ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಆಟೋ ಚಾಲಕನಿಗೆ ಥಳಿಸಿದ ದುರುಳರು

Date:

ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಮುಸ್ಲಿಂ ಆಟೋ ಚಾಲಕನ ಮೇಲೆ ದುರುಳರು ಹಲ್ಲೆ ನಡೆಸಿದ ಘಟನೆ ಬೆಂಗಳೂರು ನಗರದ ಹೆಗ್ಡೆ ನಗರ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆಗೆ ಒಳಗಾದ ಆಟೋ ಚಾಲಕ ವಸೀಮ್ ಸ್ನೇಹಿತ ಮೊಹಮ್ಮದ್ ಝಮೀರ್ ಪಾಶಾ ದೂರು ನೀಡಿದ್ದಾರೆ.

- Advertisement -

ಕಳೆದ ಭಾನುವಾರ ಈ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ದೂರುದಾರ ಝಮೀರ್ ಮತ್ತು ವಸೀಮ್ ಅವರು ಭಾನುವಾರ ಆಟೋದಲ್ಲಿ ಹೋಗುತ್ತಿದ್ದು, ಮೂತ್ರ ವಿಸರ್ಜನೆಗೆಂದು ಒಂದೆಡೆ ನಿಲ್ಲಿಸಿದ್ದರು. ಈ ವೇಳೆ ಅಪರಿಚಿತ ಗುಂಪು ಹಲ್ಲೆ ನಡೆಸಿದೆ ಎಂದು ದೂರು ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಇದನ್ನು ಓದಿದ್ದೀರಾ? ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೇಸ್ ರದ್ದು; ಸರ್ಕಾರದ ಜವಾಬ್ದಾರಿ ಏನು ?

5-6 ಜನರಿದ್ದ ಅಪರಿಚಿತರ ಗುಂಪು ಇಬ್ಬರನ್ನೂ, “ನೀವ್ಯಾಕೆ ಇಲ್ಲಿ ನಿಂತಿದ್ದೀರಿ, ಇಲ್ಲಿ ರಸ್ತೆ ಇಲ್ಲ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಸೀಮ್ ನಿಮಗ್ಯಾಕೆ ಎಂದು ಮರುಪ್ರಶ್ನಿಸಿದ್ದಕ್ಕೆ ಈ ಗುಂಪು ಥಳಿಸಿದೆ. ಈ ವೇಳೆ ಝಮೀರ್ ಓಡಿಹೋಗಿದ್ದಾರೆ. ಆದರೆ ವಸೀಮ್‌ನನ್ನು ತಡೆದು ಹಿಡಿದ ಗುಂಪು ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳು ಹೊಡೆದಾಗ ವಸೀಮ್ ನೋವಿನಲ್ಲಿ ‘ಅಲ್ಲಾಹ್’ ಎಂದು ಕೂಗಿದ್ದಕ್ಕೆ ದುರುಳರು ಜೈ ಶ್ರೀರಾಮ್ ಎಂದು ಕೂಗುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಕೋಲಿನಿಂದ ಥಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು
ದೂರು1

ಇನ್ನು ಅಧಿಕೃತ ಹೇಳಿಕೆಯಲ್ಲಿ ಯಾವುದೇ ಧಾರ್ಮಿಕ ಘೋಷಣೆಯ ಬಗ್ಗೆ ಉಲ್ಲೇಖಿಸಲಾಗಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ ವಿಭಾಗ) ಸಜೀತ್ ವಿಜೆ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಆದರೆ ದೂರಿನ ಪ್ರತಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಗುಂಪು ಒತ್ತಾಯಿಸಿದೆ ಎಂದು ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...