ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್, ಬೆಟ್ಟಿಂಗ್ ಚಟುವಟಿಕೆಗೆ ಹೈಕೋರ್ಟ್ ನಿಷೇಧ

Date:

ಬೆಂಗಳೂರು ಟರ್ಫ್‌ ಕ್ಲಬ್‌ನಲ್ಲಿ(ಬಿಟಿಸಿ) ಆನ್‌ ಕೋರ್ಸ್‌, ಆಫ್‌ ಕೋರ್ಸ್‌ ರೇಸ್‌ ಹಾಗೂ ಬೆಟ್ಟಿಂಗ್‌ ಚಟುವಟಿಕೆಗಳಿಗೆ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠ ನಿಷೇಧ ಹೊರಡಿಸಿದೆ.

- Advertisement -

ಬಿಟಿಸಿಯಲ್ಲಿ ರೇಸಿಂಗ್‌ ಹಾಗೂ ಬೆಟ್ಟಿಂಗ್‌ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಏಕ ಸದಸ್ಯತ್ವ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಪರಿಗಣಿಸಿ ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಿಟಿಸಿಯಲ್ಲಿ ಪರವಾನಗಿ ನಿಯಂತ್ರಣಗಳು, ಅರ್ಜಿಯ ಸ್ಥಿತಿಗತಿಗಳು ಹಾಗೂ ನಿಯಮಗಳನ್ನು ಗಂಭೀರವಾಗಿ ಉಲ್ಲಂಘಿಸಲಾಗಿದೆ ಎಂದು ರಾಜ್ಯ ಸರ್ಕಾರ ಜೂನ್‌ 6ರಂದು ಹೊರಡಿಸಿದ ಆದೇಶದಲ್ಲಿ ದಾಖಲಿಸಿತ್ತು. ಸಿಸಿಬಿ ತನಿಖೆ ಕೂಡ ಬಾಕಿಯುಳಿದಿದ್ದು, ಸಕ್ಷಮ ತೆರಿಗೆ ಪ್ರಾಧಿಕಾರ ಕೂಡ ತೆರಿಗೆ ವಂಚನೆ ಸೇರಿದಂತೆ ಹಲವು ಅಕ್ರಮಗಳು ಬಾಕಿಯುಳಿದಿವೆ ಎಂದು ತಿಳಿಸಿರುವುದನ್ನು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಳಪೆ ಫಲಿತಾಂಶಕ್ಕೆ ಸಿ ಎಂ ಸಿಟ್ಟಾದರೆ ಸಾಲದು, ಶಿಕ್ಷಣ ಇಲಾಖೆಗೆ ಬಿಸಿ ಮುಟ್ಟಿಸಬೇಕು

ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಿಟಿಸಿ, ಕರ್ನಾಟಕ ರೇಸ್‌ ಕುದುರೆಗಳ ಮಾಲೀಕರ ಸಂಘ, ಕರ್ನಾಟಕ ತರಬೇತಿದಾರರ ಸಂಘ, ಪಂಟರ್‍‌ಗಳು ಹಾಗೂ ಜಾಕಿಗಳ ಸಂಘ ಪರವಾನಗಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು.

ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠದಿಂದ, 2024ರ ಮಾರ್ಚ್‌ ತಿಂಗಳಲ್ಲಿ ಆನ್‌ ಕೋರ್ಸ್‌ ಮತ್ತು ಆಫ್‌ ಕೋರ್ಸ್‌ ಕುದುರೆ ಪಂದ್ಯ ಮತ್ತು ಬೆಟ್ಟಿಂಗ್‌ ಚಟುವಟಿಕೆಗಳನ್ನು ನಡೆಸಲು ಸರ್ಕಾರ ನೀಡಿದ್ದ ಪರವಾನಗಿಯ ಷರತ್ತಿನಂತೆ ಕುದುರೆ ರೇಸ್ ಆಯೋಜಿಸಬಹುದು ಎಂದು ಮಧ್ಯಂತರ ಆದೇಶ ನೀಡಿದ್ದರು. ಇದರ ಬೆನ್ನಲ್ಲಿಯೇ ಈಗ ಕುದುರೆ ರೇಸ್ ಆಯೋಜನೆಗೆ ತಡೆಯೊಡ್ಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...