ವಂಚನೆ ಪ್ರಕರಣ: ವಿಮಾನ ನಿಲ್ದಾಣದಲ್ಲೇ ಮಾಜಿ ಪಿಡಿಒ ಬಂಧನ

Date:

ಸರ್ಕಾರಿ ಕೆಲಸ ಕೊಡಿಸುತ್ತೇನೆಂದು ಆಮಿಷವೊಡ್ಡಿ ಹಲವರಿಂದ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಮಾಜಿ ಪಿಡಿಒ ಯೋಗೇಂದ್ರ ಎಂಬವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

- Advertisement -

ಯೇಂಗೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆ, ಜೆ.ಸಿ ನಗರ ಪೊಲೀಸ್‌ ಠಾಣೆ ಹಾಗೂ ವಿಶ್ವೇಶ್ವರಪುರ ಪೊಲೀಸ್‌ ಠಾಣೆಗಳಲ್ಲಿ 2023ರಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಆತನನ್ನು ಚೆನ್ನಪ್ಪನಕೆರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಆಗಿದ್ದ ಯೋಗೇಂದ್ರ ಅವರನ್ನು ಕರ್ತವ್ಯಲೋಪದ ಆರೋಪದ ಮೇಲೆ 2020ರಲ್ಲಿ ವಜಾಗೊಳಿಸಲಾಗಿತ್ತು. ಸೇವೆಯಿಂದ ವಜಾಗೊಂಡ ಬಳಿಕ, ಬೆಂಗಳೂರಿಗೆ ಬಂದು ನೆಲೆಸಿದ್ದರು.

ಬೆಂಗಳೂರಿಗೆ ಬಂದ ಬಳಿಕ, ಸರ್ಕಾರಿ ಕೆಲಸ ಕೊಡಿಸುವುದಾಗಿ ಹಾಗೂ ಚಿನ್ನದ ಉದ್ಯಮ ಮತ್ತು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುತ್ತದೆಯೆಂದೂ ಹಲವರಿಂದ ಹಣ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸರ್ಕಾರಿ ಕೆಲಸ ಕೊಡಿಸುವುದಾಗಿ 17 ಲಕ್ಷ ರೂ. ಮತ್ತು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂದು 1.35 ಕೋಟಿ ರೂ.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ವಿರುದ್ಧ ಹಲವರು ದೂರು ದಾಖಲಿಸಿದ್ದರು. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಯೋಗೇಂದ್ರ ವಿದೇಶಕ್ಕೆ ಪರಾರಿಯಾಗಿದ್ದ. ಆತನ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ್ದರು. ಆತ ಶ್ರೀಲಂಕಾದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿದ್ದು, ಏರ್‌ಪೋರ್ಟ್‌ನ ಭದ್ರತಾ ಸಿಬ್ಬಂದಿ ಆತನನ್ನು ಗುರುತಿಸಿ, ವಶಕ್ಕೆ ಪಡೆದಿದ್ದಾರೆ. ಬಳಿಕ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...