ಚುನಾವಣೆ | ಕೆಎಸ್‌ಆರ್‌ಟಿಸಿಗೆ 350 ಬಸ್‌ ಬಾಡಿಗೆ ನೀಡಿದ ಬಿಎಂಟಿಸಿ; ಬೆಂಗಳೂರಿನಲ್ಲಿ ಸೇವೆಯಲ್ಲಿ ವ್ಯತ್ಯಯ

Date:

  • ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ
  • ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಕಾರ್ಯಾಚರಣೆ ನಡೆಸಿದ ಬಿಎಂಟಿಸಿಯ 350 ಬಸ್‌ಗಳು

ಮತದಾನದ ದಿನದಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ 6,850 ಬಸ್‌ಗಳ ಪೈಕಿ 1,700 ಬಸ್‌ಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ಮತ್ತು ಇನ್ನೂ 350 ವಾಹನಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಗೆ ನಿಯೋಜಿಸಿದ್ದರಿಂದಾಗಿ ನಗರದಲ್ಲಿ ಪ್ರಯಾಣಿಕರ ಸೇವೆಗಳಿಗೆ ತೊಂದರೆ ಉಂಟಾಯಿತು.

ಕೆಎಸ್‌ಆರ್‌ಟಿಸಿಯ ಒಟ್ಟು 8,100 ಬಸ್‌ಗಳ ಪೈಕಿ 4,100 ಬಸ್‌ಗಳನ್ನು ಚುನಾವಣಾ ಕೆಲಸಕ್ಕಾಗಿ ನೀಡಿದ್ದು, ಬಿಎಂಟಿಸಿಯಿಂದ ಬಾಡಿಗೆ ಪಡೆದ 350 ಬಸ್‌ಗಳು ಮೇ 10ರಂದು ಇಂಟರ್‌ಸಿಟಿ ರೂಟ್‌ಗಳಲ್ಲಿ ಅಂದರೆ, ಮೈಸೂರು, ಮಂಡ್ಯ, ಮದ್ದೂರು, ತುಮಕೂರು, ಪಾವಗಡ, ಚಿತ್ರದುರ್ಗ, ಹೊಸದುರ್ಗ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿವೆ.

“ಬೆಳಗ್ಗೆ ಬಸ್‌ಗಳಿಗೆ ಸಾಕಷ್ಟು ಬೇಡಿಕೆ ಇತ್ತು. ಹೆಚ್ಚಿನ ಪ್ರಯಾಣಿಕರು ಮತ ಚಲಾಯಿಸಲು ತಮ್ಮ ಊರಿಗಳಿಗೆ ತೆರಳಿದ್ದಾರೆ” ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬೆಂಗಳೂರಿನಲ್ಲಿ, ಬಿಎಂಟಿಸಿ ಬೇಡಿಕೆಗೆ ಅನುಗುಣವಾಗಿ ಬಸ್ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿತ್ತು. ಮೇ 10ರಂದು ಸಾರ್ವಜನಿಕ ರಜೆ ಇದ್ದ ಕಾರಣ ನಗರದಲ್ಲಿ ಬಸ್‌ಗಳಲ್ಲಿ ಹೆಚ್ಚಿನ ಬೇಡಿಕೆ ಇರಲಿಲ್ಲ” ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

“ಮೆಜೆಸ್ಟಿಕ್ ಮತ್ತು ಶಿವಾಜಿನಗರ ಬಸ್ ನಿಲ್ದಾಣಗಳು ಹೆಚ್ಚು ಪ್ರಯಾಣಿಕರು ಮತ್ತು ಬಸ್‌ಗಳಿಲ್ಲದೆ ಖಾಲಿಯಾಗಿದ್ದವು. ಮೇ 9 ಮತ್ತು 10 ರಂದು ಬಿಎಂಟಿಸಿ ಬಸ್ ಸೇವೆಗೆ ತೊಂದರೆಯಾಗಿದೆ. ಪ್ರಯಾಣಿಕರು ಬಸ್ ಪಡೆಯಲು 45 ನಿಮಿಷದಿಂದ ಎರಡು ಗಂಟೆಗಳವರೆಗೆ ಕಾಯಬೇಕಾಯಿತು” ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...