ಚುನಾವಣೆ 2023 | ಅನುಮತಿ ಪಡೆಯದೆ ಜಾಹೀರಾತು ನೀಡಿದರೆ ಅಭ್ಯರ್ಥಿ ವಿರುದ್ಧ ಅಗತ್ಯ ಕ್ರಮ: ಆಯುಕ್ತ

Date:

  • ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು
  • ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರೇಡಿಯೋ, ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಮಾಧ್ಯಮ ಪ್ರಮಾಣೀಕರಣ ಮತ್ತು ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಜಾಹೀರಾತು ನೀಡಿದರೆ ಸಂಬಂಧಪಟ್ಟ ಅಭ್ಯರ್ಥಿಯ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್ ತಿಳಿಸಿದರು.

ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆ, ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಚುನಾವಣಾ ಮಾಹಿತಿ ಕಾರ್ಯಾಗಾರ ನಡೆಯಿತು.

ಈ ವೇಳೆ ಮಾತನಾಡಿದ ಅವರು, “ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಮೇಲೆ ನಿಗಾಹಿಸುವ ಸಲುವಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ದೃಶ್ಯ ಮಾಧ್ಯಮ, ರೇಡಿಯೋ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಜಾಹೀರಾತುಗಳ ಮೇಲೆ ನಿಗಾವಹಿಸಲು 3 ಪಾಳಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ. ದಿನದ 24 ಗಂಟೆಯೂ ಅವರು ನಿಗಾವಹಿಸಲಿದ್ದಾರೆ. ಪೂರ್ವಾನುಮತಿ ಪಡೆಯದ ಅಥವಾ ಪಾವತಿಸಿದ ಸುದ್ದಿಗಳು ಪ್ರಸಾರವಾದಲ್ಲಿ ಕೂಡಲೆ ಅದನ್ನು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗೆ ರವಾನಿಸಿ ಅದನ್ನು ಪರಿಶೀಲಿಸಿ ಶೀಘ್ರ ವರದಿ ನೀಡಲು ಸೂಚನೆ ನೀಡಲಾಗುತ್ತದೆ” ಎಂದು ಹೇಳಿದರು.

ಪೋಸ್ಟಲ್ ಬ್ಯಾಲೆಟ್‌ನಲ್ಲಿ ಮತ ಚಲಾಯಿಸಿ

ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ. ಹಾಗಾಗಿ, ಅವರಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತ ಚಲಾಯಿಸಲು ಅವಕಾಶವಿದೆ. ನಾಮನಿರ್ದೇಶನಕ್ಕೂ ಮುಂಚಿತವಾಗಿ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು 80 ವರ್ಷ ಮೇಲ್ಪಟ್ಟವರ ಮನೆಗೆ ತೆರಳಿ ಪೋಸ್ಟಲ್ ಬ್ಯಾಲೆಟ್ ಹಾಕುವ ಬಗ್ಗೆ 12ಡಿ ಫಾರ್ಮ್ ಮೂಲಕ ಮಾಹಿತಿ ಪಡೆದುಕೊಳ್ಳುತ್ತಾರೆ” ಎಂದರು.

“ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಲು ಇಚ್ಛಿಸುವವರು ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬಹುದು. ಪೋಸ್ಟಲ್ ಬ್ಯಾಲೆಟ್ ವೇಳೆ ಮತಪೆಟ್ಟಿಗೆಯ ಜತೆಗೆ ಇಬ್ಬರು ಅಧಿಕಾರಿಗಳು ಹಾಗೂ ವೀಡಿಯೋ ಗ್ರಾಫರ್ ತೆರಳಿ ಮತ ಹಾಕಿಸಿಕೊಂಡು ಬರಲಿದ್ದಾರೆ” ಎಂದು ಹೇಳಿದರು.

“ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ನಾನಾ ಪಕ್ಷಗಳಿಂದ ಆಯ್ಕೆಯಾದಂತಹ ಅಭ್ಯರ್ಥಿಗಳು ₹40 ಲಕ್ಷ ವ್ಯಯಿಸಲು ಮಾತ್ರ ಅವಕಾಶವಿರುತ್ತದೆ. ಯಾವುದಕ್ಕೆ ಎಷ್ಟು ಹಣ ವ್ಯಯಿಸಲಾಗಿದೆ ಎಂಬ ಬಗ್ಗೆ ಅಭ್ಯರ್ಥಿಗಳು ಅಧಿಕಾರಿಗಳಿಗೆ ನಿಖರ ಮಾಹಿತಿಯನ್ನು ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೆಕ್ಕಕ್ಕಾಗಿ ಮರಗಳ ಸುತ್ತ ಬೈಂಡಿಂಗ್ ವೈರ್‌ ಬಿಗಿದ ಬಿಎಂಆರ್‌ಸಿಎಲ್

ಆನ್ ಲೈನ್ ಮೂಲಕ ನಾಮಪತ್ರ ಸಲ್ಲಿಸಲು ಅವಕಾಶ

“ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಆಯ್ಕೆಯಾದ ಅಭ್ಯರ್ಥಿಗಳು https://encore.eci.gov.in ಎನ್‌ಕೋರ್ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ದಿನಾಂಕ, ಸಮಯವನ್ನು ನಿಗದಿಪಡಿಸಿಕೊಂಡು, ಆ ದಿನ ತೆರಳಿ ನಾಮಪತ್ರ ಸಲ್ಲಿಸಬಹುದು” ಎಂದು ಹೇಳಿದರು.

ಬ್ಯಾಂಕ್ ಖಾತೆಗಳ ಮೇಲೆ ನಿಗಾ

“ಒಂದೇ ಬ್ಯಾಂಕ್ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗುವುದು ಕಂಡುಬಂದರೆ ಅಂತವರ ಮೇಲೆ ನಿಗಾವಹಿಸಿ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಅಧಿಕಾರಿಗಳು ಬ್ಯಾಂಕ್ ಖಾತೆಗಳ ಮೇಲೆ ನಿಗಾವಹಿಸುತ್ತಿದ್ದಾರೆ” ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಟ್ರೈನಿಂಗ್ ನೋಡಲ್ ಅಧಿಕಾರಿಯಾದ ನಾಗರಾಜ್, ನಾಗೇಂದ್ರ ಹೊನ್ನವಳ್ಳಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ...

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...