ವಂಚನೆ ಪ್ರಕರಣ | ವಿಚಾರಣೆ ವೇಳೆ ಕುಸಿದು ಬಿದ್ದ ಆರೋಪಿ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು

Date:

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ, ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಳೆದ ಎರಡು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆಯ ಎರಡನೇ ದಿನವಾದ ಶುಕ್ರವಾರ ಚೈತ್ರಾ ಅನಾರೋಗ್ಯದಿಂದ ಕುಸಿದು ಬಿದ್ದಿದ್ದಾರೆ. ಅವರನ್ನು ಸಿಸಿಬಿ ಅಧಿಕಾರಿಗಳು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶುಕ್ರವಾರ ಬೆಳಗ್ಗೆ 8 ಗಂಟೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾ ಅವರನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷಗಳ ಕಾಲ ವಿಚಾರಣೆ ವೇಳೆ ಏಕಾಏಕಿ ಪ್ರಜ್ಞೆ ಕಳೆದುಕೊಂಡ ಚೈತ್ರಾ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸದ್ಯ ಚೈತ್ರಾ ಅವರಿಗೆ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೈತ್ರಾ ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, ವಿಚಾರಣೆ ವೇಳೆ ಮಾನಸಿಕ ಒತ್ತಡ ಉಂಟಾಗಿ ಮೂರ್ಛೆ ಹೋಗಿದ್ದಾರೆ ಎನ್ನಲಾಗಿದೆ.

ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸೆ.23 ರವರೆಗೆ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಗುರುವಾರದಿಂದ ಸಿಸಿಬಿ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ಸಿಸಿಬಿ ಪೊಲೀಸರು ವಿಚಾರಣೆಗಾಗಿ ಕಚೇರಿಗೆ ಕರೆ ತಂದ ವೇಳೆ, ಚೈತ್ರಾ ಕುಂದಾಪುರ ಕಾರಿನಿಂದ ಇಳಿಯುವಾಗ, “ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗಡೆ ಬರುತ್ತದೆ. ಆಗ ದೊಡ್ಡ ದೊಡ್ಡವರ ಹೆಸರು ಆಚೆ ಬರುತ್ತೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಇರುವುದರಿಂದ ಈ ಷಡ್ಯಂತ್ರ ನಡೆದಿದೆ” ಎಂದು ಹೇಳುತ್ತಾ ಸಿಸಿಬಿ ಕಚೇರಿಯ ಒಳಗಡೆ ಹೋಗಿದ್ದರು.

ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಸ್ವಾಮೀಜಿ ಬಂಧನವಾದ್ರೆ, ಸತ್ಯ ಹೊರಬರಲಿದೆ: ಚೈತ್ರಾ ಕುಂದಾಪುರ

ಎ1 ಆರೋಪಿ ನೀವೆ ಅಲ್ವಾ ಎಂದು ಪ್ರಶ್ನಿಸಿದ್ದಕ್ಕೆ, “ಆಗಿರಲಿ, ಸತ್ಯ ಹೊರಗಡೆ ಬರುತ್ತೆ” ಎಂಬ ಹೇಳಿಕೆ ನೀಡಿದ್ದರು.

ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ₹5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು, ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಶ್ರೀ ಕೃಷ್ಣ ಮಠದ ಬಳಿ ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ಅನ್ಯಾಯ: ರಾಷ್ಟ್ರಪತಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ

ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ...

ತುಮಕೂರು | ಬೀಡಿ ಕಾರ್ಮಿಕರಿಗೆ ಪರ್ಯಾಯ ಪರಿಹಾರ ನೀಡದೆ ಮಾರಾಟ ನಿಷೇಧ ವಿಧೇಯಕ ಜಾರಿ; ಕಾರ್ಮಿಕರ ವಿರೋಧ

ರಾಜ್ಯದಲ್ಲಿರುವ ಸರಿಸುಮಾರು 6 ಲಕ್ಷದಿಂದ 7 ಲಕ್ಷ ಬೀಡಿ ಕಾರ್ಮಿಕರ ಬದುಕಿಗೆ...

ಸರ್ಕಾರಿ ಗೌರವದೊಂದಿಗೆ ನೆರವೇರಿದ ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ಸಂಸ್ಕಾರ: ಸಿಎಂ ಭಾಗಿ

ನಿನ್ನೆ(ಫೆ.25) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ...

ವಿಜಯಪುರ | ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಸಮಾಲೋಚನೆ ಸಭೆ

ನಮ್ಮ ದೇಶ ಬಹುಸಂಸ್ಕೃತಿಗೆ ಪ್ರಖ್ಯಾತಿಯನ್ನು ಪಡಿದಿದೆ. ವಿವಿಧತೆಯಲ್ಲಿ ಏಕತೆಯನ್ನು ನಮ್ಮ ರಾಷ್ಟ್ರ...