ಯುವತಿ ಜೊತೆ ನಿಶ್ಚಿತಾರ್ಥ; ಯುವಕನ ಮೇಲೆ ಬಿಸಿನೀರು ಎರಚಿದ ಸ್ನೇಹಿತೆ

Date:

  • ವಿವಾಹವಾಗಿದ್ದನ್ನು ಮುಚ್ಚಿಟ್ಟು ಯುವಕನನ್ನು ಪ್ರೀತಿಸುತ್ತಿದ್ದ ಮಹಿಳೆ
  • ಹುಟ್ಟುಹಬ್ಬದ ನೆಪ ಹೇಳಿ ಮನೆಗೆ ಕರೆದು ಬಿಸಿನೀರು ಎರಚಿದ್ದ ಮಹಿಳೆ

ಅನ್ಯ ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಯುವಕನ ಮೇಲೆ ಆತನ ಸ್ನೇಹಿತೆ ಬಿಸಿನೀರು ಎರಚಿ, ಗಾಯಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಕಲಬುರಗಿ ಮೂಲದ ವಿಜಯ್ ಕುಮಾರ್ ಗಾಯಗೊಂಡಿರುವ ಯುವಕ. ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಮೇಲೆ ಬಿಸಿನೀರು ಎರಚಿದ ಮಹಿಳೆ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿಜಯ್ ಕುಮಾರ್ ಬಟ್ಟೆ ಮಾರಾಟ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದರು. ಆತನಿಗೆ ತನ್ನದೇ ಜಿಲ್ಲೆಯ ಮಹಿಳೆಯೊಬ್ಬರು ಪರಿಚಯವಾಗಿದ್ದರು. ಇಬ್ಬರ ನಡುವೆ ಸ್ನೇಹವಿತ್ತು. ಆದರೆ, ಆಕೆಗೆ ವಿವಾಹವಾಗಿದ್ದರೂ, ಈತನನ್ನು ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.

“ಆಕೆಗೆ ವಿವಾಹವಾಗಿರುವ ವಿಚಾರ ತಿಳಿದುಕೊಂಡ ವಿಜಯ್, ಆಕೆಯಿಂದ ಅಂತರ ಕಾಯ್ದುಕೊಂಡಿದ್ದ. ಅಲ್ಲದೆ, ಇತ್ತೀಚೆಗೆ ಬೇರೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ” ಎಂದು ಪೊಲೀಸರು ತಿಳಿಸಿದ್ದಾರೆ.

“ಮೇ 25ರಂದು ಮಹಿಳೆ, ತನ್ನ ಹುಟ್ಟುಹಬ್ಬದ ಆಚರಣೆಗೆಂದು ವಿಜಯ್‌ನನ್ನು ತನ್ನ ಕೊಠಡಿಗೆ ಕರೆಸಿಕೊಂಡಿದ್ದರು. ಈ ವೇಳೆ, ವಿಜಯ್‌ ಮೇಲೆ ಬಿಸಿನೀರು ಎರಚಿ, ಮಹಿಳೆ ಪರಾರಿಯಾಗಿದ್ದಾರೆ. ಮನೆ ಮಾಲೀಕರ ಸಹಾಯದಿಂದ ವಿಜಯ್ ಆಸ್ಪತ್ರೆಗೆ ದಾಖಲಾಗಿದ್ದಾರೆ” ಎಂದು ಪೊಲೀಸರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...