ಜಿಬಿಎ ಪಾಲಿಕೆಗಳ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸಲು ಚುನಾವಣಾ ಆಯೋಗ ಸೂಚನೆ

Date:

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸುವ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

- Advertisement -

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024ರ ಸೆಕ್ಷನ್‌ 35ರಂತೆ ಐದು ನಗರ ಪಾಲಿಕೆಗಳ ಮತದಾರರ ಪಟ್ಟಿ ತಯಾರಿಸಲು ಸೋಮವಾರ ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಎಲ್ಲ ಕರ್ತವ್ಯಗಳನ್ನು ನಿರ್ವಹಿಸಲು ಜಿಬಿಎ ಮುಖ್ಯ ಆಯುಕ್ತರನ್ನು ಜಿಲ್ಲಾ ಚುನಾವಣಾಧಿಕಾರಿಯಾಗಿ ಹಾಗೂ ನಗರ ಪಾಲಿಕೆಗಳ ಆಯುಕ್ತರನ್ನು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳನ್ನಾಗಿ ನೇಮಿಸಿ ಅ.13ರಂದು ಅಧಿಸೂಚಿಸಲಾಗಿತ್ತು.

ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸಲು ಮತದಾರರ ನೋಂದಣಾಧಿಕಾರಿ (ಎಆರ್‌ಒ), ಸಹಾಯಕ ಮತದಾರರ ನೋಂದಣಾಧಿ ಕಾರಿಗಳನ್ನು(ಎಇಆರ್‌ಒ) ನೇಮಕ ಮಾಡಬೇಕಿದ್ದು, ಅದನ್ನು ಜಿಲ್ಲಾ ಚುನಾವಣಾಧಿಕಾರಿಗಳು ನಿರ್ವಹಿಸಬೇಕು ಎಂದು ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್‌ಗಷ್ಟೇ ಅಲ್ಲ, ಸಮಾಜಕ್ಕೆ ಅರ್ಥವಾಗಿದೆಯೇ ಆರ್‌ಎಸ್‌ಎಸ್ ಅಜೆಂಡಾ?

ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ, ಪೂರ್ವ ಮತ್ತು ಪಶ್ಚಿಮ ನಗರ ಪಾಲಿಕೆಗಳ ಒಟ್ಟು 368 ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಜಿಬಿಎ ನಿಯಮ–2025ರಂತೆ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ತಯಾರಿಸಬೇಕು.

2025ರ ಜನವರಿ 1ರಂದು ಪ್ರಕಟವಾಗಿರುವ ವಿಧಾನಸಭೆ ಕ್ಷೇತ್ರಗಳ ಮೂಲ ಮತದಾರರ ಪಟ್ಟಿ, ನಂತರ ಪ್ರಕಟವಾಗಿರುವ ಪೂರಕ ಪಟ್ಟಿಯನ್ನು ಅಳವಡಿಸಿಕೊಂಡು, ವಾರ್ಡ್‌ವಾರು ಮತದಾರರ ಕರಡು ಪಟ್ಟಿ ತಯಾರಿಸಬೇಕು. ವಾರ್ಡ್‌ ವ್ಯಾಪ್ತಿಯಲ್ಲಿ ವಿಭಜನೆಯಾಗಿರುವ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯ ಭಾಗಗಳನ್ನು ಹಾಗೆಯೇ ಉಳಿಸಿಕೊಂಡು ವಾರ್ಡಿನ ಮತದಾರರ ಪಟ್ಟಿಯನ್ನು ತಯಾರಿಸಬೇಕು.

ಮತದಾರರ ಪಟ್ಟಿಯ ಪ್ರತಿ ಭಾಗದಲ್ಲಿ, ಅಂದರೆ ಪ್ರತಿ ಮತಗಟ್ಟೆ ಯಲ್ಲಿ ಮತದಾರರ ಸಂಖ್ಯೆ ಗರಿಷ್ಠ 1,500 ಮೀರದಂತೆ ಎಚ್ಚರ ವಹಿಸಬೇಕು. ಮತದಾರರ ಪಟ್ಟಿಗೆ ಬರುವ ಆಕ್ಷೇಪಣೆಗಳನ್ನು ನಿಯಮಾನುಸಾರ ಇತ್ಯರ್ಥಪಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಫೆಬ್ರುವರಿಯಲ್ಲಿ ಚುನಾವಣೆ: ಜಿಬಿಎ

ಐದು ನಗರ ಪಾಲಿಕೆಗಳ ಚುನಾವಣೆಗೆ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು, ವಾರ್ಡ್‌ ಮರುವಿಂಗಡಣೆ ಅಂತಿಮಗೊಳಿಸಲು ಸಮಯ ನಿಗದಿ ಮಾಡಿರುವ ಕಾರ್ಯಸೂಚಿಗೆ ಅ.10ರಂದು ನಡೆದಿದ್ದ ಜಿಬಿಎ ಮೊದಲ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಅದರಂತೆ ರಾಜ್ಯ ಚುನಾವಣಾ ಆಯೋಗ, ಆದೇಶ ಹೊರಡಿಸಿದೆ.

ನವೆಂಬರ್‌ ಆರಂಭದೊಳಗೆ ನಗರ ಪಾಲಿಕೆಗಳ ವಾರ್ಡ್‌ ಮರು ವಿಂಗಡಣೆ ಅಂತಿಮ ಅಧಿಸೂಚನೆಯಾಗಲಿದೆ. ನವೆಂಬರ್‌ 30ರಂದು ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ತಯಾರಿಕೆಯನ್ನು ಆರಂಭಿಸುತ್ತದೆ. 2026ರ ಫೆಬ್ರುವರಿ ಮಧ್ಯಭಾಗದಲ್ಲಿ ರಾಜ್ಯ ಚುನಾವಣಾ ಆಯೋಗ ನಗರ ಪಾಲಿಕೆಗಳ ಚುನಾವಣೆಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ ಎಂದು ಜಿಬಿಎ ಮೊದಲ ಸಭೆಯ ಕಾರ್ಯಸೂಚಿಯಲ್ಲಿ ನಮೂದಾಗಿತ್ತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...