ಭಾರಿ ಮಳೆ: ಬೆಂಗಳೂರಿನ ಶಾಲೆಗಳಿಗೆ ಇಂದು ರಜೆ

Date:

Advertisements

ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಎಲ್​​​​ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ.

ಕಾಲೇಜುಗಳ ಕಟ್ಟಡಗಳು ದುರ್ಬಲವಾಗಿದ್ದಲ್ಲಿ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿದ್ದರಿಂದ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಿಬಿಎಂಪಿ ಮುನ್ನೆಚ್ಚರಿಕೆ ಸಂದೇಶ

ಭಾರಿ ಮಳೆಯಾಗುತ್ತಿರುವ ಮತ್ತು ಮಳೆಯ ಮುನ್ಸೂಚನೆ ಇರುವುದರಿಂದ ಬೆಂಗಳೂರು ಜನತೆಗೆ ಬಿಬಿಎಂಪಿ ಹಲವು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಲಹೆ ನೀಡಿದೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ನೀಡಿದೆ.

‘ನಾಗರಿಕರೇ, ಇದು 21.10.2024 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ದಯವಿಟ್ಟು ಮುನ್ನೆಚ್ಚರಿಕೆಗಳನ್ನು ಅನುಸರಿಸಿ. ಮನೆಯೊಳಗೆಯೇ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಸ್ಥಳಗಳಲ್ಲಿ ಆಶ್ರಯವನ್ನು ಪಡೆದುಕೊಳ್ಳಿ, ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ. ವಿದ್ಯುತ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್​ಪ್ಲಗ್ ಮಾಡಿ ಇಡಿ. ತಕ್ಷಣವೇ ಜಲಮೂಲಗಳಿಂದ ಹೊರಬನ್ನಿ ಎಂದು ಬಿಬಿಎಂಪಿ ಸಲಹೆ ನೀಡಿದೆ.

ವಿದ್ಯುಚ್ಛಕ್ತಿಗೆ ಸಂಬಂಧಿತ ಎಲ್ಲ ಸಾಧನಗಳಿಂದ ದೂರವಿರಿ. ನೀವು ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಯಾವುದೇ ಸಹಾಯ ಬೇಕಿದ್ದಲ್ಲಿ ದಯವಿಟ್ಟು 1533 ಗೆ ಕರೆ ಮಾಡಿ ಎಂದು ಬಿಬಿಎಂಪಿ ಸೂಚನೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X