ಮತಗಟ್ಟೆಗಳ ಬಳಿ ಸಕಲ ಸೌಲಭ್ಯ, ಎಲ್ಲರೂ ತಪ್ಪದೇ ಮತದಾನ ಮಾಡಿ : ತುಷಾರ್ ಗಿರಿನಾಥ್

Date:

  • 28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡಾವಾರು 55.04% ಇದೆ
  • 80 ವರ್ಷ ಮೇಲ್ಪಟ್ಟ – ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ನಿವಾಸಿಗಳೆಲ್ಲರಿಗೂ ಮತದಾನ ಮಾಡುವಂತೆ ಪ್ರೇರೇಪಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯ 8 ವಲಯಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವರ್ಚುವಲ್ ಮೂಲಕ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, “ಎಲ್ಲರೂ ಮತದಾನ ಮಾಡುವ ಸಲುವಾಗಿ ಚುನಾವಣಾ ಆಯೋಗದ ವತಿಯಿಂದ ಅನೇಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಮತದಾನ ಮಾಡುವ ಮುಂಚಿತವಾಗಿಯೇ ಎಲ್ಲ ಮನೆಗಳಿಗೂ ಮತದಾನದ ಚೀಟಿಗಳನ್ನು ನೀಡಲಾಗುವುದು. ಅಲ್ಲದೆ ವಿ.ಹೆಚ್.ಎ ತಂತ್ರಾಂಶದ ಮೂಲಕ ಮತದಾರರ ಗುರುತಿನ ಚೀಟಿ ನಮೂದಿಸಿ ಮತಗಟ್ಟೆಯ ಮಾಹಿತಿ ಪಡೆದುಕೊಳ್ಳಬಹುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಅದರಂತೆ ಮತಗಟ್ಟೆಗಳ ಬಳಿ ಪಾರ್ಕಿಂಗ್ ವ್ಯವಸ್ಥೆ, ವಿಕಲಚೇತನರಿಗಾಗಿ ರ‍್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಸರತಿ ಸಾಲಿನ ವ್ಯವಸ್ಥೆ, ಮತ ಚಲಾಯಿಸಲು ಬರುವವರಿಗೆ ಬಿಸಿಲು ಬೀಳದಂತೆ ಪೆಂಡಾಲ್ ವ್ಯವಸ್ಥೆ, ವಿಶೇಷವಾಗಿ ಮಹಿಳೆಯರಿಗಾಗಿ ಪಿಂಕ್ ಬೂತ್‌ಗಳು ಸೇರಿದಂತೆ ನಾನಾ ವಿಚಾರಗಳ ಆಧಾರಿತ ಬೂತ್ ಗಳನ್ನು ಸ್ಥಾಪಿಸಲಾಗುವುದು” ಎಂದು ಹೇಳಿದರು.

“2018ರ ವಿಧಾನಸಭಾ ಚುನಾವಣೆಯಲ್ಲಿ ಪಾಲಿಕೆಯ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡಾವಾರು 55.04% ಇದೆ. ಈ ಬಾರಿ ಮತದಾರರ ಶೇಕಡಾವಾರು ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಿದೆ. 80 ವರ್ಷ ಮೇಲ್ಪಟ್ಟ ಮತದಾರರಿಗೆ ಮತ್ತು ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಉಜ್ವಲ್ ಕುಮಾರ್ ಘೋಷ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ಜಪ್ತಿ

“ನಗರದ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಒಂದು ಪಕ್ಷದ ಚಿಹ್ನೆವುಳ್ಳ ₹3 ಕೋಟಿ ಮೌಲ್ಯದ ಕುಕ್ಕರ್ ಸೇರಿ ಇತರೆ ವಸ್ತುಗಳನ್ನು ಜಪ್ತಿ ಮಾಡಿಲಾಗಿದೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು.

“ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಖರ್ಚುಗಳ ಮೇಲ್ವಿಚಾರಣೆ ಮಾಡಲು ಇಸಿ ಅಧಿಕಾರಿ ಹಾಗೂ ನಾನಾ ಕ್ಷೇತ್ರಗಳಲ್ಲಿ ಹಲವಾರು ಸಹಾಯಕ ವೆಚ್ಚ ವೀಕ್ಷಕರನ್ನು ನೇಮಿಸಲಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...