ಬೆಂಗಳೂರು ಜಲಮಂಡಳಿ ಸುಪರ್ದಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಹಸ್ತಾಂತರ

Date:

Advertisements

ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ. ಈಗ ಬೇಸಿಗೆ ಆರಂಭವಾಗುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತಿ ಹೋದರೆ ಆರ್.ಓ. ಘಟಕಗಳಿಗೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿ ಮುಖಾಂತರವೇ ಪೂರೈಸಬೇಕು” ಎಂದು ಹೇಳಿದ್ದಾರೆ.

“ನೀರು ಸರಬರಾಜು ಮಾಡುವ ಕುರಿತು ಎರಡು ಸಂಸ್ಥೆಗಳ ನಡುವೆ ಯಾವುದೇ ರೀತಿಯ ಸಮನ್ವಯದ ಕೊರತೆ ಉಂಟಾದರೂ ನಾಗರೀಕರಿಗೆ ತೊಂದರೆಯಾಗುತ್ತದೆ. ಆದ ಕಾರಣಕ್ಕೆ ಈ ಅನಾನುಕೂಲತೆ ತಪ್ಪಿಸುವ ದೃಷ್ಟಿಯಿಂದ ಬಿಬಿಎಂಪಿಗೆ ಸೇರಿದ ಎಲ್ಲಾ ಆರ್.ಓ. ಪ್ಲಾಂಟ್ ಗಳನ್ನು ಬೆಂಗಳೂರು ಜಲಮಂಡಳಿಯೇ ನಿರ್ವಹಣೆ ಮಾಡುವುದು ಸೂಕ್ತ” ಎಂದು ಡಿಸಿಎಂ ಅವರು ತಿಳಿಸಿದ್ದಾರೆ.

Advertisements

ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ಸಂಚಾರ ಕೈಗೊಂಡು ಪರಿಶೀಲಿಸಿದ ವೇಳೆ ಬೆಂಗಳೂರು ನಗರದ ಕೆಲವು ಆರ್.ಓ. ಪ್ಲಾಂಟ್ ಗಳು ಕೆಲಸ ಮಾಡದೇ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದರು.

WhatsApp Image 2025 02 24 at 1.12.59 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X