ಡ್ರೋನ್ ಕ್ಯಾಮೆರಾ ಬಳಕೆ: ವಿಶ್ವೇಶ್ವರ ಭಟ್‌ಗೆ ಆರ್‌ಏಫ್‌ಒ ನೋಟಿಸ್

Date:

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅನುಮತಿ ಇಲ್ಲದೆ ಡ್ರೋನ್ ಕ್ಯಾಮೆರಾ ಬಳಕೆ ಮಾಡಿ ಚಿತ್ರೀಕರಣ ಮಾಡಿದ್ದ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯ ಅಧಿಕಾರಿ(ಆರ್‌ಎಫ್‌ಒ) ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

- Advertisement -

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರು ಡ್ರೋನ್ ಕ್ಯಾಮರಾ ಬಳಕೆ ಮಾಡಿ ಚಿತ್ರೀಕರಣ ಮಾಡಿದ್ದಾರೆ. ಈ ಬಗ್ಗೆ ಕಾರಣ ಕೇಳಿ ಅರಣ್ಯಾಧಿಕಾರಿಗಳು ಭಟ್‌ ಅವರಿಗೆ ಜನವರಿ 10ರಂದು ನೋಟೀಸ್‌ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

“ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ದೇವಸ್ಥಾನದ ಬಳಿ ಅನುಮತಿ ಇಲ್ಲದೆ ಡೋನ್ ಮೂಲಕ ಚಿತ್ರಿಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದೀರಿ. ಇದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972 ಸೆಕ್ಷನ್ 28,1(ಬಿ) ರ ಉಲ್ಲಂಘನೆಯಾಗಿದೆ. ಅಲ್ಲದೆ, ನೀವು ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ನಾನಾ ಚಿತ್ರಗಳನ್ನು ಹಾಗೂ ಪೋಸ್ಟ್‌ಗಳನ್ನು ಮಾಡಿ ಸಂಜೆ 6 ಗಂಟೆ ಎಂದು ನಮೂದಿಸಿದ್ದೀರಿ ಇದು ವ್ಯಾಪಕ ಚರ್ಚೆಯಾಗುತ್ತಿದ್ದು, ದೇವಾಲಯಕ್ಕೆ ತೆರಳಲು ತಪ್ಪಲಿನಿಂದ ಸಂಜೆ 4 ಗಂಟೆಯ ವರೆಗೆ ಅವಕಾಶವಿದೆ. ಆದ್ದರಿಂದ ಈ ಎರಡು ವಿಷಯಗಳ ಸ್ಪಷ್ಟಿಕರಣವನ್ನು ಈ ಪತ್ರ ತಲುಪಿದ ಕೂಡಲೇ ತಾವು ಖುದ್ದಾಗಿ ಹಾಜರಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಬಂಡೀಪುರ ಉಪ ವಿಭಾಗ, ಬಂಡೀಪುರ ರವರ ಕಛೇರಿಗೆ ಹಾಜರಾಗಿ ಸದರಿ ಕಾರಣ ಕೇಳಿ ನೋಟಿಸ್‌ಗೆ ಉತ್ತರಿಸಬೇಕು” ಎಂದು ನೋಟಿಸ್‌ನಲ್ಲಿ ಆರ್‌ಎಫ್‌ಒ ಮಂಜುನಾಥ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆಟವಾಡುತ್ತಿದ್ದ ಬಾಲಕ ನೀರಿನ ಸಂಪ್‌ಗೆ ಬಿದ್ದು ಸಾವು

ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಡ್ರೋನ್ ಕ್ಯಾಮರಾದಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ವರದಿ ನೀಡುವಂತೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿಗೆ ಬಂಡೀಪುರ ಸಹಾಯಕ ಅರಣ್ಯ ಸಂರಣ್ಯಾಧಿಕಾರಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವೇಶ್ವರ ಭಟ್‌ರಿಗೆ ನೋಟಿಸ್ ಜಾರಿಯಾಗಿದೆ.

WhatsApp Image 2024 01 14 at 2.07.58 PM

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...