ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ; ಸರ್ಕಾರದ ನಿರ್ಲಕ್ಷಕ್ಕೆ ಎಚ್‌ಡಿಕೆ ಆಕ್ರೋಶ

Date:

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು, ಇದೇ ಸಂದರ್ಭದಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೀರಣ್ಣ ಮಡಿವಾಳರ ಅವರನ್ನು ಅವಮಾನಿಸಿದ್ದೇ ಅನಾಗರಿಕತೆ! ಅಮಾನತನ್ನು ವಾಪಸು ಪಡೆಯಿರಿ

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಆಗ್ರಹಿಸಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಐಪಿಎಲ್ ಟ್ರೋಫಿ ಗೆದ್ದ ಆರ್​ಸಿಬಿ ತಂಡ ಆಯೋಜಿಸಿದ್ದ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದ ಅಭಿಮಾನಿಗಳಲ್ಲಿ 10 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಭಿಮಾನಿಗಳು ಸಂಭ್ರಮಿಸುವ ಭರದಲ್ಲಿ ಜೀವ ತೆತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಜನರು ಗದ್ದಲಗಳಲ್ಲಿ ಸಿಲುಕಿಕೊಳ್ಳದೆ ತಮ್ಮ ಮನೆಗಳಿಗೆ ಮರಳುವಂತೆ ಪೊಲೀಸರು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...