ಭ್ರೂಣ ಹತ್ಯೆ | ಆರೋಗ್ಯಾಧಿಕಾರಿಗಳ ತನಿಖೆ ವೇಳೆ ಹೊಸಕೋಟೆಯ ಆಸ್ಪತ್ರೆಯಲ್ಲಿ 16 ವಾರಗಳ ಭ್ರೂಣ ಪತ್ತೆ

Date:

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಈಗಾಗಲೇ 11 ಜನರನ್ನು ಬಂಧಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರಿಂದ ತೀವ್ರ ತನಿಖೆ ನಡೆಯುತ್ತಿದೆ. ಇದರ ನಡುವೆ ರಾಜ್ಯದಲ್ಲಿ ಮೊದಲ ಬಾರಿಗೆ ತನಿಖೆ ವೇಳೆ ಹತ್ಯೆ ಮಾಡಲಾದ ಭ್ರೂಣ ಪತ್ತೆಯಾಗಿದೆ.

- Advertisement -

ರಾಜ್ಯ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ರಾಜ್ಯಾದ್ಯಂತ ಭ್ರೂಣ ಹತ್ಯೆ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ದೇವನಹಳ್ಳಿಯ ನಾನಾ ಆಸ್ಪತ್ರೆಗಳ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್​ ಕುಮಾರ್​ ನೇತೃತ್ವದ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ತನಿಖೆ ವೇಳೆ, ಬೆಂಗಳೂರಿನ ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಕ್ರಾಸ್‌ ಬಳಿಯ ಎಸ್‌ಪಿಜಿ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ 14 ರಿಂದ 16 ವಾರಗಳ ಭ್ರೂಣ ಸಿಕ್ಕಿದೆ. ಇದು ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರೂಣ ಪತ್ತೆಯಾದ ಮೊದಲ ಕೇಸ್​ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ವಾರ ಈ ಆಸ್ಪತೆಯ ದಾಖಲೆಗಳನ್ನು ಪರಿಶೀಲಿಸಿದ್ದ ಅಧಿಕಾರಿಗಳು ಖಾಸಗಿ ಕ್ಲಿನಿಕ್​ನಲ್ಲಿ ಅಕ್ರಮ ಸ್ಕ್ಯಾನಿಂಗ್ ಮಿಷ‌ನ್ ಪತ್ತೆ ಮಾಡಿದ್ದರು. ರಿಜಿಸ್ಟರ್ ಮಾಡಿಸದೆ‌ ಅಕ್ರಮವಾಗಿ ಸ್ಕ್ಯಾನಿಂಗ್ ಮಿಷನ್ ಇಟ್ಟುಕೊಂಡಿದ್ದರು. ಮತ್ತೆ ಮರುಪರಿಶೀಲನೆಗೆಂದು ಆಸ್ಪತ್ರೆಗೆ ಬಂದಾಗ ಮಹಿಳೆಯೊಬ್ಬರು ಗರ್ಭಪಾತ ಮಾಡಿಸಿಕೊಂಡಿರುವ ಅನುಮಾನ ಉಂಟಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಿದಾಗ ಆಪರೇಷನ್ ಥಿಯೇಟರ್​ನಲ್ಲಿ ಐದು ತಿಂಗಳ ಗರ್ಭಿಣಿಯ ಭ್ರೂಣ ಹತ್ಯೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳದಲ್ಲಿಯೇ 16 ವಾರಗಳ ಹೆಣ್ಣು ಭ್ರೂಣ ಪತ್ತೆಯಾಗಿದೆ.

ಈ ಘಟನೆ ಸಂಭವಿಸಿದ ಕೂಡಲೇ ಆಸ್ಪತ್ರೆಯ ಮಾಲೀಕ ವೈದ್ಯ ಶ್ರೀನಿವಾಸ್‌ ಮೊಬೈಲ್ ಫೋನ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳಿಲ್ಲದಕ್ಕೆ ಅಪಹರಣ ಮಾಡಿ ಸಾಕಲು ಮುಂದಾದ ಬಿಹಾರ ದಂಪತಿ: ಬಂಧನ

ಬೆಳಗ್ಗೆಯಷ್ಟೇ ಭ್ರೂಣಹತ್ಯೆ ಮಾಡಿ ಕವರನಲ್ಲಿ ಸುತ್ತಿಟ್ಟಿದ್ದರು. ಹೀಗಾಗಿ, ಭ್ರೂಣವನ್ನ ವಶಪಡಿಸಿಕೊಂಡು ಅಧಿಕಾರಿಗಳಿಂದ ತನಿಖೆ ಮಾಡಲಾಗುತ್ತಿದೆ. ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಗೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಿಂದ ದೂರು ನೀಡಲಾಗಿದೆ.

ಭ್ರೂಣ ಹತ್ಯೆ ಹಿನ್ನೆಲೆ ಎಸ್​ಪಿಜಿ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆಸ್ಪತ್ರೆ ಸೀಜ್ ಮಾಡಲು ತಯಾರಿ ಮಾಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...