ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇ.ಡಿ ದಾಳಿ

Date:

  • ಸತತ ನೋಟಿಸ್ ಹೊರತಾಗಿಯೂ ವಿಚಾರಣೆಗೆ ಗೈರು ಹಾಜರು
  • ಎರಡು ವಾಣಿಜ್ಯ ಮತ್ತು ಒಂದು ವಸತಿ ಪ್ರದೇಶದಲ್ಲಿ ಶೋಧ

ವಿದೇಶಿ ಹೂಡಿಕೆ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದಡಿ ಎಜುಟೆಕ್‌ ಕಂಪನಿ ‘ಬೈಜೂಸ್’ನ ಸಿಇಒ ರವೀಂದ್ರನ್ ಬೈಜು ಅವರ ಕಚೇರಿ ಮತ್ತು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.

- Advertisement -

ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (ಫೆಮಾ) ನಿಬಂಧನೆಗಳ ಅಡಿಯಲ್ಲಿ ಬೈಜು ರವೀಂದ್ರನ್ ಮತ್ತು ಅವರ ಕಂಪನಿ ‘ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಬೆಂಗಳೂರಿನ ಎರಡು ವಾಣಿಜ್ಯ ಮತ್ತು ಒಂದು ವಸತಿ ಪ್ರದೇಶದಲ್ಲಿ ಶೋಧ ನಡೆಸಿದೆ. ಈ ವೇಳೆ ಹಲವಾರು ದಾಖಲೆಗಳು ಮತ್ತು ದತ್ತಾಂಶಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ?: 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

ಖಾಸಗಿ ವ್ಯಕ್ತಿಗಳಿಂದ ಕೇಳಿ ಬಂದ ದೂರುಗಳ ಆಧಾರದ ಮೇಲೆ, ಬೈಜೂ ರವೀಂದ್ರನ್ ಅವರ ವಿರುದ್ಧ ದೂರು ದಾಖಲಿಸಿಕೊಂಡು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಸತತ ನೋಟಿಸ್ ಜಾರಿಯಾದ ಹೊರತಾಗಿಯೂ ವಿಚಾರಣೆಗೆ ಅವರು ಗೈರು ಹಾಜರಾಗಿದ್ದರು. ಹೀಗಾಗಿ, ಕೊನೆಯದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

“ಶೋಧದ ವೇಳೆ ‘ಥಿಂಕ್ ಅಂಡ್ ಲರ್ನ್ ಪ್ರೈ. ಲಿಮಿಟೆಡ್’ 2011 ರಿಂದ 2023ರ ಅವಧಿಯಲ್ಲಿ ಸುಮಾರು 28,000 ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆಯನ್ನು(ಎಫ್‌ಡಿಐ) ಸ್ವೀಕರಿಸಿದೆ. ಇದೇ ಅವಧಿಯಲ್ಲಿ ಬೈಜೂಸ್ ಕಂಪನಿಯು ಸಾಗರೋತ್ತರ ನೇರ ಹೂಡಿಕೆಯ ಹೆಸರಿನಲ್ಲಿ ಸುಮಾರು ₹9,754 ಕೋಟಿಯನ್ನು ವಿವಿಧ ವಿದೇಶಿ ಕಂಪನಿಗಳಿಗೆ ರವಾನಿಸಿದೆ” ಎಂದು ಇಡಿ ತಿಳಿಸಿದೆ.

ಬೈಜೂಸ್‌ಗೂ ಮುನ್ನ ರವೀಂದ್ರನ್ ಬೈಜು ಗಣಿತ ಶಿಕ್ಷಕರಾಗಿ ಮನೆ ಪಾಠ ಮಾಡುತ್ತಿದ್ದರು. ಅದಾದ ನಂತರ, ತಮ್ಮ ಪತ್ನಿ ದಿವ್ಯಾಗೋಕುಲ್ ನಾಥ್ ಅವರ ಸಹಯೋಗದೊಂದಿಗೆ 2011ರಲ್ಲಿ ಅಧಿಕೃತವಾಗಿ ಬೈಜೂಸ್ ಆರಂಭಿಸಿದ್ದರು. ಅವರು ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ 2,071 ನೇ ಸ್ಥಾನದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...