ಬೆಂಗಳೂರು ನಗರದ ಬೇಗೂರಿನಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬೇಗೂರು ರಸ್ತೆಯಲ್ಲಿರುವ ಎಸ್ಎಲ್ವಿ ಎಂಟರ್ಪ್ರೈಸಸ್ನ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸಂರ್ಕ್ಯೂಟ್ನಿಂದ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಆದರೆ ಖಚಿತ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನು ಓದಿದ್ದೀರಾ? ಉತ್ತರಕಾಶಿ | ಭೀಕರ ಅಗ್ನಿ ಅವಘಡ: ಮಹಿಳೆ ಸಾವು, ಹತ್ತು ಮನೆಗಳು ನಾಶ
ಇನ್ನು ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಸದ್ಯ ತನಿಖೆ ನಡೆಯುತ್ತಿದೆ.
In Bengaluru: Fire broke out in a building on Begur Road in southern part of the city. Cause of fire and casualties are yet to be ascertained. More details to follow pic.twitter.com/pwbYocctvR
— TOI Bengaluru (@TOIBengaluru) July 29, 2025
