ಆಗಸ್ಟ್‌ 1 ರಿಂದ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆಯಲ್ಲಿ ಶೇ. 10ರಷ್ಟು ಹೆಚ್ಚಳ

Date:

  • ಶೇ. 35ರಷ್ಟು ನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳ
  • ಒಂದು ಕೆ.ಜಿ ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳ

ರಾಜ್ಯದಲ್ಲಿ ವಿದ್ಯುತ್ ದರ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾದ ಕಾರಣ ಆಗಸ್ಟ್‌ 1 ರಿಂದ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆಯಲ್ಲಿ ಶೇ. 10ರಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘ ತಿಳಿಸಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬೃಹತ್ ಬೆಂಗಳೂರು ಹೋಟೆಲ್‌ ಸಂಘದ ಅಧ್ಯಕ್ಷ ಪಿ ಸಿ ರಾವ್, “ಹೋಟೆಲ್‌ ತಿಂಡಿ-ತಿನಿಸುಗಳ ಬೆಲೆಯಲ್ಲಿ ಶೇ. 10 ರಷ್ಟು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಆಗಸ್ಟ್‌ 1ರಿಂದ ₹3 ಹೆಚ್ಚಳವಾಗಲಿದೆ. ಒಂದು ಕೆ.ಜಿ ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳವಾಗಿದೆ. ನೀರಿನ ಬೆಲೆ ಹೆಚ್ಚಳ ಮಾಡುವ ಪ್ರಸ್ತಾವನೆ ಇದೆ. ಈಗಾಗಲೇ, ಟೊಮೆಟೊ, ಅಕ್ಕಿ ಸೇರಿದಂತೆ ದಿನನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳವಾಗಿದೆ” ಎಂದರು.

“ಶೇ. 35ರಷ್ಟು ನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳವಾಗಿದೆ. ಇದರಿಂದ ಕಡಿಮೆ ದರಗಳಲ್ಲೇ ಹೋಟೆಲ್‌ ಉದ್ಯಮ ನಡೆಸುವುದು ಕಷ್ಟಕರವಾಗಲಿದೆ. ಮುಂದಿನ ದಿನಗಳಲ್ಲಿ ಉದ್ಯಮದಲ್ಲಿ ಕುಸಿತ ಉಂಟಾಗುವ ಸಾಧ್ಯತೆ ಎದುರಾಗಲಿದೆ. ಹಾಗಾಗಿ, ಶೇ. 10 ರಷ್ಟು ತಿಂಡಿ-ತಿನಿಸುಗಳ ದರ ಹೆಚ್ಚಳ ಮಾಡಲಾಗುವುದು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 2 ಟನ್‌ ಟೊಮ್ಯಾಟೊ ಸಮೇತ ಬೊಲೆರೋ ವಾಹನ ಕದ್ದಿದ್ದ ಆರೋಪಿಗಳ ಬಂಧನ

“ಕಾಫಿ ಮತ್ತು ಚಹಾ ಬೆಲೆ ₹2 ರಿಂದ ₹3 ಹೆಚ್ಚಳವಾಗಲಿದೆ. ತಿಂಡಿ–ತಿನಿಸುಗಳ ದರದಲ್ಲಿ ₹5 ಹಾಗೂ ಊಟಕ್ಕೆ ₹10 ಹೆಚ್ಚಳವಾಗಲಿದೆ. ಈಗಾಗಲೇ ಕೆಲ ಹೋಟೆಲ್‌ಗಳಲ್ಲಿ ದರಗಳನ್ನು ಹೆಚ್ಚಿಸಲಾಗಿದೆ. ಅಧಿಕೃತವಾಗಿ ಆಗಸ್ಟ್‌ 1ರಂದು ಎಲ್ಲ ತಿಂಡಿ–ತಿನಿಸುಗಳ ದರಗಳಲ್ಲಿ ಹೆಚ್ಚಳವಾಗಲಿದೆ. ಬೆಂಗಳೂರು ಹೋಟೆಲ್‌ ಉದ್ಯಮ ತಿಂಡಿ-ತಿನಿಸುಗಳ ಶುಚಿ-ರುಚಿಯಲ್ಲಿ ಹೆಸರುವಾಸಿಯಾಗಿದೆ. ಎಂದಿನಂತೆ ಅದನ್ನು ಕಾಪಾಡಿಕೊಂಡು ಬರಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಹಿಳೆಗೆ ಬೆದರಿಸಿ ಹಣ ಸುಲಿಗೆ; ನಾಲ್ವರು ಪೊಲೀಸರ ಅಮಾನತು

ಇತ್ತೀಚಿಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ ₹8,000...

ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

ಚಿನ್ನಾಭರಣಕ್ಕಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್...

ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಪ್ರಕರಣ ಭೇಧಿಸಿದ ರೈಲ್ವೆ ಪೊಲೀಸರು

ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ...

ಬೆಂ.ಗ್ರಾಮಾಂತರ | ಮಾ.4ರಂದು ನೆಲಮಂಗಲಕ್ಕೆ ಮುಖ್ಯಮಂತ್ರಿ ಭೇಟಿ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...