ಬೆಂಗಳೂರು | ‘ಫ್ರೀಡಂ ಫ್ರಮ್‌ ಫ್ರೀಡಂ ಪಾರ್ಕ್’ ಪ್ರತಿಭಟನೆ; 100ಕ್ಕೂ ಹೆಚ್ಚು ಮಂದಿ ಬಂಧನ

Date:

ಬೆಂಗಳೂರು ನಗರದಾದ್ಯಂತ ಇರುವ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು ನಾಗರಿಕರಿಗೆ ಮರಳಿ ನೀಡಬೇಕೆಂದು ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ಸುಮಾರು 100ರಿಂದ 120 ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ನಗರದ ಮೌರ್ಯ ಸರ್ಕಲ್‌ನಲ್ಲಿ ಜಮಾಯಿಸಿದ‌ ಪ್ರತಿಭಟನಾಕಾರರು ‘ಫ್ರೀಡಂ ಫ್ರಮ್ ಫ್ರೀಡಂ ಪಾರ್ಕ್’ ಘೋಷ ಮೊಳಗಿಸಿದ್ದಾರೆ. “ನಗರದಲ್ಲಿ ಸಾರ್ವಜನಿಕ ಪ್ರತಿಭಟನೆಗಳು, ಧರಣಿ ಮತ್ತು ಮೆರವಣಿಗೆಗಳನ್ನು ಕೇವಲ ಫ್ರೀಡಂ ಪಾರ್ಕ್‌ಗೆ ಮಾತ್ರ ಸೀಮಿತಗೊಳಿಸಿರುವ 2021ರ ನಿಯಮವನ್ನು ರದ್ದುಪಡಿಸಬೇಕು” ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ,...

ಕಾಡು ಎಂದರೆ ಕೇವಲ ಮರಗಳು, ಪ್ರಾಣಿಗಳು ಮತ್ತು ಭೌಗೋಳಿಕ ಪ್ರದೇಶವಲ್ಲ. ಅದು ಸಾವಿರಾರು ವರ್ಷಗಳಿಂದ ಮನುಷ್ಯ ಮತ್ತು ಪ್ರಕೃತಿ ಪರಸ್ಪರ ಅವಲಂಬನೆಯೊಂದಿಗೆ ಬದುಕಿಕೊಂಡು ಬಂದಿರುವ ಜೀವಂತ ಪರಿಸರ ವ್ಯವಸ್ಥೆ. ಈ ವ್ಯವಸ್ಥೆಯೊಂದಿಗೆ ಅತ್ಯಂತ...

“ನಗರದ ಎಲ್ಲ ಪ್ರತಿಭಟನೆಗಳನ್ನು ಒಂದೇ ಸ್ಥಳಕ್ಕೆ ಸೀಮಿತಗೊಳಿಸಿರುವುದು ಅನ್ಯಾಯ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರಿಗೆ ಇರುವ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಸಚಿವರು, ಶಾಸಕರು ಹಾಗೂ ಆಡಳಿತಾರೂಢ ಪಕ್ಷದ ನಾಯಕರಿಗೆ ನಗರದಲ್ಲಿ ಎಲ್ಲಿ ಬೇಕಾದರೂ ಮುಕ್ತವಾಗಿ ಪ್ರತಿಭಟನೆ ಅಥವಾ ರ‍್ಯಾಲಿ ನಡೆಸಲು ಅವಕಾಶವಿದೆ. ಆದರೆ, ಸಾಮಾನ್ಯ ನಾಗರಿಕರು ಮತ್ತು ಕಾರ್ಮಿಕರಿಗೆ ಮಾತ್ರ ಕಠಿಣ ನಿರ್ಬಂಧ ವಿಧಿಸಿರುವುದು ತಾರತಮ್ಯದ ನೀತಿಯಾಗಿದೆ” ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.

ಸಂವಿಧಾನ ದಿನದ ಹಿನ್ನೆಲೆಯಲ್ಲಿ ಸರ್ಕಾರವು ಸಂವಿಧಾನದ ಆಶಯಗಳಿಗೆ ಗೌರವ ನೀಡಿ ಈ ನಿಯಮದಲ್ಲಿ ಸಕಾರಾತ್ಮಕ ಬದಲಾವಣೆ ತರಬಹುದು ಎಂಬ ನಿರೀಕ್ಷೆಯೊಂದಿಗೆ ವಿವಿಧ ಸಂಘಟನೆಗಳು ಬೀದಿಗಿಳಿದಿದ್ದವು. ಅಖಿಲ ಭಾರತ ಕೇಂದ್ರೀಯ ಕಾರ್ಮಿಕ ಸಂಘಗಳ ಮಂಡಳಿ (AICCTU) ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಒಕ್ಕೂಟಗಳು ಹಾಗೂ ನಾಗರಿಕ ಹಕ್ಕುಗಳ ಹೋರಾಟಗಾರರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜನರ ಧ್ವನಿಯನ್ನು ಆಡಳಿತ ವ್ಯವಸ್ಥೆಗೆ ನೇರವಾಗಿ ತಲುಪಿಸಲು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದ್ದಾರೆ.

ಮತ್ತೊಂದೆಡೆ, “ಈ ವಿಷಯದ ಕುರಿತು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.‌ ಕೇವಲ ಒಂದೇ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಸಮಸ್ಯೆಗೆ ಸ್ಪಷ್ಟ ಮತ್ತು ಕಾನೂನಾತ್ಮಕ ಪರಿಹಾರ ದೊರೆಯುವವರೆಗೆ, ಫ್ರೀಡಂ ಪಾರ್ಕ್ ಹೊರತುಪಡಿಸಿ ನಗರದ ಇತರ ಭಾಗಗಳಲ್ಲಿ ಪ್ರತಿಭಟನೆ ನಡೆಸುವವರನ್ನು ಪೊಲೀಸರು ವಶಕ್ಕೆ ಪಡೆಯುವ ಪ್ರಕ್ರಿಯೆ ಮುಂದುವರಿಯುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

“ನಗರದ ಸಂಚಾರ ದಟ್ಟಣೆ ಮತ್ತು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಲಿ ಇರುವ ನಿಯಮಗಳು ಮತ್ತು ಕಾನೂನುಬದ್ಧ ನಿರ್ಬಂಧಗಳು ಯಥಾಸ್ಥಿತಿಯಲ್ಲಿ ಜಾರಿಯಲ್ಲಿರುತ್ತವೆ” ಎಂದು ಪೊಲೀಸ್ ಇಲಾಖೆ ತಿಳಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 16 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ದಕ್ಷಿಣ...

ಸಂಸತ್ತಿನ ಈ ವಿಶೇಷ ಅಧಿವೇಶನ ಮಹಿಳೆಯರಿಗಾಗಿ ಅಲ್ಲ; ಕ್ಷೇತ್ರ ಮರುವಿಂಗಡಣೆಗಾಗಿ!

ಮಹಿಳಾ ಮೀಸಲಾತಿಯನ್ನು ಯಾರೂ ವಿರೋಧಿಸಲು ಧೈರ್ಯ ಮಾಡುವುದಿಲ್ಲ ಎಂಬುದು ಸರ್ಕಾರದ ಲೆಕ್ಕವಾಗಿದೆ....

ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಮಾಅತೆ ಇಸ್ಲಾಮೀ ಹಿಂದ್ ತೀವ್ರ ಖಂಡನೆ

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿರುದ್ಧ ಇತ್ತೀಚೆಗೆ ಆಡಿರುವ ಅವಹೇಳನಕಾರಿ...

ಸಂಸ್ಕೃತದ ಗೋಡೆ ಕೆಡವಿ ಕನ್ನಡ ಕಟ್ಟಿದ ಕವಿ ಕನಕದಾಸ!

ಕೇವಲ ಭಕ್ತರಾಗಿ ಮಾತ್ರವಲ್ಲದೆ, ಅಡುಗೆಮನೆಯ ಬೀಸುವ ಕಲ್ಲಿನಿಂದ ಹಿಡಿದು ಹೊಲದ ರಾಗಿಯವರೆಗೆ...