‘ಅಟ್ಟಿಕಾ ಗೋಲ್ಡ್’ ಕಚೇರಿಗಳ ಮೇಲೆ ದಾಳಿ: ನಗದು, ಆಭರಣ ಜಪ್ತಿ

Date:

ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ ಮೇಲೆ ಬೆಂಗಳೂರಿನ ‘ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್’ ಹಾಗೂ ಆ ಕಂಪನಿಯ ನಿರ್ದೇಶಕರಿಗೆ ಸೇರಿದ 16 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಏಕಕಾಲಕ್ಕೆ ದಾಳಿ ನಡೆಸಿದೆ. ಶೋಧ ಕಾರ್ಯಾಚರಣೆ ವೇಳೆ ₹7.52 ಲಕ್ಷ ನಗದು, ಅಪಾರ ಪ್ರಮಾಣದ ಚಿನ್ನ-ಬೆಳ್ಳಿ ಆಭರಣಗಳು ಹಾಗೂ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

- Advertisement -

​ಕದ್ದ ಒಡವೆಗಳ ಖರೀದಿ ಹಾಗೂ ವಾಮಮಾರ್ಗದಲ್ಲಿ ಹಣ ಸಂಪಾದಿಸಿದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್ ವಿರುದ್ಧ ಈ ಹಿಂದೆ ರಾಜ್ಯದ ವಿವಿಧ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದ್ದವು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಸಿದ್ದರು. ಪೊಲೀಸರ ತನಿಖೆಯ ವೇಳೆ ಬಯಲಾದ ಮಹತ್ವದ ಮಾಹಿತಿಗಳನ್ನು ಆಧರಿಸಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿ ಇ.ಡಿ. ಈ ಕಾರ್ಯಾಚರಣೆ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

​ಸೆಪ್ಟೆಂಬರ್ 23 ಮತ್ತು 24ರಂದು ಬೆಂಗಳೂರಿನಲ್ಲಿರುವ ಕಂಪನಿಯ ಪ್ರಧಾನ ಕಚೇರಿ ಸೇರಿದಂತೆ ಹೈದರಾಬಾದ್, ವಿಶಾಖಪಟ್ಟಣ ಮತ್ತು ಚೆನ್ನೈನ ವಿವಿಧ ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಕಂಪನಿಯ ಹಾಲಿ ಹಾಗೂ ಮಾಜಿ ನಿರ್ದೇಶಕರು, ಷೇರುದಾರರ ಮನೆ ಮತ್ತು ಕಚೇರಿಗಳಲ್ಲಿ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿದ್ದಾರೆ.

ಅಟ್ಟಿಕಾ ಗೋಲ್ಡ್‌ ಕಂಪನಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪಿ.ಎಸ್. ಆಯುಬ್ ಅಲಿಯಾಸ್ ಬೊಮ್ಮನಹಳ್ಳಿ ಬಾಬು ಮತ್ತು ಅವರ ಕುಟುಂಬದ ಸದಸ್ಯರಾದ ಒಬೆದುಲ್ಲಾ, ಎ. ಮೊಹಮ್ಮದ್ ಸಲ್ಮಾನ್, ಆರ್ಬಿನ್ ತಾಜ್ ಮತ್ತಿತರರು ಕದ್ದ ವಸ್ತುಗಳ ಖರೀದಿ ಹಾಗೂ ಅಕ್ರಮ ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಇ.ಡಿ. ಪ್ರಕಟಣೆಯಲ್ಲಿ ತಿಳಿಸಿದೆ.

​ದಾಳಿಯ ವೇಳೆ ಬೊಮ್ಮನಹಳ್ಳಿ ಬಾಬು ಹಾಗೂ ಅವರ ಕುಟುಂಬದವರು ತನಿಖೆಗೆ ಸಹಕರಿಸದೆ ತಲೆಮರೆಸಿಕೊಂಡಿದ್ದರು. ಅಲ್ಲದೆ, ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಇ.ಡಿ. ಅಧಿಕಾರಿಗಳ ಸಂಪರ್ಕಕ್ಕೆ ಸಿಗದಂತೆ ಹಾಗೂ ಯಾವುದೇ ಮಾಹಿತಿಯನ್ನು ನೀಡದಂತೆ ತಮ್ಮ ಸಿಬ್ಬಂದಿಗೂ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎಂದು ಜಾರಿ ನಿರ್ದೇಶನಾಲಯ ಸ್ಪಷ್ಟಪಡಿಸಿದೆ.

ತಮ್ಮ ಮೇಲಿನ ಇ.ಡಿ ದಾಳಿ ಕುರಿತು ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿರುವ ಬೊಮ್ಮನಹಳ್ಳಿ ಬಾಬು, “ನಾನು ಎಲ್ಲಿಯೂ ತಲೆಮರೆಸಿಕೊಂಡಿಲ್ಲ. ಮುಖ್ಯಮಂತ್ರಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಿರಿಯೂರಿನ ಮಾದಾರ ಚೆನ್ನಯ್ಯ ಮಠದಲ್ಲಿದ್ದೇನೆ. ಕಂಪನಿಯ ಮೇಲೆ ಇ.ಡಿ. ದಾಳಿ ನಡೆದಿರುವುದು ಸತ್ಯ. ನಾನು ಹಾಗೂ ನನ್ನ ಕುಟುಂಬದವರು ಆ ಕಂಪನಿಯ ಷೇರುದಾರರಾಗಿದ್ದೇವೆ ಅಷ್ಟೇ. ಈ ಬಗ್ಗೆ ಕಂಪನಿಯ ನಿರ್ದೇಶಕರು ಅಧಿಕೃತವಾಗಿ ಪ್ರತಿಕ್ರಿಯೆ ನೀಡಲಿದ್ದಾರೆ” ಎಂದು ಹೇಳಿದ್ದಾರೆ. ಪ್ರಕರಣದ ಕುರಿತು ಇ.ಡಿ. ಅಧಿಕಾರಿಗಳ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....