ಬೆಂಗಳೂರು ಹಾಗೂ ಹೈದರಾಬಾದ್ನ ವಿಮಾನ ನಿಲ್ದಾಣದ ಮೂಲಕ ದುಬೈಗೆ ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿ, ಅವರಿಂದ ₹13 ಕೋಟಿ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿಯನ್ನು ಸೀಜ್ ಮಾಡಿದ್ದಾರೆ.
ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎರಡು ವಿಮಾನ ನಿಲ್ದಾಣಗಳಲ್ಲಿ ₹13 ಕೋಟಿ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿಯನ್ನು ಸೀಜ್ ಮಾಡಿದ್ದಾರೆ.
ಬೆಂಗಳೂರು ಹಾಗೂ ಹೈದರಾಬಾದ್ ಏರ್‌ಪೋರ್ಟ್‌ನಿಂದ ನಾಲ್ವರು ಪ್ರಯಾಣಿಕರು ದುಬೈಗೆ ಹೊರಟಿದ್ದರು. ಪ್ರಯಾಣಿಕರ ಬಳಿ ಸ್ವಾಭಾವಿಕವಾಗಿ ಹಾಗೂ ಲ್ಯಾಬ್ನಲ್ಲಿ ತಯಾರಿಸಿದ ವಜ್ರಗಳು ಪತ್ತೆಯಾಗಿದೆ. ನಾಲ್ವರು ಪ್ರಯಾಣಿಕರ ತಪಾಸಣೆ ವೇಳೆ ಕೋಟ್ಯಾಂತರ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿ ಪತ್ತೆಯಾಗಿದೆ.
ಆರೋಪಿಗಳು ಚಾಕೊಲೇಟ್ ಪ್ಯಾಕೆಟ್‌ಗಳಲ್ಲಿ ಸೀಲ್ ಮಾಡಿ ವಜ್ರಗಳ ಸಾಗಾಟ ಮಾಡುತ್ತಿದ್ದರು. ಪ್ರಯಾಣಿಕರನ್ನು ವಶಕ್ಕೆ ಪಡೆದು ಡಿಆರ್‌ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟಿಕೆಟ್ ವಿಚಾರಕ್ಕೆ ಗಲಾಟೆ; ಬಿಎಂಟಿಸಿ ನಿರ್ವಾಹಕಿ ಮೇಲೆ ಪ್ರಯಾಣಕಿ ಹಲ್ಲೆ
ಬೆಂಗಳೂರಲ್ಲಿ ₹7.77 ಕೋಟಿ ಮೌಲ್ಯದ 8,053 ಕ್ಯಾರೆಟ್ ತೂಕದ ವಜ್ರಗಳು ಹಾಗೂ ₹4.62 ಲಕ್ಷ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಹೈದರಾಬಾದ್‌ನಲ್ಲಿ ₹6.03 ಕೋಟಿ ಮೌಲ್ಯದ 5,569 ಕ್ಯಾರೆಟ್ ತೂಕದ ವಜ್ರಗಳು ಹಾಗೂ ₹9.83 ಲಕ್ಷ ವಿದೇಶಿ ಕರೆನ್ಸಿ ಪತ್ತೆಯಾಗಿದೆ.