ಬೆಂಗಳೂರು ಅರಮನೆ (ಭೂ ಬಳಕೆ & ನಿಯಂತ್ರಣ); ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ

Date:

Advertisements

ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಬುಧವಾರ (ಜ.29) ಒಪ್ಪಿಗೆ ಸೂಚಿಸಿದ್ದಾರೆ.

ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ರಸ್ತೆ ಟಿಡಿಆರ್ ತಪ್ಪಿಸಲು ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿತ್ತು. ಆ ಬೆನ್ನಲ್ಲೇ ಪ್ರಮೋದಾದೇವಿ ಒಡೆಯರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಬೆಂಗಳೂರು ಅರಮನೆ ಜಾಗಕ್ಕೇ ಈಗಲೂ ಕೂಡ ನಾವೇ ಓನರ್ ಆಗಿದ್ದೇವೆ. ಟಿಡಿಆರ್ ಪ್ರಕಾರವೇ ನಮಗೆ ಪರಿಹಾರ ನೀಡಬೇಕು. ಈ ಬಗ್ಗೆ ಕಳೆದ 30 ವರ್ಷಗಳಿಂದಲೂ ಕಾನೂನು ಸಮರ ಮಾಡಿದ್ದೇವೆ. ಮುಂದೆಯೂ ಹೋರಾಟ ಮಾಡುತ್ತೇವೆ” ಎಂದು ಸ್ಪಷ್ಟನೆ ನೀಡಿದ್ದರು.

ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಸರ್ಕಾರ ನಿರ್ಧರಿಸಿ, ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು.

Advertisements

ಹೀಗಾಗಿ 1996ರ ಕಾಯ್ದೆಗೆ ಪೂರಕವಾದ ಸುಗ್ರೀವಾಜ್ಞೆಯ ಒಪ್ಪಿಗೆ ಪಡೆಯಲು ಕಡತವನ್ನು ಸರ್ಕಾರ ರಾಜ್ಯಪಾಲರ ಬಳಿ ಕಳುಹಿಸಿತ್ತು. ರಾಜ್ಯಪಾಲರು ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಆಧ್ಯಾದೇಶ-2025ಕ್ಕೆ ಜ.29ರಂದು ಒಪ್ಪಿಗೆ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶರ್ಜೀಲ್- ಉಮರ್ ಗೆ ಜಾಮೀನು; ಅಗೋಚರ ಕದಗಳ ಮೇಲೆ ‘ನಾಳೆ ಬಾ’ ಎಂದು ನ್ಯಾಯಾಂಗ ಬರೆದ ಬರೆಹ!

ಪ್ರಕರಣದ ಹಿನ್ನೆಲೆ

ಬೆಂಗಳೂರು ಅರಮನೆ ಮೈದಾನದ ಒಟ್ಟು 472 ಎಕರೆ 16 ಗುಂಟೆ ಜಾಗಕ್ಕೆ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ 1996ರ ಕಂಡಿಕೆ 8 ಮತ್ತು 9ರಲ್ಲಿ 11 ಕೋಟಿ ರೂ.ಗಳನ್ನು ನಿಗದಿಗೊಳಿಸಲಾಗಿತ್ತು. 13-3-1997 ರಂದು ಸದರಿ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿರುತ್ತದೆ. 27 ವರ್ಷಗಳ ನಂತರ ಈ ವ್ಯಾಜ್ಯ ಮುಂಚೂಣಿಗೆ ಬಂದಿದ್ದು, 1996 ರಲ್ಲಿ 472 ಎಕರೆ 16 ಗುಂಟೆ ಜಾಗಕ್ಕೆ 11.00 ಕೋಟಿ ರೂ.ಗಳನ್ನು (ಪ್ರತಿ ಎಕರೆಗೆ 2.30ಲಕ್ಷ ರೂ. ಅಂದಾಜು ಮೊತ್ತ) ನಿಗದಿಗೊಳಿಸಲಾಗಿತ್ತು.

1996ರ ಈ ಕಾಯ್ದೆಗೆ ಸುಪ್ರೀಂ ಕೋರ್ಟ್‌ದಿಂದ ಯಾವುದೇ ತಡೆಯಾಜ್ಞೆ ಇಲ್ಲ. ಆದರೆ, 10.12.2024ರ ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ಮತ್ತುಇತರೆ ಪ್ರಕರಣಗಳಲ್ಲಿ ಕರ್ನಾಟಕ ಸ್ಟಾಂಪ್ ಕಾಯ್ದೆಯ ಸೆಕ್ಷನ್ 45ಬಿ ಗೆ ಅನುಗುಣವಾಗಿ ಬೆಂಗಳೂರು ಅರಮನೆ ಮೈದಾನಕ್ಕೆ ಹೊಂದಿಕೊಂಡಂತಹ ಪ್ರದೇಶಗಳಿಗೆ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಬೆಂಗಳೂರು ಅರಮನೆ ಜಾಗವನ್ನು ಮೌಲ್ಯೀಕರಿಸಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ನೀಡುವಂತೆ ನಿರ್ದೇಶಿಸಿದೆ.

ರಾಜ್ಯದಲ್ಲಿ ಕೇವಲ 2 ಕಿ.ಮೀ ರಸ್ತೆ ಅಭಿವೃದ್ಧಿಗೆ 3,014 ಕೋಟಿ ರೂ. ಅಂದರೆ ಪ್ರತಿ ಎಕರೆಗೆ 200 ಕೋಟಿ ರೂ.ನೀಡಿದರೆ ಆರ್ಥಿಕ ಪರಿಸ್ಥಿತಿಗೆ ಗಂಡಾಂತರ ಉಂಟಾಗಿ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗದೇ ಪ್ರಗತಿ ವಿರೋಧವಾದ ಕ್ರಮವಾಗುತ್ತದೆ ಎಂಬುದು ಸರ್ಕಾರದ ವಾದ.

“ಮಾರುಕಟ್ಟೆ ಮೊತ್ತ ಒಂದು ಕಡೆಯಾದರೆ, ಸರ್ಕಾರ ಈಗಾಗಲೇ ಪಡೆದಿರುವುದಕ್ಕೆ ನಿಗದಿ ಮಾಡಿರುವ ಮೊತ್ತ ಬೇರೆಯಿದೆ. ಅಭಿವೃದ್ಧಿ ಕಾಮಗಾರಿಗಳು ಜಾರಿಯಲ್ಲಿರುವಾಗ ಈ ವ್ಯಾಜ್ಯದಿಂದ ಕರ್ನಾಟಕ ಸರ್ಕಾರ ಸುಮಾರು 3,014 ಕೋಟಿ ರೂ.ಗಳನ್ನು 15.36 ಎಕರೆ ಭೂಮಿಗೆ ಕೊಡಬೇಕಾಗಿ ಬರುತ್ತದೆ. ಇದು ಅತ್ಯಂತ ಅವ್ಯವಹಾರಿಕ. ಇದನ್ನು ಜಾರಿ ಮಾಡಿದರೆ ಅಭಿವೃದ್ಧಿಗೆ ಗಂಡಾಂತರ ಬರಲಿದೆ. 3,014 ಕೋಟಿ ಕಡಿಮೆ ಮೊತ್ತವಲ್ಲ. ಈ ಮೊತ್ತವನ್ನು ಕೊಡಲಾಗುವುದಿಲ್ಲವಾದ್ದರಿಂದ ಅರಮನೆಯ ಭೂಮಿಯನ್ನು ತೆಗೆದುಕೊಳ್ಳುವುದು ಅಥವಾ ಬಿಡುವುದರ ಬಗ್ಗೆ ಅಧ್ಯಾದೇಶದ ಮೂಲಕ ನಿರ್ಧಾರ ಮಾಡಲು ಅಧ್ಯಾದೇಶ ಹೊರಡಿಸಲಾಗಿದೆ” ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X