ಕರ್ನಾಟಕದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆ: ಹವಾಮಾನ ಇಲಾಖೆ

Date:

Advertisements

ಮುಂದಿನ ಮೂರು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ, ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನಾಪೋಕ್ಲು, ಬಂಡೀಪುರ, ಕಾರ್ಕಳ, ನರಗುಂದ, ರಾಮನಗರ, ಮಸ್ಕಿ, ಕನಕಪುರ, ಮಾಗಡಿ, ಎಚ್​ಡಿ ಕೋಟೆ, ಮುಂಡಗೋಡು, ಕುಮಟಾ, ಲಕ್ಷ್ಮೇಶ್ವರ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ತ್ಯಾಗರ್ತಿ, ಪೊನ್ನಂಪೇಟೆ, ಹೊನ್ನಾಳಿ, ಯಲ್ಲಾಪುರ, ಸುಳ್ಯ, ಕಿರವತ್ತಿ, ಉಪ್ಪಿನಂಗಡಿ, ಗಂಗಾವತಿ, ಮೈಸೂರು, ನಾಗಮಂಗಲದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X