ಬೆಂಗಳೂರು ದಕ್ಷಿಣದ ರಸ್ತೆಗುಂಡಿ, ಕಸದ ಸಮಸ್ಯೆ ಪತ್ತೆಗೆ ಇನ್ಮುಂದೆ ‘ಎಐ’ ತಂತ್ರಜ್ಞಾನ!

Date:

ರಾಜಧಾನಿ ಬೆಂಗಳೂರಿನಲ್ಲಿ ದಶಕಗಳಿಂದ ಬಾಧಿಸುತ್ತಿರುವ ರಸ್ತೆಗುಂಡಿ ಹಾಗೂ ಎಲ್ಲೆಂದರಲ್ಲಿ ಕಸ ಚೆಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮುಂದಾಗಿದೆ. ಆಧುನಿಕ ಕೃತಕ ಬುದ್ಧಿಮತ್ತೆ (AI) ಹಾಗೂ ಕಂಪ್ಯೂಟರ್ ವಿಷನ್ ತಂತ್ರಜ್ಞಾನದ ಮೊರೆ ಹೋಗಿದೆ. ಈ ಬಗ್ಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ ಕೆ.ಎನ್‌.ರಮೇಶ್‌ ಮಾಹಿತಿ ನೀಡಿದ್ದಾರೆ.

- Advertisement -

ನಗರದಾದ್ಯಂತ ರಸ್ತೆಗಳ ಸ್ಥಿತಿಗತಿ ಹಾಗೂ ನೈರ್ಮಲ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ವಿಶೇಷ ವಾಹನಗಳಿಗೆ AI ಚಾಲಿತ ಕ್ಯಾಮೆರಾಗಳು ಮತ್ತು ಸಂವೇದಕಗಳನ್ನು ಅಳವಡಿಸುತ್ತಿದೆ. ಈ ವಾಹನಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸುವಾಗ, ರಸ್ತೆಯಲ್ಲಿರುವ ಗುಂಡಿಗಳು, ಬಿರುಕುಗಳು ಹಾಗೂ ರಸ್ತೆಬದಿಯಲ್ಲಿ ಅನಧಿಕೃತವಾಗಿ ಬಿದ್ದಿರುವ ಕಸದ ರಾಶಿಯನ್ನು ಸ್ವಯಂಚಾಲಿತವಾಗಿ ಗ್ರಹಿಸಿ ಚಿತ್ರೀಕರಿಸುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನೂ ಓದಿ: ಬೆಂಗಳೂರು | ತೆರಿಗೆ ಕಟ್ಟುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

ಈ ಎಐ ತಂತ್ರಜ್ಞಾನ ಕಾರ್ಯನಿರ್ವಹಿಸುವ ವಿಧಾನ

ಕ್ಯಾಮೆರಾಗಳು ಪತ್ತೆಹಚ್ಚಿದ ರಸ್ತೆಗುಂಡಿ ಮತ್ತು ಕಸದ ರಾಶಿಯ ನಿಖರವಾದ ಜಿಪಿಎಸ್ ಲೊಕೇಶನ್ ಅನ್ನು ಪಾಲಿಕೆಯ ಸೆಂಟ್ರಲ್ ಕಂಟ್ರೋಲ್ ರೂಮ್‌ಗೆ ರವಾನಿಸುತ್ತವೆ. ಪತ್ತೆಯಾದ ಸಮಸ್ಯೆಯ ತೀವ್ರತೆಯನ್ನು ಆಧರಿಸಿ, AI ವ್ಯವಸ್ಥೆಯು ಸಂಬಂಧಪಟ್ಟ ವಾರ್ಡ್‌ನ ಎಂಜಿನಿಯರ್‌ಗಳು ಹಾಗೂ ನೈರ್ಮಲ್ಯ ಪರಿವೀಕ್ಷಕರಿಗೆ ತಕ್ಷಣವೇ ಕಾರ್ಯಾದೇಶ ಮತ್ತು ಮಾಹಿತಿಯನ್ನು ರವಾನಿಸುತ್ತದೆ. ಸಮಸ್ಯೆ ಬಗೆಹರಿದ ನಂತರ ಎಂಜಿನಿಯರ್‌ಗಳು ದುರಸ್ತಿಪಡಿಸಿದ ಫೋಟೋವನ್ನು ವ್ಯವಸ್ಥೆಗೆ ಅಪ್‌ಲೋಡ್ ಮಾಡಬೇಕಾಗುತ್ತದೆ. AI ಸಿಸ್ಟಮ್ ಅದನ್ನು ಮರು-ಪರಿಶೀಲಿಸಿದ ನಂತರವೇ ದೂರು ಕ್ಲೋಸ್ ಆಗುತ್ತದೆ.

ಈ ತಂತ್ರಜ್ಞಾನದ ಬಳಕೆಯಿಂದ ಸಾರ್ವಜನಿಕರ ದೂರುಗಳಿಗೆ ಕಾಯದೆ ಜಿಬಿಎ ಸಿಬ್ಬಂದಿಯೇ ಸ್ವತಃ ಮುಂಚಿತವಾಗಿ ಸಮಸ್ಯೆಗಳನ್ನು ಪತ್ತೆಹಚ್ಚಿ ಪರಿಹರಿಸಲು ಸಾಧ್ಯವಾಗುತ್ತದೆ. ಇದರಿಂದಾಗಿ ಸಾರ್ವಜನಿಕ ಸಾರಿಗೆ ಸಂಚಾರ ಸುಗಮವಾಗಲಿದ್ದು, ನಗರದ ನೈರ್ಮಲ್ಯ ಮಟ್ಟವೂ ಗಮನಾರ್ಹವಾಗಿ ಸುಧಾರಿಸಲಿದೆ ಎಂದು ಪಾಲಿಕೆ ಅಧಿಕಾರಿಗಳು ಭರವಸೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...