ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ: ರಾಮಲಿಂಗಾರೆಡ್ಡಿ

Date:

  • ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಬದ್ಧವಾಗಿದೆ
  • ಮರುವಿಂಗಡಣೆಯಾಗಿರುವ 243 ವಾರ್ಡ್‌ಗಳಿಗೆ ಚುನಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್‌ನಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಶನಿವಾರ ಈ ಬಗ್ಗೆ ಸುದ್ದಿಗಾರರಂದಿಗೆ ಮಾತನಾಡಿದ ಅವರು, “ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಬದ್ಧವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರ ಇಚ್ಛೆಗೆ ತಕ್ಕಂತೆ ವಾರ್ಡ್‌ ಮರುವಿಂಗಡಣೆ ಮಾಡಲಾಗಿದೆ. ಈಗ ನಮ್ಮ ಸರ್ಕಾರ ಹೊಸದಾಗಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಅಧಿಕಾರಿಗಳು ತಮ್ಮ ಕೆಲಸವನ್ನು ತಾವು ಮಾಡುತ್ತಾರೆ. ಅದರಲ್ಲಿ ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

“ಬಿಬಿಎಂಪಿ ಚುನಾವಣೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವು. ಡಿಸೆಂಬರ್‌ ವೇಳೆಗೆ ಚುನಾವಣೆ ನಡೆಸುತ್ತೇವೆ. ನೂತನ ಬಿಬಿಎಂಪಿ ಕಾಯ್ದೆ ಪ್ರಕಾರ 243 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ನ್ಯಾಯಾಯದ ಆದೇಶವನ್ನು ನಾವು ಪಾಲಿಸುತ್ತೇವೆ. ಈ ಬಾರಿಯ ಹಂತದಲ್ಲಿ ಎಷ್ಟು ವಾರ್ಡ್‌ಗಳು ಚುನಾವಣೆ ವೇಳೆಗೆ ಇರಲಿವೆ ಎಂದು ಹೇಳಲು ಸಾಧ್ಯವಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಫುಡ್‌ ಡೆಲಿವರಿ ಬಾಯ್

ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚನೆ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಬಿಬಿಎಂಪಿ ಮುಖ್ಯ ಆಯುಕ್ತ, ಬಿಡಿಎ ಆಯುಕ್ತ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 198 ವಾರ್ಡ್‌ಗಳನ್ನು 243ಕ್ಕೆ ಏರಿಸಿ ವಾರ್ಡ್‌ ಮರುವಿಂಗಡಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್‌ ಮಾಜಿ ಮೇಯರ್, ಮುಖಂಡರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌ ಜೂನ್‌ 19ರಂದು ಹೊಸದಾಗಿ ವಾರ್ಡ್ ಪುನರ್​ ವಿಂಗಡಣೆಗೆ ರಾಜ್ಯ ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿತ್ತು. ಈ ಅವಧಿಯೊಳಗೆ ವಾರ್ಡ್‌ಗಳ ಮರು ವಿಂಗಡಣೆ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾ ಗಾಂಧಿ ಜೈವಿಕ ಉದ್ಯಾನ: ಸಚಿವ ಈಶ್ವರ ಖಂಡ್ರೆ

ಜೈವಿಕ ಉದ್ಯಾನದಲ್ಲಿ ಬಸವಣ್ಣ ದಿವ್ಯೌಷಧ ಸಸ್ಯವನ, ಅಂಬೇಡ್ಕರ್ ಪಕ್ಷಿಲೋಕನಾಡಪ್ರಭು ಕೆಂಪೇಗೌಡ...

ರಾಜ್ಯದ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ

ರಾಜ್ಯದ ಮೂರು ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಕೆಂಪೇಗೌಡ...

ಭಾರಿ ಮಳೆ: ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ

ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ...

ಅಮೆಜಾನ್, ಫ್ಲಿಪ್‌ಕಾರ್ಟ್ ಹಾವಳಿ – ಆತಂಕದಲ್ಲಿದೆ ಚಿಲ್ಲರೆ ವ್ಯಾಪಾರ; ಇ-ಕಾಮರ್ಸ್‌ ನೀತಿ ಜಾರಿಗೆ ಆಗ್ರಹ

ಭಾರತೀಯ ಚಿಲ್ಲರೆ ವ್ಯಾಪಾರ ವ್ಯವಸ್ಥೆಯ ಮೇಲೆ ಅಮೆಜಾನ್, ಫ್ಲಿಪ್‌ಕಾರ್ಟ್‌ನಂತರ ಇ-ಕಾಮರ್ಸ್ ದೈತ್ಯ...