ಬೆಂಗಳೂರಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ, ಸಹಕರಿಸದಿದ್ದಾಗ ಅತ್ಯಾಚಾರ; ಇಬ್ಬರ ಬಂಧನ

Date:

ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯಿಸಿದ್ದು, ಸಹಕರಿಸದಿದ್ದಾಗ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿಯೊಬ್ಬಳು ನೀಡಿದ್ದ ದೂರಿನ ಅನ್ವಯ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಹರೀಶ್, ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಬೆಂಗಳೂರು ಹೊರವಲಯದಲ್ಲಿ ಪಾರ್ಟಿಗೆಂದು ಕರೆದೊಯ್ದು ಸ್ನೇಹಿತನೊಂದಿಗೆ ಸಹಕರಿಸುವಂತೆ ಒತ್ತಾಯಿಸಿದ್ದ. ಆಕೆ ಒಪ್ಪದಿದ್ದಾಗ ಆರೋಪಿಗಳು ಅತ್ಯಾಚಾರವೆಸಗಿದ್ದಾರೆಂದು ದೂರು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸ್ವಿಂಗರ್ಸ್ ವಾಟ್ಸ್ ಆಪ್ ಗ್ರೂಪ್

ವಾಟ್ಸ್ ಆಪ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಎಕ್ಸ್ ಚೇಂಜ್ ಮಾಡಿಕೊಳ್ಳುತ್ತಿದ್ದರು. ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನ ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಎಸಗಿದ್ದ.

ದೂರು ಆಧರಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಮೊಬೈಲ್‌ ಪರಿಶೀಲನೆ ವೇಳೆ ಭಯಾನಕ‌ ಸತ್ಯ ಬಯಲಾಗಿದೆ. ಮೊಬೈಲ್ ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೋಗಳು ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್​ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...