ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣ ಶೇ.36ರಷ್ಟು ಏರಿಕೆ; ಬೆಂಗಳೂರಿನಲ್ಲಿ ಆರು ತಿಂಗಳಲ್ಲಿ 13,800ಕ್ಕೂ ಅಧಿಕ ಕೇಸ್

Date:

ಕಳೆದ ಆರು ತಿಂಗಳಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 13,831 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಮೇ ತಿಂಗಳಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು(2,562) ದಾಖಲಾಗಿದ್ದರೆ, ಫೆಬ್ರವರಿಯಲ್ಲಿ ಕನಿಷ್ಠ 1,883 ಪ್ರಕರಣಗಳು ದಾಖಲಾಗಿವೆ. 2024ರ ಮೊದಲಾರ್ಧಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ರಾಜ್ಯದಲ್ಲಿ ನಾಯಿ ಕಡಿತದಲ್ಲಿ ಶೇಕಡ 36ರಷ್ಟು ಏರಿಕೆ ಕಂಡುಬಂದಿದೆ.

- Advertisement -

ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 38,000ರಿಂದ 40,000 ರೇಬೀಸ್ ಲಸಿಕೆಗಳ ಅಗತ್ಯವಿದೆ. ಪ್ರತಿ ಸರ್ಕಾರಿ ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಒಳಗಾದವರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಮತ್ತು ಲಸಿಕೆಗಳನ್ನು ಉಚಿತವಾಗಿ ನೀಡುವುದು ಕಡ್ಡಾಯವಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಳ; ನಾಯಿ ದಾಳಿಗೆ ತುತ್ತಾದ 2.15 ಲಕ್ಷ ಮಂದಿ

ಬಿಬಿಎಂಪಿಯ ವಾರ್ಷಿಕ ರೇಬೀಸ್ ವಿರೋಧಿ ಲಸಿಕೆ(ARV) ವರದಿಯ ಪ್ರಕಾರ, ನಗರದಲ್ಲಿ 50,055 ನಾಯಿಗಳಿಗೆ ಚುಚ್ಚುಮದ್ದು ನೀಡಲಾಗಿದೆ. ಆದರೆ ಬಿಬಿಎಂಪಿಯ ಜನಗಣತಿಯ ಪ್ರಕಾರ ನಾಯಿಗಳ ಸಂಖ್ಯೆ 2.7 ಲಕ್ಷ. ಲಸಿಕೆಗಳು ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಲಭ್ಯವಿದೆ.

ಪ್ರತಿ ಇಂಜೆಕ್ಷನ್‌ಗೆ 300 ರಿಂದ 400 ರೂ.ಗಳ ನಡುವೆ ಬೆಲೆ ಇದ್ದು ಕಡಿತದ ತೀವ್ರತೆಯನ್ನು ಅವಲಂಬಿಸಿ, ನಾಯಿ ಕಡಿತಕ್ಕೆ ಒಳಗಾದವರಿಗೆ ಮೂರರಿಂದ ಎಂಟು ಚುಚ್ಚುಮದ್ದುಗಳನ್ನು ನೀಡಲಾಗುತ್ತದೆ. ಹೆಚ್ಚು ತೀವ್ರವಾದ ಸಂದರ್ಭಗಳಲ್ಲಿ ಇಮ್ಯುನೊಗ್ಲಾಬ್ಯುಲಿನ್ ಇಂಜೆಕ್ಷನ್ ನೀಡಲಾಗುತ್ತದೆ. ಅದರ ಬೆಲೆ ಮೂರರಿಂದ ಆರು ಸಾವಿರ ರೂಪಾಯಿ ಇರುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...