ಯಶವಂತಪುರ – ಮುರುಡೇಶ್ವರ ಸಾಪ್ತಾಹಿಕ ವಿಶೇಷ ರೈಲು ಸೇವೆಯ ಅವಧಿ ವಿಸ್ತರಣೆ

Date:

ಪ್ರಯಾಣಿಕರ ಬೇಡಿಕೆ ಹಿನ್ನೆಲೆ, ಯಶವಂತಪುರ-ಮುರುಡೇಶ್ವರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ (06563/06564) ಸೇವೆಯ ಅವಧಿಯನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಈ ರೈಲುಗಳ ವೇಳಾಪಟ್ಟಿ, ನಿಲ್ದಾಣ, ದರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.

ಯಶವಂತಪುರ-ಮುರುಡೇಶ್ವರ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಈ ಮೊದಲು ಜುಲೈ 29 ರವರೆಗೆ ಚಲಿಸಲಿದೆ ಎಂದು ಸೂಚಿಸಲಾಗಿತ್ತು. ಇದೀಗ ಪ್ರತಿ ಶನಿವಾರ ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು (ರೈಲು ಸಂಖ್ಯೆ 06563) ಯಶವಂತಪುರ-ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆ.5 ರಿಂದ ಆ.26 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿ ಭಾನುವಾರ ಮುರುಡೇಶ್ವರದಿಂದ ಪ್ರಾರಂಭವಾಗುವ ರೈಲು (ರೈಲು ಸಂಖ್ಯೆ 06564) ಮುರುಡೇಶ್ವರ-ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆ.6 ರಿಂದ ಆ.27 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 30 ರವರೆಗೆ ಚಲಿಸಲಿದೆ ಎಂದು ಸೂಚಿಸಲಾಗಿತ್ತು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ನಾವೂ ಮನುಷ್ಯರೇ, ನಮ್ಮ ಮೇಲೂ ಸ್ವಲ್ಪ ಕರುಣೆ ತೋರಿ: ಪೌರ ಕಾರ್ಮಿಕರು

ಶನಿವಾರ ರಾತ್ರಿ ಯಶವಂತಪುರ ರೈಲು ನಿಲ್ದಾಣದಿಂದ ಹೊರಟು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ಮಾರ್ಗವಾಗಿ ಮುರುಡೇಶ್ವರ ತಲುಪುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಪ್ರಕರಣ ಭೇಧಿಸಿದ ರೈಲ್ವೆ ಪೊಲೀಸರು

ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ...

ಬೆಂ.ಗ್ರಾಮಾಂತರ | ಮಾ.4ರಂದು ನೆಲಮಂಗಲಕ್ಕೆ ಮುಖ್ಯಮಂತ್ರಿ ಭೇಟಿ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಎಷ್ಟೇ...

₹2.3 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳ ವಶ: ಪೊಲೀಸ್ ಆಯುಕ್ತ ದಯಾನಂದ

ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ...