ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲು ಸೇವೆ ಪಂಢರಪುರದವರೆಗೆ ವಿಸ್ತರಣೆ

Date:

Advertisements

ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿರುವ (ರೈಲುಗಳ ಸಂಖ್ಯೆ-16535/16536) ಮೈಸೂರು–ಸೋಲಾಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲುಗಳನ್ನು ಪಂಢರಪುರ ನಿಲ್ದಾಣದವರೆಗೆ ವಿಸ್ತರಿಸುವ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಸೆಪ್ಟೆಂಬರ್ 4 ರಿಂದ ಜಾರಿಗೆ ಬರುವಂತೆ (ರೈಲು ಸಂಖ್ಯೆ-16535) ಮೈಸೂರು-ಪಂಢರಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ಮೈಸೂರು ನಿಲ್ದಾಣದಿಂದ ಮಧ್ಯಾಹ್ನ 3:45 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:25 ಗಂಟೆಗೆ ಪಂಢರಪುರ ನಿಲ್ದಾಣವನ್ನು ತಲುಪಲಿದೆ ಎಂದು ಹೇಳಿದೆ.

ಈ ರೈಲಿನ ನಿಲುಗಡೆ/ವೇಳಾಪಟ್ಟಿಯೂ ಬಸವನ ಬಾಗೇವಾಡಿ ರೋಡ್ ನಿಲ್ದಾಣದವರೆಗೆ ಯಾವುದೇ ಬದಲಾವಣೆ ಇರುವುದಿಲ್ಲ. ಈ ರೈಲು ವಿಜಯಪುರ – 07:55/08:00AM, ಇಂಡಿ ರೋಡ್ – 08:41/08:42AM, ಸೋಲಾಪುರ – 10:15/10:20AM ಮತ್ತು ಕುರ್ದುವಾಡಿ -11:25/11:27AM ನಿಲ್ದಾಣಗಳಿಗೆ ಆಗಮಿಸಿ/ನಿರ್ಗಮಿಸಲಿದೆ ಎಂದು ತಿಳಿಸಿದೆ.

Advertisements

ಹಿಂದಿರುಗುವ ದಿಕ್ಕಿನಲ್ಲಿ ಸೆಪ್ಟೆಂಬರ್ 5 ರಿಂದ ಜಾರಿಗೆ ಬರುವಂತೆ (ರೈಲು ಸಂಖ್ಯೆ-16536) ಪಂಢರಪುರ-ಮೈಸೂರು ಗೋಲ್‌ ಗುಂಬಜ್ ಎಕ್ಸ್‌ಪ್ರೆಸ್‌ ಪಂಢರಪುರದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 10:45 ಗಂಟೆಗೆ ಮೈಸೂರು ನಿಲ್ದಾಣವನ್ನು ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಕುರ್ದುವಾಡಿ, ಸೋಲಾಪುರ, ಇಂಡಿ ರೋಡ್, ವಿಜಯಪುರ, ಬಸವನ ಬಾಗೇವಾಡಿ ರೋಡ್, ಆಲಮಟ್ಟಿ, ಬಾಗಲಕೋಟ, ಗುಳೇದಗುಡ್ಡ ರೋಡ್, ಬಾದಾಮಿ, ಹೊಳೆ ಆಲೂರು, ಗದಗ, ಅಣ್ಣಿಗೇರಿ ನಿಲ್ದಾಣಗಳಿಗೆ ಆಗಮಿಸಿ/ನಿರ್ಗಮಿಸಲಿದೆ. ಹುಬ್ಬಳ್ಳಿ ನಿಲ್ದಾಣದಿಂದ ಮೈಸೂರು ನಿಲ್ದಾಣಗಳವರೆಗಿನ ಈ ರೈಲಿನ ವೇಳಾಪಟ್ಟಿ, ನಿಲುಗಡೆ ಹಾಗೂ ರೈಲುಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಕನ್ನಡಿಗ, ಜಾವೆಲಿನ್ ಪಟು ಮನುಗೆ ಬೆಂಬಲ ನೀಡಿ: ಸಿಎಂಗೆ ಮೋಹನ್‌ ದಾಸರಿ ಮನವಿ

ಹೊಳೆನರಸೀಪುರ ನಿಲ್ದಾಣ: ರೈಲುಗಳ ಪ್ರಾಯೋಗಿಕ ನಿಲುಗಡೆ

ಪ್ರಾಯೋಗಿಕ ಆಧಾರದ ಮೇಲೆ ಆರು ತಿಂಗಳ ಅವಧಿಗೆ ಒಂದು ನಿಮಿಷ ಕಾಲ ಹೊಳೆನರಸೀಪುರ ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ತಾತ್ಕಾಲಿಕ ಅವಕಾಶ ನೀಡಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಹೇಳಿದೆ.

ಮೈಸೂರಿನಿಂದ 2023ರ ಸೆ. 8 ರಿಂದ 2024ರ ಮಾ. 8ರವರೆಗೆ ಹಾಗೂ ಹಜರತ್ ನಿಜಾಮುದ್ದೀನ್ ನಿಲ್ದಾಣದಿಂದ 2023ರ ಸೆ. 9 ರಿಂದ 2024ರ ಮಾ.11 ರವರೆಗೆ ಜಾರಿಗೆ ಬರುವಂತೆ (ರೈಲುಗಳ ಸಂಖ್ಯೆ-12781/12782) ಮೈಸೂರು ಮತ್ತು ಹಜರತ್ ನಿಜಾಮುದ್ದೀನ್ ನಿಲ್ದಾಣಗಳ ನಡುವೆ ಸಂಚರಿಸುವ ಸ್ವರ್ಣ ಜಯಂತಿ ಎಕ್ಸ್‌ಪ್ರೆಸ್‌ ರೈಲುಗಳು ಹೊಳೆನರಸೀಪುರ ನಿಲ್ದಾಣದಲ್ಲಿ ಒಂದು ನಿಮಿಷ ನಿಲುಗಡೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

• (ರೈಲು ಸಂಖ್ಯೆ-12781) ಹೊಳೆನರಸೀಪುರ ನಿಲ್ದಾಣಕ್ಕೆ ರಾತ್ರಿ 9:30/9:31 ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ.

• (ರೈಲು ಸಂಖ್ಯೆ-12782) ಹೊಳೆನರಸೀಪುರ ನಿಲ್ದಾಣಕ್ಕೆ ರಾತ್ರಿ 11:51/11:52  ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X