ಜಿಕೆವಿಕೆ ಕೃಷಿ ಮೇಳ | ಸಮಗ್ರ ಬೇಸಾಯ ಅಳವಡಿಕೆ ಲಾಭದಾಯಕ ಕೃಷಿಗೆ ದಾರಿ: ಚಲುವರಾಯಸ್ವಾಮಿ

Date:

Advertisements

ಆಧುನಿಕ ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ. ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಜಿ.ಕೆ.ವಿ.ಕೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಮೂರು ದಿನಗಳ ಕೃಷಿ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ರೈತರು ಕೃಷಿ ವಿಶ್ವವಿದ್ಯಾಲಯಗಳು ನಡೆಸುವ ಸಂಶೋಧನೆಗಳು ಹಾಗೂ ತಂತ್ರಜ್ಞಾನಗಳನ್ನು ಬಳಸಿ ಮಿಶ್ರ ಬೇಸಾಯ ಪದ್ದತಿ ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯ” ಎಂದರು.

“ರಾಷ್ಟ್ರದಲ್ಲಿ 75% ಜನರು ಕೃಷಿಯನ್ನು ಅವಲಂಭಿಸಿದ್ದು 60ರ ದಶಕದಲ್ಲಿ ದೇಶದಲ್ಲಿ ನಡೆದ ಹಸಿರು ಕ್ರಾಂತಿ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಲು ಸಾಧ್ಯವಾಯಿತು. 1964-65ರಲ್ಲಿ ಆಹಾರ ಉತ್ಪಾದನೆ ರಾಷ್ಟ್ರಮಟ್ಟದಲ್ಲಿ 45.4 ಮಿಲಿಯನ್ ಟನ್‌ಗಳಷ್ಟಿದ್ದು, 2023-24ರ ಸಾಲಿಗೆ 332.22 ಮಿಲಿಯನ್ ಟನ್‌ಗಳಿಗೆ ಏರಿಕೆಯಾಗಿದೆ. 2047ರ ವೇಳೆಗೆ 437 ಮಿಲಿಯನ್ ಟನ್‌ಗೆ ಯೋಜನೆಯನ್ನು ರೂಪಿಸಿದೆ” ಎಂದು ತಿಳಿಸಿದರು.

Advertisements

“ಆಹಾರ ಉತ್ಪಾದನೆ ಹೆಚ್ಚಳದಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಸಂಶೋಧನೆಗಳ ಪಾತ್ರವೂ ಮಹತ್ವದಾಗಿದೆ. ವಿ.ವಿ
ಗಳು ನಿರಂತರವಾಗಿ ಹೊಸ ತಳಿಗಳನ್ನು ಸಂಶೋಧಿಸಿ ಬಿಡುಗಡೆ ಮಾಡುತ್ತಿದ್ದು ಕಡಿಮೆ ನೀರು ಹಾಗೂ ವೆಚ್ಚದಲ್ಲಿ ಹೆಚ್ಚು ಇಳುವರಿ ಪಡೆಯಬಹುದಾಗಿದೆ. ರೈತರು ಇವುಗಳ ಲಾಭ ಪಡೆಯಬೇಕು” ಎಂದರು.

“ಈ ಸಾರಿ ‘ಹವಾಮಾನ ಚತುರ ಡಿಜಿಟಲ್ ಕೃಷಿ’ ಎಂಬ ಘೋಷವಾಕ್ಯದೊಂದಿಗೆ ಈ ಮೇಳವನ್ನು ಆಯೋಜಿಸುತ್ತಿರುವುದು ಕೃಷಿ ಕ್ಷೇತ್ರದ ಸಕಾಲಿಕ ಚಿಂತನೆಯಾಗಿ ಎದ್ದು ಕಾಣುತ್ತಿದೆ. ರೈತ ಕುಟುಂಬಗಳಿಗೆ ಇದೊಂದು ಒಳ್ಳೆಯ ಅವಕಾಶವಾಗಿದೆ. ರೈತರು ತಮ್ಮ ಶ್ರಮ ಮತ್ತು ಚಿಂತನೆಯಿಂದ ಆರ್ಥಿಕವಾಗಿ ಸಬಲರಾಗಲು ಒಂದು ಒಳ್ಳೆ ಅವಕಾಶವನ್ನು ಕಲ್ಪಿಸಿದೆ” ಎಂದು ಎನ್.ಚಲುವರಾಯಸ್ವಾಮಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

“ರಾಜ್ಯದಲ್ಲಿ ಸುಮಾರು78 ಲಕ್ಷಕ್ಕೂ ಹೆಚ್ಚು ರೈತರು ಹಾಗೂ 125 ಲಕ್ಷಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಕೃಷಿಯಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ಕೃಷಿಗೆ ಗರಿಷ್ಠ ಆದ್ಯತೆ ನೀಡಿದೆ ಕಳೆದ ಸಾಲಿನಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಸಬ್ಸಿಡಿಯೊಂದಿಗೆ ಯಂತ್ರೋಪಕರಣ, ನೀರಾವರಿ ಸಲಕರಣೆಗಳನ್ನು ವಿತರಿಸಿದೆ. 2100 ಕೋಟಿ ರೂಪಾಯಿ ಬೆಳೆವಿಮೆ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ಭರಿಸಲಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ ರೂಪಿಸಿ ಅತ್ಯಧಿಕ ಆರ್ಥಿಕ ನೆರವಿನೊಂದಿಗೆ ಬೃಹತ್ ಬೆಳೆ ಕಟಾವು ಯಂತ್ರಗಳನ್ನು ವಿತರಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳ ಮೂಲಕವು ಕೃಷಿ ಸಮುದಾಯ ಹಾಗೂ ಜನ ಸಾಮಾನ್ಯರಿಗೆ ನಮ್ಮ ಸರ್ಕಾರ ನೆರವು ಒದಗಿಸಿದೆ” ಎಂದು ಸಚಿವರು ತಿಳಿಸಿದರು.

650 ಮಳಿಗೆ

ಅಚ್ಚುಕಟ್ಟಾದ ಹಾಗೂ ವಿಶಾಲ ಜಾಗದಲ್ಲಿ ನಡೆಯುವ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕೃಷಿಮೇಳ ದೇಶದಲ್ಲೇ ಹೆಸರುವಾಸಿಯಾಗಿದೆ. ಈ ಭಾರಿ ಸುಮಾರು 650 ಮಳಿಗೆಗಳನ್ನು ತೆರೆಯಲಾಗಿದ್ದು ಹೊಸ ಹೊಸ ತಂತ್ರಜ್ಞಾನಗಳು, ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಲಕ್ಷಾಂತರ ಜನರನ್ನು ಆಕರ್ಷಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X