ಬೆಂಗಳೂರು | ಪತ್ನಿಗೆ ಕಿರುಕುಳ; ಡಿವೈಎಸ್‌ಪಿ ವಿರುದ್ಧ ಎಫ್‌ಐಆರ್‌

Date:

Advertisements

ಪತ್ನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಡಿವೈಎಸ್‍ಪಿಯೊಬ್ಬರ ಮೇಲೆ ಎಫ್‍ಐಆರ್ ದಾಖಲಾಗಿದೆ.

ಡಿವೈಎಸ್‍ಪಿ ಶಂಕರಪ್ಪ ವಿರುದ್ಧ ಅವರ ಪತ್ನಿ ದೂರು ನೀಡಿದ್ದು, ನಗರದ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಕಾಲೇಜಿಗೆ ಹೋಗುತ್ತಿರುವ ಮಗನಿದ್ದು ಅನ್ಯ ಹೆಣ್ಣಿನ ಸಂಪರ್ಕ ಮಾಡಿ ಹಲ್ಲೆ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ಹಣಕ್ಕಾಗಿ ಪೀಡಿಸಿದ್ದಾರೆ. ಅಕ್ರಮವಾಗಿ ಆ ಹೆಣ್ಣಿನ ಜೊತೆ ಮದುವೆಯಾಗಿದ್ದಾರೆ. ನನಗೆ ನ್ಯಾಯ ಕೊಡಿಸಬೇಕೆಂದು ಡಿಜಿ ಹಾಗೂ ಐಜಿಪಿಗೂ ಡಿವೈಎಸ್‍ಪಿ ಪತ್ನಿ ದೂರು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

ನನ್ನ ಸಂಸಾರ ಹಾಳು ಮಾಡಬೇಡ ಎಂದು ಆ ಮಹಿಳೆಗೆ ಡಿವೈಎಸ್‍ಪಿ ಪತ್ನಿ ಪರಿಪರಿಯಾಗಿ ಕೇಳಿಕೊಂಡರೂ ಜೀವ ಬೆದರಿಕೆ ಹಾಕಿದ್ದಾರಂತೆ. ಸದ್ಯ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅಧಿಕಾರದ ಪ್ರಭಾವದಿಂದ ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಡಿವೈಎಸ್‍ಪಿ ಪತ್ನಿ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ವತಿಯಿಂದ ಅ.2ರಿಂದ ರಾಜ್ಯಾದ್ಯಂತ ʼಅರಿವು-ಮಾನವೀಯತೆʼ ಜಾಗೃತಿ ಅಭಿಯಾನ

ಕರ್ನಾಟಕ ರಾಜ್ಯ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ವತಿಯಿಂದ ಅ.2ರಿಂದ ರಾಜ್ಯಾದ್ಯಂತ...

ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು...

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ...

Download Eedina App Android / iOS

X