ಈಜಿಪುರ ಮೇಲ್ಸೇತುವೆ ಕಾಮಗಾರಿ ಮರು ಆರಂಭ; ಸರ್ಕಾರಕ್ಕೆ ವರದಿ ಸಲ್ಲಿಸಲು ಪಾಲಿಕೆ ಸಿದ್ಧತೆ

Date:

  • ಶೇ. 19ರಷ್ಟು ಹೆಚ್ಚಿನ ಮೊತ್ತ ಬಿಡ್ ಮಾಡಿದ ಗುತ್ತಿಗೆದಾರರ ಸಂಸ್ಥೆ
  • ₹143 ಕೋಟಿ ವೆಚ್ಚದ ಯೋಜನೆ ಸಿದ್ಧ ಇದರಿಂದ ಪಾಲಿಕೆಗೆ ₹40 ಕೋಟಿ ಹೊರೆ

ಕಳೆದ ನಾಲ್ಕು ವರ್ಷಗಳಿಂದ ಕುಂಠಿತವಾಗಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ₹143 ಕೋಟಿ ವೆಚ್ಚದ ಟೆಂಡರ್‌ ಆಹ್ವಾನಿಸಿದ್ದು, ಗುತ್ತಿಗೆದಾರ ಸಂಸ್ಥೆಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ.

- Advertisement -

ಕಳೆದ ಮೂರು ಬಾರಿ ಟೆಂಡರ್‌ ಕರೆದಾಗಲೂ ಯಾವುದೇ ಗುತ್ತಿಗೆದಾರರ ಸಂಸ್ಥೆಯೂ ಟೆಂಡರ್‌ನಲ್ಲಿ ಭಾಗಿಯಾಗಿರಲಿಲ್ಲ. ಇದೀಗ ನಾಲ್ಕನೇ ಬಾರಿ ಟೆಂಡರ್‌ ಕರೆದಾಗ ಒಂದೇ ಸಂಸ್ಥೆ ಭಾಗವಹಿಸಿದ್ದು, ಶೇ. 19ರಷ್ಟು ಹೆಚ್ಚಿನ ಮೊತ್ತ ಬಿಡ್ ಮಾಡಿದೆ. ಆದರೆ, ಅನುಮೋದಿತದ ಮೊತ್ತ ಬಹಿರಂಗವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹೊಸ ಗುತ್ತಿಗೆ ಸಂಸ್ಥೆಯನ್ನು ನೇಮಿಸುವ ಮೊದಲು ಬಿಬಿಎಂಪಿ ರಾಜ್ಯ ಸರ್ಕಾರದ ಅನುಮೋದನೆಯನ್ನು ಪಡೆಯಲಿದೆ. ಈ ಬಗ್ಗೆ ವರದಿ ಸಲ್ಲಿಸಲು ಪಾಲಿಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

“ಶುಕ್ರವಾರ ಒಂದು ಹಂತದ ಪರಿಶೀಲನೆಯನ್ನು ಸಮಿತಿ ನಡೆಸಿದೆ. ಈ ಬಗ್ಗೆ ಹೆಚ್ಚಿನ ವಿವರ ಸಲ್ಲಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಲಾಗಿದೆ. ಗುತ್ತಿಗೆದಾರ ಸಂಸ್ಥೆಯ ದಾಖಲಾತಿಗಳು ಹಾಗೂ ಆರ್ಥಿಕ ಸಾಮರ್ಥ್ಯದ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಗುತ್ತಿಗೆ ಸಂಸ್ಥೆಯನ್ನು ಬಹುತೇಕ ಅಂತಿಮಗೊಳಿಸಲಾಗುವುದು. ಸೋಮವಾರ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಕಳುಹಿಸುತ್ತೇವೆ. ಸರ್ಕಾರ ಅನುಮತಿ ನೀಡಿದರೇ, ಮುಂದಿನ ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರವು ಈ ಯೋಜನೆಗೆ ಸಂಪೂರ್ಣ ಹಣವನ್ನು ನೀಡುತ್ತಿದೆ ” ಎಂದು ಅಧಿಕಾರಿಯೊಬ್ಬರು ಹೇಳಿದರು.

ಈಜಿಪುರ ಜಂಕ್ಷನ್‌ನಿಂದ ಕೇಂದ್ರೀಯ ಸದನ ಜಂಕ್ಷನ್‌ವರೆಗೆ ಒಟ್ಟು 2.5 ಕಿ.ಮೀ ಉದ್ದ ಈ ಮೇಲ್ಸೇತುವೆ ನಿರ್ಮಾಣವಾಗಲಿದೆ. 2017ರಲ್ಲಿ ₹204 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿತ್ತು. 2021ರ ಸೆಪ್ಟೆಂಬರ್‌ಗೆ ಗುತ್ತಿಗೆ ಸಂಸ್ಥೆಗೆ ಪಾಲಿಕೆ ₹75.11 ಕೋಟಿ ಬಿಲ್ ನೀಡಿದೆ. ಇದೀಗ ಮತ್ತೆ ಮರು ಕಾಮಗಾರಿಗೆ ₹143 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಿರುವುದರಿಂದ ಪಾಲಿಕೆಗೆ ಇದರಿಂದ ₹40 ಕೋಟಿ ಹೊರೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ಮೊದಲ ದಿನ: 5 ಲಕ್ಷ ಮಹಿಳೆಯರ ಪ್ರಯಾಣ

ಮೇಲ್ಸೇತುವೆ ಕಾಮಗಾರಿ ಅರ್ಧದಷ್ಟಾಗಿದ್ದು, ಈ ಮೇಲ್ಸೇತುವೆಗೆ 81 ಪಿಲ್ಲರ್‌ಗಳ ಪೈಕಿ 67 ಮಾತ್ರ ನಿರ್ಮಿಸಲಾಗಿದೆ. 15 ತಿಂಗಳಲ್ಲಿ ಮೇಲ್ಸೆತುವೆ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆದಾರ ಸಂಸ್ಥೆ ಪೂರ್ಣಗೊಳಿಸಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...