ಆಮ್‌ ಆದ್ಮಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲು ಆದೇಶಿಸಿದ ಹೈಕೋರ್ಟ್‌

Date:

  • ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿ ಎಂದು ಅರ್ಜಿ ಸಲ್ಲಿಸಿದ್ದ ಆಪ್
  • ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಆಪ್‌ ರಾಜ್ಯ

ಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್‌ ಆದ್ಮಿಗೆ(ಆಪ್) ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ.

ಆಮ್ ಆದ್ಮಿ ರಾಷ್ಟ್ರೀಯ ಪಕ್ಷವಾಗುವ ಎಲ್ಲ ಷರತ್ತುಗಳನ್ನು ಪೂರೈಸಿದ್ದರೂ ರಾಷ್ಟ್ರೀಯ ಸ್ಥಾನಮಾನ ಪಡೆಯಲು ವಿಳಂಬವಾಗುತ್ತಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಎಎಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಪುರಸ್ಕರಿಸಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸಾಧನೆ ತೋರಿದ್ದ ಆಮ್ ಆದ್ಮಿ ರಾಷ್ಟ್ರೀಯ ಪಕ್ಷದ ಮಾನ್ಯತೆಗೆ ಅರ್ಹತೆಯನ್ನು ಪಡೆದುಕೊಂಡಿತ್ತು. ಆದರೆ, ಇಲ್ಲಿಯವರೆಗೂ ಮಾನ್ಯತೆ ನೀಡದಿರುವುದನ್ನು ಪ್ರಶ್ನಿಸಿ ಎಎಪಿ ಹೈಕೋರ್ಟ್‌ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ದರ್ಶನ್ ಜೈನ್ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿರಬೇಕು. ನಾಲ್ಕು ರಾಜ್ಯಗಳಲ್ಲಿ ಕನಿಷ್ಟ 6% ಮತ ಪಡೆದಿರಬೇಕು. ಅದರಂತೆ, ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಆಪ್‌ ರಾಜ್ಯ ಪಕ್ಷವಾಗಿದೆ.

ಆಮ್ ಆದ್ಮಿ ಪಕ್ಷದ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಪ್‌ಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...