ರಾಜ್ಯಾದ್ಯಂತ ನಾಲ್ಕು ದಿನ ಭಾರೀ ಮಳೆ, ರಾತ್ರಿ ಸುರಿದ ಮಳೆಗೆ ರಾಜಧಾನಿ ಜನ ಜೀವನ ಅಸ್ತವ್ಯಸ್ತ

Date:

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮತ್ತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ರಾಜಧಾನಿಯ ಮಧ್ಯಭಾಗದಲ್ಲಿ ಬುಧವಾರ ರಾತ್ರಿ ಪೂರ್ತಿ ಗುಡುಗು ಸಹಿತ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

- Advertisement -

ಬಂಗಾಳ ಕೊಲ್ಲಿಯಲ್ಲಿ ಮಳೆಗಾಳಿ ತೀವ್ರಗೊಂಡಿರುವ ಪರಿಣಾಮವಾಗಿ ಎಲ್ಲಡೆ ಮಳೆ ಸುರಿಯುತ್ತಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆಯಿಂದ ಬಿಸಿಲು ಹಾಗೂ ಸೆಕೆ ವಾತಾವರಣ ಕಂಡು ಬಂತು. ಮಧ್ಯಾಹ್ನ ನಗರದ ವಿವಿಧ ಭಾಗದಲ್ಲಿ ಮಳೆ ಸುರಿಯಿತು.ರಾತ್ರಿ 9.30ರ ಸುಮಾರಿಗೆ ರಾಜಾಜಿನಗರ, ವಿಜಯನಗರ, ಮೆಜೆಸ್ಟಿಕ್‌, ಸದಾಶಿವನಗರ, ವಿಧಾನಸೌಧ, ಶಾಂತಿನಗರ, ಚಾಮರಾಜಪೇಟೆ ಸೇರಿದಂತೆ ಮೊದಲಾದ ಕಡೆ ಧಾರಾಕಾರ ಮಳೆ ಸುರಿಯಿತು. ಮಳೆಯಿಂದ ಅವಾಂತರವ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಂಡಿಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಟ ನಡೆಸಿದ್ದು ಅಲ್ಲಲ್ಲಿ ಕಂಡು ಬಂತು.

ಬೆಂಗಳೂರಿನಲ್ಲಿ ಕೆಲವೆಡೆ ಮರಗಳು ಧರೆಗುರುಳಿವೆ. ಸಿಬಿ ರಸ್ತೆ, ಹೊರಮಾವು, ಕಸ್ತೂರಿನಗರ ಮತ್ತು ವಿಂಡ್ಸರ್ ಮ್ಯಾನರ್ ಸುತ್ತಮುತ್ತ ಸಂಚಾರ ನಿಧಾನವಾಗಿರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್​ ಮಾಡಿ, ಯಾವ ಮಾರ್ಗಗಳಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ ಮತ್ತು ವಾಹನ ಸಂಚಾರದ ಬಗ್ಗೆ ತಿಳಿಸಿದ್ದಾರೆ. ಸಿಬಿ ರಸ್ತೆ ಬಳಿ ನೀರು ನಿಂತಿರುವುದರಿಂದ ಎಎಸ್‌ಸಿ ಸೆಂಟರ್ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.

ಹೊರಮಾವು ಬಳಿ ನೀರು ನಿಂತಿರುವುದರಿಂದ ರಾಮಮೂರ್ತಿನಗರದ ಕಡೆಗೆ, ಇನ್ನು ಕಸ್ತೂರಿನಗರದ ಬಳಿ ನೀರು ನಿಂತಿರುವುದರಿಂದ ಹೆಬ್ಬಾಳ ಕಡೆಗೆ ಮತ್ತು ವಿಂಡ್ಸರ್ ಮ್ಯಾನರ್‌ ಬಳಿ ಕೂಡ ನೀರು ನಿಂತಿರುವುದರಿಂದ ಪಿಜಿ ಹಳ್ಳಿ ಕಡೆಗೆ ನಿಧಾನಗತಿಯ ಸಂಚಾರವಿರಲಿದೆ ಎಂದು ತಿಳಿಸಿದ್ದಾರೆ.

ಚಂದ್ರಿಕಾ ಹೊಟೇಲ್‌ನಿಂದ ಎಲ್‌ಆರ್‌ಡಿಇ ಜಂಕ್ಷನ್‌ ಕಡೆಗೆ ಹೋಗುವ ರಸ್ತೆಯಲ್ಲಿ, ಚಾಮರಾಜಪೇಟೆ 5ನೇ ಮುಖ್ಯ ರಸ್ತೆಯಿಂದ ಶಿವಶಂಕರ್ ವೃತ್ತದ ಕಡೆಗೆ ಮತ್ತು ಶಿವಶಂಕರ್ ವೃತ್ತದಿಂದ ಚಾಮರಾಜಪೇಟೆ 5ನೇ ಮುಖ್ಯ ರಸ್ತೆ ಕಡೆಗೆ ಹೋಗುವ ರಸ್ತೆಯಲ್ಲಿ ಮತ್ತು ಕಾಮಾಕ್ಷಿಪಾಳ್ಯ ಬಸ್ ನಿಲ್ದಾಣದ ಬಳಿ ಮರ ಬಿದ್ದಿರುವುದರಿಂದ ಸುಮನಹಳ್ಳಿ ಕಡೆಗೆ ನಿಧಾನಗತಿಯ ಸಂಚಾರವಿರಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...