ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಜೋರು ಮಳೆ, ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೂ ಅಡ್ಡಿ

Date:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಜೋರು ಮಳೆಯಾಗಿದೆ. ರಾಜಧಾನಿಯಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾನವಾಗಿತ್ತು. ಸಂಜೆ 5 ಗಂಟೆಗೆ ಆರಂಭವಾದ ಮಳೆ 8 ಗಂಟೆವರೆಗೂ ಸುರಿದಿದೆ.

- Advertisement -

ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧದ ಪಂದ್ಯ ಮಳೆಯಿಂದ ಇನ್ನೂ ಆರಂಭವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶನಿವಾರ ಸಂಜೆ ಬೆಂಗಳೂರಿನ ಶಾಂತಿನಗರ, ರಿಚ್ಮಂಡ್​ ಸರ್ಕಲ್​, ಕಾರ್ಪೊರೇಷನ್, ಕಬ್ಬನ್​ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್​.ಮಾರ್ಕೆಟ್, ಮೆಜೆಸ್ಟೆಕ್​, ರಾಜಾಜಿನಗರ, ಲಾಲ್​ಬಾಗ್​, ಜಯನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ.

ಇಂದು ರಾತ್ರಿ 7:30ಕ್ಕೆ ಆರ್​ಸಿಬಿ ವರ್ಸಸ್​ ಕೆಕೆಆರ್ ಪಂದ್ಯ ಆರಂಭವಾಗಲಿದೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನ ಮಳೆಯಾಗುತ್ತಿರುವುದರಿಂದ ಆರ್​ಸಿಬಿ ಅಭಿಮಾನಿಗಳಲ್ಲಿ ನಿರಾಶೆ ಮೂಡಿದೆ.

ಸಂಚಾರ ದಟ್ಟನೆ

ಭಾರಿ ಮಳೆಯಾಗುತ್ತಿರುವುದರಿಂದ ನಗರದ ಹಲವು ರಸ್ತೆಗಳ ಮೇಲೆ ನೀರು ನಿಂತಿದೆ. ಹೆಬ್ಬಾಳದಲ್ಲಿ ಮಳೆ ಬರುತ್ತಿರುವುದರಿಂದ ವೀರಣ್ಣಪಾಳ್ಯ ಕಡೆಯಿಂದ ಹೆಬ್ಬಾಳ ಕಡೆ ಹೋಗುವ ರಸ್ತೆಯಲ್ಲಿ ತೀವ್ರ ಸಂಚಾರದಟ್ಟಣೆ ಉಂಟಾಗಿದೆ.

ವರ್ತೂರು ಕಡೆಯಿಂದ, ವೈಟಫಿಲ್ಡ್ ಕಡೆಗೆ ಹೋಗುವ ಮಾರ್ಗದಲ್ಲಿ, ಕಸ್ತೂರಿನಗರ ಕಡೆಯಿಂದ ಹೆಬ್ಬಾಳ ಮುಖ್ಯ ರಸ್ತೆಯ ಕಡೆಗೆ ಹೋಗುವ ಮಾರ್ಗದಲ್ಲಿ, ಬಾಗಲೂರು ಕಡೆಯಿಂದ ನಗರ ಮತ್ತು ವಿಮಾನ ನಿಲ್ದಾಣದ ಕಡೆಗೆ ಸಂಚರಿಸುವ ರಸ್ತೆಯಲ್ಲಿ ಮತ್ತು ನ್ಯಾಷನಲ್ ಗೇಮ್ಸ್ ವಿಲೇಜ್ ಗೆಟ್​ನಿಂದ ಸೋನಿ ವರ್ಲ್ಡ್ ಜಂಕ್ಷನ್ ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ನಿಧಾನವಾಗಿ ಚಲಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಬೀದರ್‌: ಭಾರೀ ಮಳೆ

ಬೀದರ್ ಜಿಲ್ಲೆಯ ಹಲವು ಕಡೆ ಇಂದು ಸಾಯಂಕಾಲ ಗುಡುಗು ಸಹಿತವಾಗಿ ಭಾರಿ ಮಳೆಯಾಗಿದೆ. ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣವಿತ್ತು. ಸಾಯಂಕಾಲ ಸಮಯದಲ್ಲಿ ಮೋಡವಾಗಿ ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದೆ.

ಬೀದ‌ರ್ ನಗರ ಸೇರಿದಂತೆ ನೌಬಾದ್ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಭಾರಿ ಮಳೆಯಾಗಿದೆ. ಜಿಲ್ಲೆಯಲ್ಲಿ ಇಂದು ಸೇರಿದಂತೆ ರವಿವಾರ ಹಾಗೂ ಸೋಮವಾರ ಇದೆ ರೀತಿಯ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...