ರಾಜಧಾನಿ ಬೆಂಗಳೂರಿನಲ್ಲಿ ಸ್ವಯಂ ಜನಗಣತಿಗೆ ನೀರಸ ಪ್ರತಿಕ್ರಿಯೆ

Date:

ಕೇಂದ್ರ ಸರ್ಕಾರದ ಸ್ವಯಂ ಜನಗಣತಿ ಅಭಿಯಾನಕ್ಕೆ ಬೆಂಗಳೂರು ನಗರದ ನಾಗರಿಕರಿಂದ ನಿರೀಕ್ಷಿತ ಮಟ್ಟದ ಪ್ರತಿಕ್ರಿಯೆ ಸಿಗದೆ ಇರುವುದು ಹುಬ್ಬೇರಿಸುವಂತೆ ಮಾಡಿದೆ.

- Advertisement -

ನಗರದಲ್ಲಿ ಇದುವರೆಗೆ ಕೇವಲ 0.93% ಮಂದಿ ಮಾತ್ರ ಸ್ವಯಂ ಗಣತಿ ಪೂರ್ಣಗೊಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಲ್ಲಿ ಒಟ್ಟಾರೆ 32,907 ಮಂದಿ ಮಾತ್ರ ಭಾಗವಹಿಸಿರುವುದು ಗಮನಾರ್ಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಪೂರ್ವ, ಪಶ್ಚಿಮ, ದಕ್ಷಿಣ ಮತ್ತು ಉತ್ತರ ಪಾಲಿಕೆಗಳಲ್ಲಿ ಕಡಿಮೆ ಪಾಲ್ಗೊಳ್ಳುವಿಕೆ ಕಂಡುಬಂದಿದೆ. ಈ ಸಂಬಂಧಿಸಿದಂತೆ ಜಾಗೃತಿ ಅಭಿಯಾನಗಳು ನಡೆದಿದ್ದರೂ ನಿರೀಕ್ಷೆಯ ಮಟ್ಟಕ್ಕೆ ಪ್ರತಿಕ್ರಿಯೆ ತಲುಪಿಲ್ಲ. ಮನೆಮನೆಗೆ ಭೇಟಿ ಮತ್ತು ಸೋಷಿಯಲ್ ಮೀಡಿಯಾ ಪ್ರಚಾರವೂ ಪರಿಣಾಮಕಾರಿಯಾಗಿಲ್ಲ. ತಾಂತ್ರಿಕ ಸಮಸ್ಯೆಗಳು ಹಾಗೂ ಆಪ್ ಬಳಕೆ ಕಷ್ಟ ಎಂಬ ದೂರುಗಳು ಕೇಳಿ ಬಂದಿವೆ ಎಂದು ತಿಳಿದು ಬಂದಿರುವುದು ಮಾತ್ರವಲ್ಲದೆ, ಡೇಟಾ ಗೌಪ್ಯತೆ ಬಗ್ಗೆ ನಾಗರಿಕರಲ್ಲಿ ಆತಂಕ ವ್ಯಕ್ತವಾಗಿದೆ.

ಸ್ವಯಂ ಗಣತಿ ಸ್ಪಂದನೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ಪಾಲಿಕೆ ಆಯುಕ್ತರು ಕನಿಷ್ಠ ಇನ್ನೊಂದು ತಿಂಗಳು ಅವಧಿ ವಿಸ್ತರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಸಂಗೀತಪ್ರೇಮಿಗಳ ಎದೆತಣಿಸಿದ ಅಸಲಿ ಪ್ರತಿಭೆ ಆಶಾ ಭೋಸ್ಲೆ

ಮುಂದಿನ ಕ್ರಮದ ಭಾಗವಾಗಿ, ಐಟಿ ಕಂಪನಿಗಳು ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ಜಾಗೃತಿ ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರುನಲ್ಲಿ ಪ್ರತಿಕ್ರಿಯೆ ಬಹಳ ಕಡಿಮೆ.

ಬಳ್ಳಾರಿ – 11.84%, ಬಾಗಲಕೋಟೆ – 10.98%, ದಕ್ಷಿಣ ಕನ್ನಡ – 10.13% ಮಂದಿ ಸ್ವಯಂ ಗಣತಿಯಲ್ಲಿ ಪಾಲ್ಗೊಂಡಿದ್ದಾರೆ. ಸ್ವಯಂ ಜನಗಣತಿ ಕುರಿತು ಜಾಗೃತಿ ಇದ್ದರೂ ಪಾಲ್ಗೊಳ್ಳುವಿಕೆ ಕಡಿಮೆ ಇರುವುದರಿಂದ, ಮುಂದಿನ ದಿನಗಳಲ್ಲಿ ಆಡಳಿತಾತ್ಮಕ ಒತ್ತಡ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....