ರಾಜ್ಯದಲ್ಲಿ ನಾಳೆಯಿಂದ ಮೂರು ದಿನ ಬಿಸಿ ಗಾಳಿ; ಬೆಂಗಳೂರಿನಲ್ಲಿ ಹೆಚ್ಚಲಿರುವ ತಾಪಮಾನ

Date:

Advertisements

ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಸೂರ್ಯನ ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೆಯೆ, ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಬಾಗಲಕೋಟೆ , ಬೀದರ್‌, ಕಲಬುರಗಿ,ರಾಜಚೂರು ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವುದರಿಂದ ಎಲ್ಲೋ ಅಲರ್ಟ್‌ ನೀಡಲಾಗಿದೆ.

ಮುಂದಿನ ವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಸಹಜ ತಾಪಮಾನಕ್ಕಿಂತ 6 ರಿಂದ 8 ಡಿಗ್ರಿ ಸೆಲಿಸ್ಸಿಯಸ್ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisements

ನಗರದಲ್ಲಿ ಈಗಾಗಲೇ 32 ರಿಂದ 34 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಮುಂದಿನ ಎರಡೂ ದಿನಗಳಲ್ಲಿ 36-38 ಡಿಗ್ರಿ ತಾಪಮಾನಕ್ಕೆ ಏರಿಕೆಯಾಗಲಿದೆ. ಈ ತಿಂಗಳ ಅಂತ್ಯಕ್ಕೆ 39 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಹವಮಾನ ಇಲಾಖೆ ಗರಿಷ್ಠ ತಾಪಮಾನದ ಅಲರ್ಟ್ ನೀಡಿದ್ದು, ಕಳೆದ ವರ್ಷವೂ ನಗರದಲ್ಲಿ 39 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಈ ವರ್ಷವೂ 39 ರಿಂದ 40 ಡಿಗ್ರಿಯಷ್ಟು ತಾಪಮಾನದ ಎಚ್ಚರಿಕೆಯನ್ನ ಹವಮಾನ ಇಲಾಖೆ ನೀಡಿದೆ. ಜನರು ಹೆಚ್ಚು ಬಿಸಿಲಿನಲ್ಲಿ ಓಡಾಡದಂತೆ ಹವಾಮಾನ ಇಲಾಖೆ ಸಲಹೆ ನೀಡಿದ್ದು ಬಿಸಿ ಗಾಳಿ ಬಗ್ಗೆಯೂ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತಕ್ಕೆ ಬೇಕಿರುವುದು ಬಣ್ಣಗಳ ಸಂಗಮ, ಸಂಘರ್ಷದ ಸಂಭ್ರಮವಲ್ಲ!

ಈಗಾಗಲೇ ರಾಜ್ಯದ ಎರಡೂ ಜಿಲ್ಲೆಗಳಾದ ಮಂಗಳೂರು ಹಾಗೂ ಕಲಬುರಗಿಯಲ್ಲಿ ಬಿಸಿ ಗಾಳಿ ಬೀಸುತ್ತಿದ್ದು, ಬೆಂಗಳೂರಿನ ಜನತೆ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಮಾನ ಇಲಾಖೆ ಸಲಹೆ ನೀಡಿದೆ.

ಈ ಬೇಸಿಗೆ ವೇಳೆ ಸಾಮಾನ್ಯವಾಗಿ ಮಕ್ಕಳು ಹಾಗೂ ವೃದ್ಧರಿಗೆ ಹೆಚ್ಚು ಆರೋಗ್ಯದ ಸಮಸ್ಯೆ ಕಾಡಲಿದೆ.‌ ಈ ಹಿನ್ನೆಲೆ ಜನರು ಹೆಚ್ಚು ನೀರು ಕುಡಿಯಬೇಕು. ಹಣ್ಣುಗಳನ್ನು ಸೇವಿಸಬೇಕು. ಜನರು ಬಿಸಿಲಿಗೆ ಹೆಚ್ಚು ಮೈ ಒಡ್ಡಬಾರದು ಎಂದು ವೈದ್ಯರು ಸಲಹೆ ನೀಡುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X