‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರ ಕಡಿಯಲು ಅನುಮತಿ ನೀಡಿದ ಹೈಕೋರ್ಟ್‌

Date:

  • ನಮ್ಮ ಮೆಟ್ರೋ ಕಾಮಗಾರಿ ವಿಳಂಬವಾದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ
  • ನಮ್ಮ ಮೆಟ್ರೋ ಸಾರ್ವಜನಿಕ ಹಾಗೂ ಪರಿಸರ ಸ್ನೇಹಿ: ಬಿಎಂಆರ್‌ಸಿಎಲ್‌ ಪರ ವಕೀಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರಗಳನ್ನು ಕಡಿಯಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್) ಸಂಸ್ಥೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

ದೂರವಾಣಿ ನಗರ ಮತ್ತು ಕೆಂಪಾಪುರ ಕ್ರಾಸ್ ನಡುವಿನ ಮೆಟ್ರೊ ಮಾರ್ಗದ ಮರಗಳನ್ನು ಕಡಿಯುವುದು/ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಮೆಟ್ರೊ ರೈಲು ನಿಗಮ(ಬಿಎಂಆರ್‌ಸಿಎಲ್) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

ಮೆಟ್ರೋ ಕಾಮಗಾರಿ ನಡೆಯುವ ಸುತ್ತಮುತ್ತ ಪ್ರದೇಶಗಳಲ್ಲಿ ಸಣ್ಣ ಕಾಡುಗಳ ನಿರ್ಮಾಣ ಮಾಡುವುದಕ್ಕೆ ನಿರ್ದೇಶನ ನೀಡುವಂತೆ ಪರಿಸರವಾದಿ ಟಿ. ದತ್ತಾತ್ರೇಯ ದೇವರೆ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಮತ್ತು ಎಂ.ಜೆ.ಎಸ್ ಕಮಲ್ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿ, ಆದೇಶಿಸಿದೆ.

ನಗರದ ದೂರವಾಣಿ ನಗರದಿಂದ ಕೆಂಪಾಪುರದವರೆಗಿನ ಮೆಟ್ರೋ ಮಾರ್ಗದ ಕಾಮಗಾರಿಗಾಗಿ 203 ಮರಗಳನ್ನು ತೆರವುಗೊಳಿಸಿ, 45 ಮರಗಳನ್ನು ಸ್ಥಳಾಂತರ ಮಾಡಬೇಕು ಹಾಗೂ ನಗರ ಪ್ರದೇಶದಲ್ಲಿ ಅರಣ್ಯ ಮಾಡುವಷ್ಟು ಸ್ಥಳಾವಕಾಶವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ

“ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ಕಾರಣಾಂತರಗಳಿಂದ ವಿಳಂಬವಾಗಿತ್ತು. ಇದೀಗ ಮತ್ತಷ್ಟು ವಿಳಂಬವಾದರೆ ಸಾರ್ವಜನಿಕರಿಗೆ ಇದರಿಂದ ದೊಡ್ಡ ಸಮಸ್ಯೆ ಆಗಲಿದೆ. ಹಾಗಾಗಿ, ಕಾಮಗಾರಿ ವೇಗವನ್ನು ಹೆಚ್ಚಳ ಮಾಡಲು ಪ್ರಯತ್ನಿಸಲಾಗುತ್ತಿದೆ. ನಗರದಲ್ಲಿ ಮೆಟ್ರೋ ರೈಲು ಯೋಜನೆ ದೊಡ್ಡ ಮಟ್ಟದ ಸಾರ್ವಜನಿಕರ ಹಿತಾಸಕ್ತಿ ಆಗಿದೆ” ಎಂದು ಬಿಎಂಆರ್‌ಸಿಎಲ್ ಪರ ವಕೀಲರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

“ನಮ್ಮ ಮೆಟ್ರೋ ಸಾರ್ವಜನಿಕ ಹಾಗೂ ಪರಿಸರ ಸ್ನೇಹಿಯಾಗಿದೆ. ಮೆಟ್ರೋದಲ್ಲಿ ಸಂಚರಿಸುವುದರಿಂದ ಸಮಯದ ಉಳಿತಾಯವಾಗಲಿದೆ. ವಾಹನ ದಟ್ಟಣೆ ಕಡಿಮೆಯಾಗುತ್ತದೆ. ಆರ್ಥಿಕವಾಗಿ ಲಾಭದಾಯಕವಾಗಿದೆ. ಹಾಗಾಗಿ, ಈ ಯೋಜನೆಯನ್ನು ಮುನ್ನಡೆಸಲು ಅಗತ್ಯವಿರುವ ಮರಗಳನ್ನು ತೆರವುಗೊಳಿಸಲು ಅವಕಾಶ ನೀಡಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ದಸರಾ ಉತ್ಸವ ಆಚರಣೆ; ಅನುದಾನ ಬಿಡುಗಡೆಗೆ ನಿಯೋಗ

ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ...

ವಂಚನೆ ಪ್ರಕರಣ | ಚೈತ್ರಾ ಹೆಸರಿನೊಂದಿಗೆ ‘ಕುಂದಾಪುರ’ ಬಳಕೆಗೆ ಆಕ್ಷೇಪ; ಕೋರ್ಟ್‌ನಲ್ಲಿ ದಾವೆ

ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಅವರು ಜೈಲು ಸೇರಿದ್ದಾರೆ. ಅವರ ಬಗ್ಗೆ...

ಬೆಂಗಳೂರು | ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

ತಾತಗುಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್, ಕರೆಂಟ್...

ಬೆಂಗಳೂರು | 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಖಾಸಗಿ ಅಪಾರ್ಟ್‌ಮೆಂಟ್‌ ಕಟ್ಟಡವೊಂದರ 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ...