ಜಿಬಿಎ ಚುನಾವಣೆ ವಿಳಂಬ? : ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ

Date:

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಮತ್ತಷ್ಟು ಮುಂದೂಡುವ ಸಾಧ್ಯತೆ ಎದುರಾಗಿದೆ. ನಗರದಲ್ಲಿ ನಡೆಯಲಿರುವ ಜನಗಣತಿ ಹಿನ್ನೆಲೆ, ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

- Advertisement -

ಜನಗಣತಿ ಕಾರ್ಯಕ್ಕೆ ಸರ್ಕಾರ ಹಾಗೂ ಜಿಬಿಎ ಸಿಬ್ಬಂದಿಯನ್ನು ನಿಯೋಜಿಸುವುದರಿಂದ, ಚುನಾವಣೆಯನ್ನು ನಡೆಸಲು ಅಗತ್ಯ ಸಿಬ್ಬಂದಿ ಕೊರತೆ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಹಲವಾರು ಸಿಬ್ಬಂದಿಗಳು ಜನಗಣತಿ ಕಾರ್ಯದಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇರುವುದರಿಂದ, ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸುವುದು ಕಷ್ಟಕರವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಮೀರಿ, ವಾರ್ಡ್‌ಗಳ ಗಡಿ ಗುರುತಿಸುವ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಕಾಲಾವಕಾಶ ಅಗತ್ಯವಿರುವುದರಿಂದ, ಚುನಾವಣೆಯ ವೇಳಾಪಟ್ಟಿಗೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ : ಪ್ರಸ್ತುತ ಭಾರತಕ್ಕೆ ಡಾ. ಬಿ ಆರ್‌ ಅಂಬೇಡ್ಕರ್‌ ಅವರು ಏಕೆ ಅನಿವಾರ್ಯ?

ಈ ಹಿನ್ನೆಲೆಯಲ್ಲಿ, ಜಿಬಿಎ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು, ಚುನಾವಣೆಯನ್ನು ಕನಿಷ್ಠ ಎರಡು ರಿಂದ ಮೂರು ತಿಂಗಳುಗಳ ಕಾಲ ಮುಂದೂಡಲು ಅನುಮತಿ ಕೋರುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂದು ಜಿಬಿಎ ಮೂಲಗಳು ಮಾಹಿತಿ ನೀಡಿದರೆ.ಅಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.

ಒಟ್ಟಾರೆ, ಜನಗಣತಿ ಮತ್ತು ಆಡಳಿತಾತ್ಮಕ ಸವಾಲುಗಳ ನಡುವೆ ಜಿಬಿಎ ಚುನಾವಣೆ ಮುಂದೂಡುವ ನಿರ್ಧಾರಕ್ಕೆ ಸರ್ಕಾರ ಒಲವು ತೋರಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....