಈ ಅಭಿಯಾನದಲ್ಲಿ ಸುಮಾರು 50,000ಕ್ಕೂ ಹೆಚ್ಚು ಸ್ವಯಂಸೇವಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಕಾಡನ್ನು ಶೀಘ್ರವಾಗಿ ಬೆಳೆಸುವ ಜಪಾನಿನ ಪ್ರಸಿದ್ಧ ಮಿಯಾವಾಕಿ ತಂತ್ರಜ್ಞಾನವನ್ನು ಬಳಸಿ ಸಸಿಗಳನ್ನು ನಾಟಿ ಮಾಡಲಾಗಿತ್ತು. ನಾಡಪ್ರಭು ಕೆಂಪೇಗೌಡ ಬಡಾವಣೆ, ಡಾ. ಶಿವರಾಮ ಕಾರಂತ ಬಡಾವಣೆ, ಬನಶಂಕರಿ 6ನೇ ಹಂತ ಮತ್ತು ನಗರದ ಪ್ರಮುಖ ಕೆರೆಗಳ ಬಫರ್ ವಲಯಗಳು ಸೇರಿದಂತೆ ಸುಮಾರು 244 ಎಕರೆ ಜಾಗದಲ್ಲಿ ಸಸಿಗಳನ್ನು ನೆಡಲಾಗಿತ್ತು.

ಸಸಿಗಳನ್ನು ನೆಟ್ಟ ಕೇವಲ 10 ದಿನಗಳಲ್ಲಿ ಸೂಕ್ತ ನಿರ್ವಹಣೆ ಮತ್ತು ನೀರಿಲ್ಲದೆ ಲಕ್ಷಾಂತರ ಸಸಿಗಳು ಒಣಗಿ ಹೋಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿದೆ. ವಿಪಕ್ಷ ಬಿಜೆಪಿ ಈ ವಿಚಾರವನ್ನೇ ಮುಂದಿಟ್ಟುಕೊಂಡು ರಾಜಕೀಯಕ್ಕೆ ಇಳಿದಿದೆ.

ಗಿಡಗಳಿಗೆ ನೀರು ಹಾಕಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳದ ಕಾರಣ, ಬಿಸಿಲಿಗೆ ಬಹುತೇಕ ಸಸಿಗಳು ಒಣಗಿ ಹೋಗಿವೆ. ಕೆಲವು ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗುತ್ತಿಗೆ ನೀಡಲಾಗಿದ್ದರೂ, ಗುತ್ತಿಗೆದಾರರು ಸರಿಯಾಗಿ ನೀರು ಹಾಕುತ್ತಿಲ್ಲ ಎಂಬ ಆರೋಪಗಳೂ ಕೇಳಿಬಂದಿದೆ.

ಇದನ್ನೂ ಓದಿ: ‘2 ಲಕ್ಷ ಮರಗಳಿಗೆ ಆಪತ್ತು’; ರಾಹುಲ್ ಅಂಗಳಕ್ಕೆ ಬಿಡದಿ ಟೌನ್‌ಶಿಪ್‌ ಹೋರಾಟ!

“ಕೇವಲ ದಾಖಲೆಗಳಲ್ಲಿ ಮತ್ತು ಫೋಟೋ ಸೆಷನ್‌ಗಳಿಗಾಗಿ ಗಿಡ ನೆಡುವ ನಾಟಕ ಆಡುವುದನ್ನು ಬಿಡಿಎ ನಿಲ್ಲಿಸಬೇಕು. ಕೋಟ್ಯಂತರ ರೂಪಾಯಿ ವೆಚ್ಚದ ಈ ಯೋಜನೆ ಕೇವಲ ಗುತ್ತಿಗೆದಾರರ ಜೇಬು ತುಂಬಿಸಲು ಬಳಕೆಯಾಗುತ್ತಿದೆಯೇ ವಿನಃ ಬೆಂಗಳೂರಿನ ಪರಿಸರ ಸುಧಾರಣೆಗಲ್ಲ” ಎಂದು ಪರಿಸರವಾದಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ಸಮಜಾಯಿಷಿ ಏನು?

ಈ ಕುರಿತು ಬಿಡಿಎ ಹಿರಿಯ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. “ಕೆಲವು ಭಾಗಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವುದು ನಿಜ. ಆದರೆ ಎಲ್ಲಾ ಗಿಡಗಳು ಒಣಗಿಲ್ಲ. ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ಒಣಗಿದ ಜಾಗದಲ್ಲಿ ಮರು ಸಸಿಗಳನ್ನು ನೆಡಲಾಗುವುದು” ಎಂದು ಉತ್ತರಿಸಿದ್ದಾರೆ.

ಇನ್ನು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್, ಹೊಸದಾಗಿ ನೆಟ್ಟ ಸಸಿಗಳು ಆರಂಭದಲ್ಲಿ ಪರಿಸರಕ್ಕೆ ಹೊಂದಿಕೊಳ್ಳುವಾಗ ಸ್ವಲ್ಪ ಬಾಡಿದಂತೆ ಕಾಣುವುದು ಸಹಜ. ಮರಗಳ ದೀರ್ಘಕಾಲೀನ ನಿರ್ವಹಣೆಗೆ ವೈಜ್ಞಾನಿಕ ಮೇಲ್ವಿಚಾರಣೆ ಹಾಗೂ ಹನಿ ನೀರಾವರಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಆದರೆ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ, ಈ 15 ಲಕ್ಷ ಗಿಡಗಳ ಯೋಜನೆಯ “ಬದುಕುಳಿಯುವಿಕೆಯ ಪ್ರಮಾಣ” ಕುರಿತು ತೃತೀಯ ಜಂಟಿ ತನಿಖೆ ನಡೆಸಬೇಕು ಎಂಬ ಆಗ್ರಹ ಕೇಳಿಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...