ಬೆಂಗಳೂರು, ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ ₹13 ಕೋಟಿ ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ವಶಕ್ಕೆ ಪಡೆದ ಡಿಆರ್​ಐ ಅಧಿಕಾರಿಗಳು

Date:

Advertisements

ಬೆಂಗಳೂರು ಹಾಗೂ ಹೈದರಾಬಾದ್​ನ ವಿಮಾನ ನಿಲ್ದಾಣದ​ ಮೂಲಕ ದುಬೈಗೆ ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಡಿಆರ್​ಐ ಅಧಿಕಾರಿಗಳು ಬಂಧಿಸಿ, ಅವರಿಂದ ₹13 ಕೋಟಿ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿಯನ್ನು ಸೀಜ್ ಮಾಡಿದ್ದಾರೆ.

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎರಡು ವಿಮಾನ ನಿಲ್ದಾಣಗಳಲ್ಲಿ ₹13 ಕೋಟಿ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿಯನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರು ಹಾಗೂ ಹೈದರಾಬಾದ್​ ಏರ್‌ಪೋರ್ಟ್‌ನಿಂದ ನಾಲ್ವರು ಪ್ರಯಾಣಿಕರು ದುಬೈಗೆ ಹೊರಟಿದ್ದರು. ಪ್ರಯಾಣಿಕರ ಬಳಿ ಸ್ವಾಭಾವಿಕವಾಗಿ ಹಾಗೂ ಲ್ಯಾಬ್​ನಲ್ಲಿ ತಯಾರಿಸಿದ ವಜ್ರಗಳು ಪತ್ತೆಯಾಗಿದೆ. ನಾಲ್ವರು ಪ್ರಯಾಣಿಕರ ತಪಾಸಣೆ ವೇಳೆ ಕೋಟ್ಯಾಂತರ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿ ಪತ್ತೆಯಾಗಿದೆ.

Advertisements

ಆರೋಪಿಗಳು ಚಾಕೊಲೇಟ್ ಪ್ಯಾಕೆಟ್‌ಗಳಲ್ಲಿ ಸೀಲ್​ ಮಾಡಿ ವಜ್ರಗಳ ಸಾಗಾಟ ಮಾಡುತ್ತಿದ್ದರು. ಪ್ರಯಾಣಿಕರನ್ನು ವಶಕ್ಕೆ ಪಡೆದು ಡಿಆರ್‌ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟಿಕೆಟ್‌ ವಿಚಾರಕ್ಕೆ ಗಲಾಟೆ; ಬಿಎಂಟಿಸಿ ನಿರ್ವಾಹಕಿ ಮೇಲೆ ಪ್ರಯಾಣಕಿ ಹಲ್ಲೆ

ಬೆಂಗಳೂರಲ್ಲಿ ₹7.77 ಕೋಟಿ ಮೌಲ್ಯದ 8,053 ಕ್ಯಾರೆಟ್​​ ತೂಕದ ವಜ್ರಗಳು ಹಾಗೂ ₹4.62 ಲಕ್ಷ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಹೈದರಾಬಾದ್‌ನಲ್ಲಿ ₹6.03 ಕೋಟಿ ಮೌಲ್ಯದ 5,569 ಕ್ಯಾರೆಟ್ ತೂಕದ ವಜ್ರಗಳು ಹಾಗೂ ₹9.83 ಲಕ್ಷ ವಿದೇಶಿ ಕರೆನ್ಸಿ ಪತ್ತೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X