ಬೆಂಗಳೂರು | ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್​ನಲ್ಲಿ ಭೀಕರ ಅಗ್ನಿ ದುರಂತ: ಸಿಬ್ಬಂದಿ ಯುವತಿ ಸಾವು

Date:

Advertisements

ಬೆಂಗಳೂರು ನಗರದ ರಾಜ್‌ಕುಮಾರ್ ರಸ್ತೆಯ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಯುವತಿಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಯುವತಿ ಶೋರೂಮ್‌ನ ಸಿಬ್ಬಂದಿ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳವು ಯುವತಿಯ ಮೃತದೇಹವನ್ನು ಹೊರತೆಗೆದಿದೆ.

ಇನ್ನು “ರಾಜ್‌ ಕುಮಾರ್‌ ರಸ್ತೆ, ನವರಂಗ್ ಬಾರ್ ಜಂಕ್ಷನ್ ಬಳಿ ಎಲೆಕ್ಟ್ರಿಕ್ ವೆಹಿಕಲ್ ಶೋರೂಮ್‌ಗೆ ಬೆಂಕಿ ಹತ್ತಿದ್ದು, ಮೆಜೆಸ್ಟಿಕ್‌ನಿಂದ ಹೊರಹೋಗುವ ಮತ್ತು ಒಳಬರುವ ವಾಹನ ಸಂಚಾರವು ನಿಧಾನಗತಿಯಲ್ಲಿರುತ್ತದೆ, ದಯಮಾಡಿ ಸಹಕರಿಸಿ” ಎಂದು ಬೆಂಗಳೂರು ನಗರ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ.

Advertisements

ಈ ಭೀಕರ ಅಗ್ನಿ ಅವಘಡದಲ್ಲಿ ಬರೋಬ್ಬರಿ 45 ಇವಿ ವಾಹನಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X