ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ವಿಧಾನಸೌಧದತ್ತ ಹೊರಟ ರೈತರನ್ನು ತಡೆದ ಪೊಲೀಸರು

Date:

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ರೈತ-ಕಾರ್ಮಿಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನರೆದಿದ್ದರು. ಬೆಳಗ್ಗೆಯಿಂದ ಹೋರಾಟ ನಡೆಯುತ್ತಿದ್ದರೂ, ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದಿಸದ ಕಾರಣ, ಪ್ರತಿಭಟನೆಯು ನಿರ್ಣಾಯಕ ಹಂತಕ್ಕೆ ತಲುಪಿದೆ. ಪ್ರತಿಭಟನಾಕಾರರು ವಿಧಾನಸೌಧದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದು, ಅವರನ್ನು ಪೊಲೀಸರು ರಸ್ತೆಯಲ್ಲಿಯೇ ತಡೆದಿದ್ದಾರೆ.

- Advertisement -

ಬೆಳಗಿನಿಂದಲೂ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಹಕ್ಕೊತ್ತಾಯಗಳನ್ನು ಆಲಿಸಿ, ಚರ್ಚಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ, ಜಮೀರ್ ಅಹಮ್ಮದ್, ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದರು. ಆದರೆ, ಸಂಜೆಯಾದರೂ, ಯಾರೊಬ್ಬ ಸಚಿವರೂ ಪ್ರತಿಭಟನಾ ಸ್ಥಳದತ್ತ ಬಂದಿಲ್ಲ. ಇದರಿಂದ ಅಸಮಾಧಾನಗೊಂಡ ಪ್ರತಿಭಟನಾಕಾರರು ರಸ್ತೆಗೆ ಇಳಿದು, ಹೋರಾಟ ಮುಂದುವರೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಮೂರು ಗಂಟೆಗೆ ಬರುತ್ತೇನೆಂದು ಐದು ಗಂಟೆಯಾದರೂ ಧರಣಿ ಸ್ಥಳಕ್ಕೆ ಬಾರದ ಸಂಬಂಧಪಟ್ಟ ಸಚಿವರ ನಡೆಯಿಂದಾಗಿ ತಾಳ್ಮೆ ಕಳೆದುಕೊಂಡ ಕಾರ್ಮಿಕರು ಮತ್ತು ರೈತ ಮಹಿಳೆಯರು ವಿಧಾನಸೌಧ ಮುತ್ತಿಗೆ ಯತ್ನಿಸಿದರು. ರಸ್ತೆಗಿಳಿದ ಪ್ರತಿಭಟಕಾರರನ್ನು ತಡೆದ ಪೊಲೀಸರು, ಎರಡು ಹಂತದಲ್ಲಿ ತಡೆಗೋಡೆ ನಿರ್ಮಿಸಿ, ಪೊಲೀಸ್ ಬ್ಯಾರಿಕೇಡ್ ಹಾಕಿ, ಕಬ್ಬಿಣದ ಗೇಟಿನಿಂದ ರೈತರನ್ನೂ ತಡೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...

ರಿಯಾಯಿತಿ ನೆಪದಲ್ಲಿ ನಿಯಮ ಉಲ್ಲಂಘನೆ: 16 ಫಾರ್ಮಸಿಗಳ ಲೈಸೆನ್ಸ್ ರದ್ದುಗೊಳಿಸಿದ FDA

ಭಾರಿ ಪ್ರಮಾಣದ ಡಿಸ್ಕೌಂಟ್ (ರಿಯಾಯಿತಿ) ನೀಡಿ ಔಷಧ ಮಾರಾಟ ಮಾಡುತ್ತಿದ್ದ ಹಾಗೂ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...