ಜೂನ್‌ 30 ರವರೆಗೆ ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ : ಕೆಎಸ್‌ಆರ್‌ಟಿಸಿ

Date:

  • ಜೂನ್‌ 15ರಿಂದ ಜೂನ್ 30ರವರೆಗೆ ಸಮಯಾವಕಾಶ ವಿಸ್ತರಣೆ ಮಾಡಿ ಆದೇಶ
  • ಶಕ್ತಿಯೋಜನೆಯಡಿ ವಿದ್ಯಾರ್ಥಿನಿಯರು ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸಿ

ಜೂನ್‌ 15 ರವರೆಗೆ ವಿದ್ಯಾರ್ಥಿಗಳಿಗೆ ನೀಡಿದ್ದ ಉಚಿತ ಬಸ್ ಪ್ರಯಾಣದ ಗಡುವನ್ನು ಜೂನ್‌ 30ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸುತ್ತೋಲೆ ಹೊರಡಿಸಿದೆ.

- Advertisement -

ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆ, ರಾಜ್ಯದಲ್ಲಿ ವಿದ್ಯಾರ್ಥಿಗಳು ಶಾಲೆ/ಕಾಲೇಜುಗಳಿಗೆ ಓಟಾಟ ಆರಂಭಿಸಿದ್ದಾರೆ. ವಿದ್ಯಾರ್ಥಿಗಳು ಸೇವಾ ಸಿಂಧು ತಂತ್ರಾಶದ ಮೂಲಕ ಅರ್ಜಿ ಸಲ್ಲಿಸಿ ಬಸ್‌ ಪಾಸ್‌ ಪಡೆಯಬಹುದು. ಇದಕ್ಕಾಗಿ ಜೂನ್‌ 15ರವರೆಗೆ ಉಚಿತವಾಗಿ ವಿದ್ಯಾರ್ಥಿಗಳಿಗೆ ಓಡಾಡಲು ನಿಗಮ ಅವಕಾಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪಾಸ್‌ ಪಡೆಯಲು ವಿದ್ಯಾರ್ಥಿಗಳಿಗೆ ಇನ್ನಷ್ಟು ಕಾಲಾವಕಾಶ ಬೇಕಾಗಿರುವುದನ್ನು ಅರಿತ ನಿಗಮ ಜೂನ್‌ 15ರಿಂದ ಜೂನ್ 30ರವರೆಗೆ ಸಮಯಾವಕಾಶವನ್ನು ವಿಸ್ತರಣೆ ಮಾಡಿ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು

ವಿದ್ಯಾರ್ಥಿಗಳು ಈ ಹಿಂದೆ ನೀಡಿರುವ ಬಸ್‌ ಪಾಸ್‌ ಜತೆಗೆ ಪ್ರಸಕ್ತ ವರ್ಷದ ಶಾಲಾ ಅಥವಾ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡ ಸಂದರ್ಭದಲ್ಲಿ ನೀಡಲಾಗಿರುವ ರಶೀದಿಯನ್ನು ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳು ಜೂನ್​ 12 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಪಾಸ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರು ರಾಜ್ಯದೊಳಗೆ ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...