ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು; ಎಡಿಜಿಪಿ ದರ್ಜೆಯ ಅಧಿಕಾರಿ ಅಮಾನತು

Date:

Advertisements
ದುರ್ಘಟನೆಗೆ ಪೊಲೀಸ್‌ ವೈಫಲ್ಯ ಮಾತ್ರವಲ್ಲ, ಸಂಭ್ರಮಾಚರಣೆ ಕಾರ್ಯಕ್ರಮ ನಡೆಸುವಲ್ಲಿ ರಾಜ್ಯ ಸರ್ಕಾರದ ಅತಿ ಉತ್ಸಾಹ, ಒತ್ತಡ ಹಾಗೂ ಕ್ರಿಕೆಟ್‌ ಅಸೋಸಿಯೇಷನ್‌ನ ಆತುರವೂ ಕಾರಣ

ಐಪಿಎಲ್ ಗೆದ್ದ ಆರ್‌ಬಿಸಿ ತಂಡದ ಸಂಭ್ರಮೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತ ಮತ್ತು 11 ಮಂದಿ ಸಾವು ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ. ಎಡಿಜಿಪಿ ದರ್ಜೆಯ ಪೊಲೀಸ್‌ ಅಧಿಕಾರಿಯನ್ನು ಅಮಾನತು ಮಾಡಿರುವುದು ಕರ್ನಾಟಕದ ಪೊಲೀಸ್‌ ಇತಿಹಾಸದಲ್ಲಿ ಇದೇ ಮೊದಲು ಎಂದು ಹೇಳಲಾಗಿದೆ.

ಕಾಲ್ತುಳಿತ, ಗದ್ದಲ, ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ದಯಾನಂದ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ. ಆದಾಗ್ಯೂ, ಬುಧವಾರ ನಡೆದ ದುರ್ಘಟನೆಗೆ ಪೊಲೀಸ್‌ ವೈಫಲ್ಯ ಮಾತ್ರವಲ್ಲ, ಸಂಭ್ರಮಾಚರಣೆ ಕಾರ್ಯಕ್ರಮ ನಡೆಸುವಲ್ಲಿ ರಾಜ್ಯ ಸರ್ಕಾರದ ಅತಿ ಉತ್ಸಾಹ, ಒತ್ತಡ ಹಾಗೂ ಕ್ರಿಕೆಟ್‌ ಅಸೋಸಿಯೇಷನ್‌ನ ಆತುರವೂ ಕಾರಣವೆಂದು ಹೇಳಲಾಗಿದೆ. ಹೀಗಾಗಿ, ಕೇವಲ ಪೊಲೀಸ್ ಅಧಿಕಾರಿಗಳ ತಲೆದಂಡ ಸಲ್ಲ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ.

ಬಿ ದಯಾನಂದ್ ಅವರು ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಆಗಿದ್ದರು. ಈ ಹುದ್ದೆಯು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದರ್ಜೆಯ ಹುದ್ದೆಯಾಗಿದೆ. ಮುಂದಿನ ದಿನಗಳಲ್ಲಿ ಬಡ್ತಿ ಪಡೆದಿದ್ದರೆ, ದಯಾನಂದ್‌ ಅವರು ಡಿಜಿ-ಐಜಿಪಿ ಹುದ್ದೆಯನ್ನು ಪಡೆಯುತ್ತಿದ್ದರು ಎಂದು ಹೇಳಲಾಗಿದೆ.

ದಯಾನಂದ್‌ ಅವರು ಮಾತ್ರವಲ್ಲದೆ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್‌.ಟಿ ಶೇಖರ್, ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್‌ಪಾರ್ಕ್‌ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಗಿರೀಶ್‌ ಎ.ಕೆ ಅವರನ್ನೂ ಅಮಾನತು ಮಾಡಲಾಗಿದೆ.

ದಯಾನಂದ್ ಅವರಿಂದ ತೆರವಾದ ಹುದ್ದೆಗೆ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್‌ ಅಶೋಕ್, “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನತೆ ನ್ಯಾಯ ಕೇಳುತ್ತಿದ್ದಾರೆ. ಹರಕೆಯ ಕುರಿಗಳನ್ನಲ್ಲ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ADGP ದರ್ಜೆಯ ಸಸ್ಪೆಂಡ್ ಆದ ಮೊದಲ ಅಧಿಕಾರಿ psi ಹಗರಣದ ಕಿಂಗ್ ಪಿನ್ adgp ಅಮೃತ ಪೌಲ್ ಎಂಬ ಅಧಿಕಾರಿಯಾನು ಈ ಹಿಂದೆ ಪಿಎಸ್ಐ ಹಗರಣದ ತನಿಖೆಯಲ್ಲಿ ಮಾಡಲಾಯಿತು

  2. ಇಂತಹ ಪ್ರಾಮಾಣಿಕ ಅಧಿಕಾರಿಗೆ ಈ ತರ ಶಿಕ್ಷೆ ಸರಿ ಇಲ್ಲ. ದಯವಿಟ್ಟು ಇವರ ಅಮಾನತ್ತು ಆದೇಶ ಹಿಂಪಡೀಬೇಕು
    ಇಲ್ಲದಿದ್ರೆ ಇದು ಸರ್ಕಾರಕ್ಕೆ ಕೆಟ್ಟ ಹೆಸರು…

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X