ವಂಚನೆ ಪ್ರಕರಣ | ಇಂಡಿಯನ್​ಮನಿ ಫ್ರೀಡಂ ಆ್ಯಪ್​​ ಸಿಇಒ ಸಿಎಸ್ ಸುಧೀರ್​ ವಿಚಾರಣೆ

Date:

Advertisements
  • ಸಿಎಸ್ ಸುಧೀರ್ ಮತ್ತು ತಂಡದ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ
  • ಜನರನ್ನು ವಂಚಿಸುವ ಉದ್ದೇಶದಿಂದ ಇಂಡಿಯನ್ ​ಮನಿ ಫ್ರೀಡಂ ಆ್ಯಪ್ ಜಾರಿಗೆ ತಂದ ಸುಧೀರ್; ಯುವತಿ

ಯುವಕ-ಯುವತಿಯರಿಗೆ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿ ತಮ್ಮ ಆ್ಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್​ಮನಿ ಫ್ರೀಡಂ ಆ್ಯಪ್​​ ಸಿಇಒ ಸಿಎಸ್ ಸುಧೀರ್​ ಅನ್ನು ಬನಶಂಕರಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಂಚನೆಗೀಡಾಗಿರುವ ಯುವತಿ ಸೇರಿ ಒಟ್ಟು 21 ಮಂದಿ ಸಿಎಸ್‌ ಸುಧೀರ್ ವಿರುದ್ಧ ದೂರು ದಾಖಲಿಸಿದ್ದಾರೆ. ಸುಧೀರ್‌ ಸೇರಿದಂತೆ ಒಟ್ಟು 23 ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆದರೆ, ಸುಧೀರ್ ಹಾಗೂ ಇತರ ಆರೋಪಿಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತೆಗೆದುಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನ್ಯಾಯಾಲಯ ಷರತ್ತು ವಿಧಿಸಿದೆ” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆ ಎಂದು ಸುಧೀರ್ ಮತ್ತು ಅವನ ತಂಡದ ವಿರುದ್ಧ ನಯನಾ ಎಂಬ ಮಹಿಳೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisements

ಜನರನ್ನು ವಂಚಿಸುವ ಉದ್ದೇಶದಿಂದ ಸುಧೀರ್ ಹಾಗೂ ಇನ್ನಿತರರು ಸೇರಿ ಈ ಆ್ಯಪ್‌ ಅನ್ನು ಜಾರಿಗೆ ತಂದಿದ್ದಾರೆ. ಈ ಆ್ಯಪ್‌ ಪ್ರಚಾರ ಮಾಡಲು ನಿರುದ್ಯೋಗಿಗಳನ್ನೇ ಬಂಡವಾಳವಾಗಿ ಮಾಡಿಕೊಂಡಿರುವ ಸುಧೀರ್ ಮತ್ತು ತಂಡ ಅಮಾಯಕ ಯುವಕ ಮತ್ತು ಯುವತಿಯರನ್ನು ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಗೆ ಐಎಎಸ್‌ ಅಧಿಕಾರಿಯಿಂದ ವರದಕ್ಷಿಣೆ ಕಿರುಕುಳ; ದೂರು ದಾಖಲು

“ಮೊದಲಿಗೆ ಇವರು ಝೂಮ್‌ ಮಿಟೀಂಗ್‌ ಮೂಲಕ ಎಲ್ಲರಿಗೂ ಒಂದು ವಾರದ ತರಬೇತಿ ನೀಡುತ್ತಾರೆ. ಅದರಲ್ಲಿ ಹಣ ಗಳಿಸುವುದಕ್ಕೆ ದಾರಿ ಮತ್ತು ಅವರ ಆ್ಯಪ್‌ ಅನ್ನು ಜನರಿಗೆ ಹೇಗೆ ತಲುಪಿಸಬೇಕು ಎಂದು ತಿಳಿಸುತ್ತಾರೆ. ಆ್ಯಪ್‌ ಅನ್ನು ಹೆಚ್ಚು ಜನರ ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಸಿದರೇ, ಹೆಚ್ಚು ಜನರನ್ನು ಚಂದಾದಾರನ್ನಾಗಿ ಮಾಡಿದರೇ, ಪ್ರತಿ ತಿಂಗಳು ₹15,000 ಸಂಬಳ ನೀಡುವುದಾಗಿ ಹೇಳಿದ್ದಾರೆ. ಇನ್ನು ಹೆಚ್ಚು ಜನರು ಚಂದಾದಾರರಾದರೇ ಹೆಚ್ಚು ಹಣ ಗಳಿಸಬಹುದು ಎಂದೆನ್ನುತ್ತಾರೆ” ಎಂದು ಹೇಳಲಾಗಿದೆ.

“ಅವರು ಹೇಳಿದಂತೆಯೇ ಹಲವು ಯುವಕ-ಯುವತಿಯರು ಹಣ ಗಳಿಸಬಹುದೆಂದು ತಿಳಿದು ಸಂಬಂಧಿಕರು ಹಾಗೂ ಸ್ನೇಹಿತರನ್ನೇ ಚಂದಾದಾರರನ್ನಾಗಿ ಮಾಡಿಸಿದ್ದಾರೆ. ಯುವಕ–ಯುವತಿಯರಿಂದ ಎಲ್ಲ ಕೆಲಸ ಮಾಡಿಸಿಕೊಂಡ ಕಂಪನಿಯವರು, ನಿಗದಿತ ದಿನದೊಳಗೆ ಸಂಬಳ ನೀಡಿಲ್ಲ. ಕೆಲಸಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಯಾವುದೇ ಮಾಹಿತಿ ನೀಡಿಲ್ಲ. ಕಾರಣ ನೀಡದೇ ಎಲ್ಲರನ್ನೂ ಕೆಲಸದಿಂದ ತೆಗೆದಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X