ಗ್ಯಾರಂಟಿ ಯೋಜನೆ ಫಲಾನುಭವ ಪಡೆಯುವಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಸಂವಾದ

Date:

ಗೃಹಲಕ್ಷ್ಮಿ ಯೋಜನೆಯು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಸ್ತೀರ್ಣ ಮಾಡಿರುವುದು ಬಹುದೊಡ್ಡ ಸಂತಸದ ವಿಚಾರ. ಆದರೆ, ಕೆಲ ಲಿಂಗತ್ವ ಅಲ್ಪಸಂಖ್ಯಾತರಿಗೆ ದಾಖಲೀಕರಣ, ಮನೆ ಬಾಡಿಗೆಗೆ ನೀಡದಿರುವುದು, ವಾಸಸ್ಥಳ ದೃಢೀಕರಣ ನೀಡುವಲ್ಲಿ ಗೊಂದಲಗಳು ಎದುರಾಗಿದ್ದು, ಐಡೆಂಟಿಟಿ ಕಾರ್ಡ್ ಪಡೆಯುವುದು ಕಷ್ಟವಾಗಿದೆ. ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಲಿಂಗತ್ವ ಅಲ್ಪಸಂಖ್ಯಾತರು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಮಹರೋಜ್ ಖಾನ್‌ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ.

- Advertisement -

ಶನಿವಾರ, ಬೆಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಸಂಸ್ಥೆ ಮತ್ತು ಒಂದೆಡೆ ಸಂಸ್ಥೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಹೋರಾಜ್ ಖಾನ್ ಅವರು ಅಂತರ್ಲಿಂಗಿ ಲಿಂಗತ್ವ ಮತ್ತು ಲೈಂಗಿಕತೆ ಅಲ್ಪಸಂಖ್ಯಾತ ಸಮುದಾಯದೊಂದಿಗೆ ಸಂವಾದ ನಡೆಸಿದರು. ಸಭೆಯಲ್ಲಿ ನೆರೆದಿದ್ದ ಸಮುದಾಯದ ಪ್ರತಿನಿಧಿಗಳು ತಾವು ಎದುರಿಸುತ್ತಿರುವ ಕಷ್ಟಗಳ ಕುರಿತು ಬೆಳಕು ಚೆಲ್ಲಿದರು. ಶಕ್ತಿ ಯೋಜನೆಯಿಂದ ಅನೇಕ ಬಸ್ ಚಾಲಕರು ಹಾಗೂ ಕಂಡಕ್ಟರ್‌ಗಳಿಗೆ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಮಾಹಿತಿ ಇಲ್ಲದೆ, ತಮಗೆ ಸಾರ್ವಜನಿಕವಾಗಿ ನಿಂದಿಸುತ್ತಿರುವ ಕುರಿತು ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಅನ್ನಭಾಗ್ಯ ಪಡೆಯಲು ಪಡಿತರ ಚೀಟಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಹೆಚ್ಚಾಗಿ ಸಿಗುತ್ತಿಲ್ಲ. ಏಕೆಂದರೆ, ಪಡಿತರ ಚೀಟಿಯು ಕೌಟುಂಬಿಕ ವ್ಯವಸ್ಥೆಯನ್ನು ಕೇಳುತ್ತದೆ. ಆದರೆ, ತಾವು ಕುಟುಂಬಗಳಿಂದ ಹೊರಗಿದ್ದು, ಕುಟುಂಬಗಳಿಲ್ಲದೆ ಬದುಕುತ್ತಿದ್ದೇವೆ. ಈ ಕುರಿತು ವಿಶೇಷವಾದ ಗಮನ ಹರಿಸಬೇಕು. ಪಡಿತರ ಚೀಟಿ ವ್ಯವಸ್ಥೆಯಲ್ಲಿ ಪ್ರತ್ಯೇಕವಾಗಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು” ಎಂದು ಆಗ್ರಹಿಸಿದರು.

ಮನವಿಯನ್ನು ಆಲಿಸಿದ ಮೆಹರೋಜ್ ಖಾನ್, “ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗುವುದು” ಎಂದು ಭರವಸೆ ನೀಡದರು.

ಸಂವಾದ ಕಾರ್ಯಕ್ರಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಅಕ್ಕೈ ಪದ್ಮಶಾಲಿ, ಸೌಮ್ಯ, ಶಮಾ, ಪ್ರಕಾಶಿ, ಅಭಿದ ಬೇಗಂ, ಕವಿತಾ ಕೃಷ್ಣಮೂರ್ತಿ, ಸಮೀರ್, ರಕ್ಷಿತಾ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...