ಕೆಎಸ್‌ಆರ್‌ಟಿಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಚಾಲಕನ ದಿಟ್ಟ ಹೋರಾಟ: ದಬ್ಬಾಳಿಕೆ ವಿರುದ್ಧ ಗೆದ್ದು ಬೀಗಿದ ಜಯದೇವ್‌

Date:

ಸಾರಿಗೆ ಸಂಸ್ಥೆಯೊಳಗಿನ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ದಬ್ಬಾಳಿಕೆಯ ವಿರುದ್ಧ ಧ್ವನಿ ಎತ್ತಿದ ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಜಯದೇವ್ ಎಂ ಅವರು ದೀರ್ಘ ಕಾನೂನು ಹೋರಾಟದ ನಂತರ ಜಯಗಳಿಸಿದ್ದಾರೆ. ಸಂಸ್ಥೆಯ ಉನ್ನತ ಅಧಿಕಾರಿಗಳ ಪಿತೂರಿಯ ನಡುವೆಯೂ ಸತ್ಯಕ್ಕೆ ಜಯ ಸಿಕ್ಕಿರುವುದು ಈಗ ಸಾರಿಗೆ ವಲಯದಲ್ಲಿ ಸಂಚಲನ ಮೂಡಿಸಿದೆ.
​
​ಬೆಂಗಳೂರಿನ ಸ್ಯಾಟಲೈಟ್ ಡಿಪೋ-6ರಲ್ಲಿ ಕೆಲಸ ಮಾಡುತ್ತಿದ್ದ ನೌಕರರು ರಜೆ ಪಡೆಯಲು ಅಥವಾ ಪ್ರತಿದಿನದ ಕರ್ತವ್ಯ ಹಂಚಿಕೆಗಾಗಿ ಅಧಿಕಾರಿಗಳಿಗೆ ಲಂಚ ನೀಡಬೇಕಾದ ಅನಿವಾರ್ಯತೆ ಇತ್ತು. ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಅಧಿಕಾರಿಗಳು ತಲಾ 5,000 ದಿಂದ 10,000 ರೂಪಾಯಿಗಳವರೆಗೆ ಹಣ ಪಡೆಯುತ್ತಿದ್ದರು. ಈ ಅಕ್ರಮವನ್ನು ಪತ್ತೆಹಚ್ಚಿದ ಜಯದೇವ್ ಎಂ ಅವರು, ಸಾಕ್ಷಿ ಸಮೇತ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ದೂರು ನೀಡಿದ್ದರು.

- Advertisement -

​ದೂರು ನೀಡಿದ ಹಿನ್ನೆಲೆಯಲ್ಲಿ ಜಯದೇವ್ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ ಅಧಿಕಾರಿಗಳು, ಅವರ ಹೆಸರಿನಲ್ಲೇ ನಕಲಿ ಪತ್ರ ಸೃಷ್ಟಿಸಿದರು. “ನನ್ನ ಕುಟುಂಬ ಮಂಗಳೂರಿನಲ್ಲಿದೆ, ಅಲ್ಲಿಗೆ ವರ್ಗಾವಣೆ ಮಾಡಿ” ಎಂದು ಜಯದೇವ್ ಅವರ ಸಹಿಯನ್ನು ಫೋರ್ಜರಿ ಮಾಡಿ ಅಧಿಕಾರಿಗಳೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ನಕಲಿ ದಾಖಲೆಯನ್ನು ನಂಬಿ ಸಚಿವರು ನೀಡಿದ ಶಿಫಾರಸನ್ನು ಬಳಸಿ, ಅಧಿಕಾರಿಗಳು ಜಯದೇವ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

​ವರ್ಗಾವಣೆಯ ಹಿಂದಿನ ಕುತಂತ್ರವನ್ನು ಅರಿತ ಜಯದೇವ್, ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಫೋರ್ಜರಿ ಪ್ರಕರಣದ ಸತ್ಯಾಂಶವನ್ನು ವಿವರಿಸಿದರು. ಪ್ರಕರಣದ ಗಂಭೀರತೆ ಅರಿತ ಸಚಿವರು, ತಕ್ಷಣವೇ ತಮ್ಮ ಶಿಫಾರಸು ಪತ್ರವನ್ನು ಹಿಂಪಡೆದು, ವರ್ಗಾವಣೆ ರದ್ದುಪಡಿಸಿ ಯಥಾಸ್ಥಿತಿ ಕಾಪಾಡುವಂತೆ ಕೆಎಸ್‌ಆರ್‌ಟಿಸಿ ಎಂಡಿ ಅನ್ಬುಕುಮಾರ್ ಅವರಿಗೆ ಸೂಚಿಸಿದರು.

ಇದನ್ನೂ ಓದಿ: ಬೆಂಗಳೂರು | ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್: ಮಹಿಳೆ ವಿರುದ್ಧ ಎಸ್‌ಡಿಪಿಐ ಮುಖಂಡನಿಂದ ದೂರು
​
​ಆದರೆ, ಸಚಿವರ ಸೂಚನೆ ಮತ್ತು ಫೋನ್ ಕರೆಯ ಹೊರತಾಗಿಯೂ ಎಂಡಿ ಅವರು ವರ್ಗಾವಣೆ ರದ್ದತಿಗೆ ವಿಳಂಬ ಮಾಡುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಇದರ ಹಿಂದೆ ಮುಖ್ಯ ಸಂಚಾರ ವ್ಯವಸ್ಥಾಪಕ ಜೆ. ಅಂತಣಿ ಜಾರ್ಜ್ ಅವರ ಪಿತೂರಿ ಇದೆ ಎಂದು ಜಯದೇವ್ ಆರೋಪಿಸಿದ್ದಾರೆ. ಸದ್ಯ ಈ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳಾದ ಜೆ. ಅಂತಣಿ ಜಾರ್ಜ್, ಎಟಿಎಸ್ ನೇತ್ರಾವತಿ ಎನ್ ಮತ್ತು ಸಚಿನ್ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ​ಪ್ರಸ್ತುತ ಜಯದೇವ್ ಎಂ ಅವರು ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...