ಬೆಂಗಳೂರು | ‘2,000 ರೂ. ನೋಟು ಕೊಟ್ಟರೆ ಹಣದ ಮಳೆ ಸುರಿಯುತ್ತದೆ’; ಜನರನ್ನು ವಂಚಿಸಿದ್ದ 10 ಮಂದಿ ಬಂಧನ

Date:

ಧಾರ್ಮಿಕ ವಿಧಿವಿಧಾನಗಳ ಮೂಲಕ ಹಣದ ಮಳೆ ಸುರಿಸುವುದಾಗಿ ಭರವಸೆ ನೀಡಿ 2,000 ರೂ. ಮುಖಬೆಲೆಯ (ಆರ್‌ಬಿಐ ಹಿಂಪಡೆದುಕೊಂಡಿದೆ) ನೋಟುಗಳನ್ನು ನಾಗರಿಕರಿಂದ ಸಂಗ್ರಹಿಸಿ, ವಂಚಿಸಿದ್ದ 10 ಮಂದಿಯ ಗುಂಪೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಮಾರು 18 ಲಕ್ಷ ರೂ. ಮೌಲ್ಯದ 2,000 ರೂ. ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಆರ್‌ಬಿಐನಲ್ಲಿ ಠೇವಣಿ ಇಡಲಾಗಿದ್ದ ಕೆಲವು 2,000 ರೂ. ಮುಖಬೆಲೆಯ ನೋಟುಗಳ ಸೀರಿಸ್‌ ಸಂಖ್ಯೆಗಳು ಮತ್ತು ಕೋಡ್‌ಗಳನ್ನು ತಿರುಚಲಾಗಿದೆ ಎಂದು ಆರ್‌ಬಿಐ ವ್ಯವಸ್ಥಾಪರು ಅಕ್ಟೊಬರ್‌ನಲ್ಲಿ ದೂರು ನೀಡಿದ್ದರು. ಅವರ ದೂರಿನಿಂದಾಗಿ ಪ್ರಕರಣವು ಬೆಳಕಿಗೆ ಬಂದಿದೆ. ತನಿಖೆ ನಡೆಸಿದ ಹಲಸೂರು ಗೇಟ್ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಆರೋಪಿಗಳು – 2018ರಿಂದ ನಿರ್ದಿಷ್ಟ ಸರಣಿಯ (ಸೀರಿಸ್‌) M, N, O, P ಮತ್ತು Gಗಳಲ್ಲಿ ಮುದ್ರಿತವಾದ 2,000 ರೂ. ನೋಟುಗಳನ್ನು ತಮಗೆ ನೀಡಿದರೆ, ಧಾರ್ಮಿಕ ಆಚರಣೆಗಳನ್ನು ನಡೆಸಿ ಹಣವನ್ನು ನೂರು ಪಟ್ಟು ಹೆಚ್ಚಿಸಿ ಹಣದ ಮಳೆ ಸುರಿಸುತ್ತೇವೆಂದು ಜನರಿಗೆ ವಂಚಿಸಿದ್ದಾರೆ. ಸುಳ್ಳು ಆಮಿಷವೊಡ್ಡಿ ಹಳೆಯ 2,000 ರೂ. ನೋಟುಗಳನ್ನು ಹೊಂದಿರುವ ಜನರಿಂದ ನೋಟುಗಳನ್ನು ಪಡೆದುಕೊಂಡಿದ್ದಾರೆ” ಎಂದು ಆರೋಪಿಸಲಾಗಿದೆ.

ತನಿಖೆಯ ಸಮಯದಲ್ಲಿ, ಅಕ್ಟೋಬರ್ 24ರಂದು ಕಬ್ಬನ್‌ಪೇಟೆಯಿಂದ ಮೊದಲ ಆರೋಪಿಯನ್ನು ಪೊಲೀಸರು ಬಂಧಿಸಿದರು. ಅವರು ಕಮಿಷನ್‌ಗಾಗಿ ಬ್ಯಾಂಕಿನಲ್ಲಿ ಅಂತಹ 40,000 ರೂ. ನೋಟುಗಳನ್ನು ಠೇವಣಿ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ, ತನ್ನ ಇಬ್ಬರು ಸಹಚರರ ಮಾಹಿತಿಯನ್ನು ಪೊಲೀಸರು ನೀಡಿದ್ದರು. ಬಳಿಕ, ಆ ಇಬ್ಬರನ್ನೂ ಪೊಲೀಸರು ಬಂಧಿಸಿದರು.

ಹೆಚ್ಚಿನ ತನಿಖೆ ಮುಂದುವರೆದಂತೆ, ಈ ಮೂವರು ಆರೋಪಿಗಳಿಗೆ ತಮ್ಮ ಖಾತೆಗಳಿಗೆ ಜಮಾ ಮಾಡಲು 8 ಲಕ್ಷ ರೂ. ಮೌಲ್ಯದ 2,000 ರೂ. ಮುಖಬೆಲೆಯ ನೋಟುಗಳನ್ನು ಕೊಟ್ಟಿದ್ದ ಇತರ ಮೂವರು ವ್ಯಕ್ತಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅಕ್ಟೋಬರ್ 25ರಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಬಿಜೆಪಿ 1 ಕೋಟಿ ಉದ್ಯೋಗದ ಭರವಸೆ; 20 ವರ್ಷದಲ್ಲಿ ಆಗದ್ದು ಈಗ ಸಾಧ್ಯವೇ?

ನಂತರ, ಅಕ್ಟೋಬರ್ 28 ರಂದು ಆಂಧ್ರಪ್ರದೇಶದ ವಿವಿಧ ಭಾಗಗಳಲ್ಲಿ ಇನ್ನೂ ಮೂರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಅವರಿಂದ, 6 ಲಕ್ಷ ರೂ. ಮೌಲ್ಯದ 2,000 ರೂ. ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆಯ ಪರಿಣಾಮವಾಗಿ ಯಶವಂತಪುರದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ವಿಶೇಷ ಪರಿಕರಗಳನ್ನು ಬಳಸಿಕೊಂಡು ನೋಟುಗಳ ಮೇಲೆ ಸರಣಿ ಸಂಖ್ಯೆಗಳನ್ನು ಬದಲಾಯಿಸುತ್ತಿದ್ದರು ಮತ್ತು ವರ್ಷಗಳನ್ನು ಮುದ್ರಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಆತನ ನಿವಾಸದಿಂದ ಆ ಪರಿಕರಗಳು ಮತ್ತು 6 ಲಕ್ಷ ರೂ. ನಕಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈವರೆಗೆ, ಒಟ್ಟು 10 ಮಂದಿ ಆರೋಪಿಗಳು ಮತ್ತು 18 ಲಕ್ಷ ರೂ. 2,000 ಮುಖಬೆಲೆಯ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅವರೆಲ್ಲರನ್ನೂ ನವೆಂಬರ್ 3 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಬ್ಬ ಮಹಿಳಾ ಆರೋಪಿಯನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...