ಭಯೋತ್ಪಾದನೆ ವಿರುದ್ಧ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಕೆ

Date:

Advertisements

“ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ಸುಮಾರು 26 ಭಾರತೀಯರನ್ನು ಬಲಿ ಪಡೆದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಇತ್ತೀಚೆಗೆ ಪಾಕಿಸ್ತಾನದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಬಳಿಕ ಭಾರತ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ತನ್ನ ಜನ್ಮದಿನಾಚರಣೆ ಬೇಡ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ‘ಆಪರೇಷನ್ ಸಿಂಧೂರ’ ಯಶಸ್ಸಿಗೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಕಾಂಗ್ರೆಸ್ ಸರ್ಕಾರ ಸೂಚನೆ

Advertisements

“ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯಥಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು” ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ಹಾಗೆಯೇ ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

“ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X