ಬೆಂಗಳೂರಿನ ಯಮಹಾ ಬೈಕ್ ಶೋರೂಂನಲ್ಲಿ ಬೆಂಕಿ: 50ಕ್ಕೂ ಹೆಚ್ಚು ವಾಹನಗಳು ಭಸ್ಮ

Date:

ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ, 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ.

- Advertisement -

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಇನ್ನೂ 8 ಗಂಟೆ ಸುಮಾರಿಗೆ ಸೆಕ್ಯೂರಿಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೆ ಸಹ ಬೆಂಕಿ ತಗುಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ದಲಿತ ಅಸ್ಮಿತೆಯ ಕತೆಯನ್ನು ಬಲ್ಲಿರಾ?

ತಕ್ಷಣ ಆಗ್ನಿಶಾಮಕ ಸಿಬ್ಬಂದಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅಷ್ಟರಲ್ಲಾಗಲೇ ದೊಡ್ಡ ಮಟ್ಟದಲ್ಲಿ ಬೆಂಕಿ ಅವರಿಸಿ ಶೋರೂಂನಲ್ಲಿದ್ದ 40ಕ್ಕೂ ಹೆಚ್ಚು ಬೈಕ್ ಹಾಗೂ ಶೋರೂಂ ಹಿಂಭಾಗದ ಸರ್ವಿಸ್ ಸೆಂಟರ್‌ನಲ್ಲಿದ್ದ 20ಕ್ಕೂ ಹೆಚ್ಚು ಬೈಕ್‍ಗಳು ಬೆಂಕಿಗೆ ಆಹುತಿಯಾಗಿವೆ.

ಅಗ್ನಿ ಅವಘಡ ಸಂಭಿವಿಸಿದ ಶೋರೂಂ ಪಕ್ಕದಲ್ಲಿ ಮತ್ತೊಂದು ಶೋರೂಂ ಇದ್ದು, ಅಲ್ಲಿಗೂ ಬೆಂಕಿ ವ್ಯಾಪಿಸಿತ್ತು. ಅಲ್ಲಿನ ಬೈಕ್‍ಗಳನ್ನು ತಕ್ಷಣ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...